ರಾಜ್ಯ ಮಟ್ಟದ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ - 2020 ಮಾನ್ಯ ನೌಕರ ಬಂಧುಗಳೇ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಸುಮಾರು 5.25 ಲಕ್ಷ ಸರ್ಕಾರಿ ನೌಕರರನ್ನು ಪ್ರತಿನಿಧಿಸುವ ರಾಷ್ಟ್ರದಲ್ಲಿಯೇ ಏಕೈಕ ಮಾದರಿ ಸಂಸ್ಥೆಯಾಗಿದ್ದು, ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಆನ್‍ಲೈನ್ ಮೂಲಕ ರಾಜ್ಯ ಮಟ್ಟದಲ್ಲಿ ಸರ್ಕಾರಿ ನೌಕರರ ಮಕ್ಕಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. 2019-2020ನೇ ಸಾಲಿನ ಎಸ್.ಎಸ್.ಎಲ್.ಸಿ. & ಪಿ.ಯು.ಸಿ. ಪರೀಕ್ಷೇಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅನ್‍ಲೈನ್ ಅರ್ಜಿಯ ಲಿಂಕ್ ಕೇಂದ್ರ ಸಂಘದ ಸಾಮಾಜಿಕ ಜಾಲತಾಣದ ಫೇಸ್‍ಬುಕ್, ಟ್ವಿಟರ್ ಖಾತೆ ಹಾಗೂ KSGEA NEWS Blogspot ನಲ್ಲಿ ಲಭ್ಯವಿದ್ದು, ಈ ಲಿಂಕ್‍ಗಳನ್ನು ಬಳಸಿ ಅರ್ಜಿ ಸಲ್ಲಿಸಬಹುದಾಗಿದೆ. -ಸಿ.ಎಸ್. ಷಡಾಕ್ಷರಿ, ಅಧ್ಯಕ್ಷರು. ಆನ್ ಲೈನ್ ಅರ್ಜಿ ಈ ಲಿಂಕ್‍ಗಳಲ್ಲಿ ಪಡೆಯಬಹುದಾಗಿದೆ. ü KSGEA FaceBook https://bit.ly/ksgeafb ü KSGEA News Blog : https://bit.ly/ksgeanews ü KSGEA Twitter : https://twitter.com/GovtState ü KSGEA Telegram App : t.me/ksgeabangalore ü Google Forms...
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025 ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು. ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...