ಸಂಘದ ನಿಯೋಗದಿಂದ ಉಪ ಮುಖ್ಯಮಂತ್ರಿಗಳ ಭೇಟಿ - ಕಾಲೇಜು ಶಿಕ್ಷಣ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ಸಮಸ್ಯೆಗಳ ಕುರಿತು ಚರ್ಚೆ.
ಸಂಘದ ನಿಯೋಗದಿಂದ ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರಾದ ಶ್ರೀ ಅಶ್ವತ್ಥ ನಾರಾಯಣರವರನ್ನು ಭೇಟಿ ಮಾಡಿ ಕಾಲೇಜು ಶಿಕ್ಷಣ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಚರ್ಚಿಸಲಾದ ವಿಷಯಗಳು
• ಸರ್ಕಾರಿ ಪದವಿ ಕಾಲೇಜು, ಇಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಐ.ಟಿ.ಐ ಕಾಲೇಜಿನ ಭೋಧಕ ಸಿಬ್ಬಂದಿಗಳನ್ನು ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡು ಪ್ರಶಸ್ತಿಗೆ ಪರಿಗಣಿಸಲು ಆಗ್ರಹಿಸಲಾಯಿತು.
• ಕಾಲೇಜು ಶಿಕ್ಷಣ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿರುವ ಪದೋನ್ನತಿ ಹಾಗೂ ಇತರೆ ಸಮಸ್ಯೆಗಳ ಕುರಿತಂತೆ ಚರ್ಚಿಸಲು ಸಭೆ ಏರ್ಪಡಿಸುವುದು.
• ಕಾಲೇಜು ಶಿಕ್ಷಣ ಇಲಾಖೆಯ ಬೆರಳಚ್ಚುಗಾರರಿಗೆ ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ವೃಂದ ಬದಲಾವಣೆ ಮಾಡಿ ಆದೇಶ ಹೊರಡಿಸುವುದು.
• ಕಾಲೇಜು ಶಿಕ್ಷಣ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ಎಲ್ಲಾ ವೃಂದದ ಅಧಿಕಾರಿಗಳು ಮತ್ತು ನೌಕರರಿಗೆ ಶೀಘ್ರ ಪದೋನ್ನತಿ ನೀಡುವುದು.
ಮಾನ್ಯ ಸಚಿವರು ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಮೂಲಕ ಮುಂದಿನ ದಿನಗಳಲ್ಲಿ ಸರ್ಕಾರದಿಂದ ಶಿಕ್ಷಣ ದಿನಾಚರಣೆಯಲ್ಲಿ ಈ ವೃಂದವನ್ನು ಪರಿಗಣಿಸಿ ಮತ್ತು ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಲ್ಲಿನ ಸಮಸ್ಯೆಗಳ ಪರಿಹಾರಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆಗಳನ್ನು ಶೀಘ್ರವಾಗಿ ಏರ್ಪಡಿಸಲಾಗುವುದು ಎಂದು ಆಶ್ವಾಸನೆ ನೀಡಿದರು.
ಸಂಘದ ಮನವಿಗೆ ಸ್ಪಂದಿಸಿದ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರಾದ ಶ್ರೀ ಅಶ್ವತ್ಥ ನಾರಾಯಣರವರಿಗೆ ಧನ್ಯವಾದಗಳು.
Comments
Post a Comment