2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ. 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ. ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ. -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1. 2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...