Skip to main content

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ನಗದುರಹಿತ ಚಿಕಿತ್ಸೆ - ನೌಕರರ ಸ್ನೇಹಿ ಆರೋಗ್ಯ ಯೋಜನೆ ರಾಜ್ಯ ಸರ್ಕಾರಿ‌ ನೌಕರರ ಎಲ್ಲಾ ಶಸ್ತ್ರ ಚಿಕಿತ್ಸೆ ಹಾಗೂ ಕಾಯಿಲೆಗಳಿಗೆ ಶೀಘ್ರದಲ್ಲೇ ಜಾರಿ.

ನಗದುರಹಿತ ಚಿಕಿತ್ಸೆ - ನೌಕರರ ಸ್ನೇಹಿ ಆರೋಗ್ಯ ಯೋಜನೆ ರಾಜ್ಯ ಸರ್ಕಾರಿ‌ ನೌಕರರ ಎಲ್ಲಾ ಶಸ್ತ್ರ ಚಿಕಿತ್ಸೆ ಹಾಗೂ ಕಾಯಿಲೆಗಳಿಗೆ ಶೀಘ್ರದಲ್ಲೇ ಜಾರಿ.


ಪ್ರಸ್ತುತ ಜಾರಿಯಲ್ಲಿರುವ "ಆರೋಗ್ಯ ಸಂಜೀವಿನಿ" ಆರೋಗ್ಯ ಯೋಜನೆಯು ರಾಜ್ಯದ ಸರ್ಕಾರಿ ನೌಕರರಿಗೆ ಹೆಚ್ಚು ಪ್ರಯೋಜನಕಾರಿಯಾಗಿ ಇರುವುದಿಲ್ಲ. ಇದನ್ನು ಮನಗಂಡ ಸಂಘವು ಈ ಆರೋಗ್ಯ ಯೋಜನಯಲ್ಲಿ ಹಲವಾರು ಮಾರ್ಪಾಡುಗಳನ್ನು ಮಾಡಿ ಒಂದು ಹೊಸ ಪ್ರಯೋಜನಕಾರಿ ಯೋಜನೆಯನ್ನು‌ ಜಾರಿಗೊಳಿಸುವಂತೆ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿತು.




ನಗದು ರಹಿತ  ಆರೋಗ್ಯ ಚಿಕಿತ್ಸೆ ಯೋಜನೆಯ ಮುಖ್ಯಾಂಶಗಳು

  • ಒಳರೋಗಿ - ಹೊರರೋಗಿ ಚಿಕಿತ್ಸಾ ವೆಚ್ಚ ಸಂಪೂರ್ಣ ನಗದುರಹಿತ.
  • ಎಲ್ಲಾ ವಿಧದ ಮೆಡಿಕಲ್ ಇಮೇಜಿಂಗ್ (ಸ್ಕ್ಯಾನಿಂಗ್), ಲ್ಯಾಬೋರೇಟರಿ ಪರೀಕ್ಷೆಗಳು ಒಳಗೊಂಡಂತೆ ಔಷಧಿಗಳು ಸಹ ಈ ಯೋಜನೆ ಅಡಿ ಉಚಿತವಾಗಿ ಲಭ್ಯವಾಗಲಿದೆ.
  • ಈ ಯೋಜನೆಯಡಿಯಲ್ಲಿ Organ Transplantation ಗೂ ಸಹ ಅವಕಾಶ ಕಲ್ಪಿಸಲಾಗಿದೆ.
  • ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್ ಸೇವೆಗೂ ಅವಕಾಶ ಮಾಡಿಕೊಡಲಾಗಿದೆ.


ಈ ಯೋಜನೆ ಜಾರಿಯಿಂದಾಗಿ ನಮ್ಮ ರಾಜ್ಯವು ಇಡೀ ದೇಶದಲ್ಲಿಯೇ ಪ್ರಥಮ ಬಾರಿಗೆ ಸರ್ಕಾರಿ ನೌಕರರಿಗೆ ಇಂತಹ ವಿಶಿಷ್ಟವಾದ ನಗದುರಹಿತ ಆರೋಗ್ಯ ಯೋಜನೆಯನ್ನು ಅನುಷ್ಠಾನಗೊಳಿಸಿದ ಹೆಗ್ಗಳಿಕೆಗೆ ಪಾತ್ರವಾಗಲಿದೆ.

ಮನವಿಗೆ ಸ್ಪಂದಿಸಿರುವ‌ ಸರ್ಕಾರವು ಎಲ್ಲಾ ಶಸ್ತ್ರ ಚಿಕಿತ್ಸೆ ಹಾಗೂ ಕಾಯಿಲೆಗಳಿಗೆ ನಗದುರಹಿತ ಚಿಕಿತ್ಸೆ ನೀಡುವ ಉದ್ದೇಶದಿಂದ ನೂತನ ‌ಆರೋಗ್ಯ ಯೋಜನೆಯನ್ನು ಜಾರಿಗೊಳಿಸಲು ಕಳೆದ ಬಜೆಟ್ ನಲ್ಲಿ ರೂ. 50.00 ಕೋಟಿ ಹಣವನ್ನು ಮೀಸಲಿರಿತ್ತು.


ಈ ಯೋಜನೆಯ ಅನುಷ್ಠಾನಗೊಳಿಸಲು ತಜ್ಞರೊಂದಿಗೆ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿರವರು ಸುಧೀರ್ಘವಾದ ಸಮಾಲೋಚನೆ ನಡೆಸಿದರು.
 ಹೆಚ್ಚಿನ  ಮಾಹಿತಿಗಾಗಿ ಸಂಪರ್ಕಿಸಿ
Facebook         Telegram:t.me/ksgeabangalore,      Blogspot.     Website.    WhatsApp      Youtube 
@syedKSGEA

Cashless Treatment -
Employee Friendly Health Scheme The State Government will soon implement all Surgical Treatments and Diseases of Employees.
The "Health Sanjeevini" health plan, currently in effect, will not be of many benefits to state employees. Realizing this, the association appealed to the government to make several changes to the health plan and implement a new benefit plan.
Highlights of a cashless health treatment plan
Inpatient - Outpatient treatment costs are completely cashless.
All types of medical imaging (scanning) and laboratory tests, including medicines, will be available free of charge.
Organ transplantation is also provided under this scheme.
An ambulance service is also allowed to take the patient to the hospital.
With the implementation of this plan, our state will be the first in the entire country to be proud of the implementation of this unique cashless health plan for government employees.

The government has responded to the budget with a budget of Rs. 50.00 crores were earmarked.

Shri CS, the President of the State, together with experts to implement the project. Shadaksari had a lengthy consultation.

 Contact us for more information
Facebook Telegram: t.me/ksgeabangalore, Blogspot. Website. WhatsApp Youtube
@syedKSGEA


Comments

  1. Good effort by KSGEA. 👌👌👏👏👏
    If this effort really approved.., then this become a milestone to KSGEA.
    All the best to KSGEA. 👍

    ReplyDelete

Post a Comment

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

Followers