ಚಿಕ್ಕಮಗಳೂರು ಜಿಲ್ಲೆಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿರವರು ಶಿಕ್ಷಕರೊಂದಿಗೆ ನಡೆಸಿದ ಸಂವಾದ-ಚರ್ಚೆ ಕಾರ್ಯಕ್ರಮ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿರವರು ಶಿಕ್ಷಕರೊಂದಿಗೆ ನಡೆಸಿದ ಸಂವಾದ-ಚರ್ಚೆ ಕಾರ್ಯಕ್ರಮ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ ಎಸ್ ಷಡಕ್ಷರಿ ರವರು, ಕೇಂದ್ರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಜಗದೀಶ ಗೌಡಪ್ಪ ಪಾಟೀಲ್, ಗೌರವಾಧ್ಯಕ್ಷರಾದ ಶ್ರೀ ಶಿವರುದ್ರಯ್ಯ ವಿ.ವಿ., ಖಜಾಂಚಿಗಳಾದ ಶ್ರೀ ಆರ್. ಶ್ರೀನಿವಾಸ್ ಹಾಗೂ ಉಪಾಧ್ಯಕ್ಷರಾದ ಶ್ರೀ ಎಂ.ವಿ. ರುದ್ರಪ್ಪ ಮತ್ತು ಚಿಕ್ಕಮಗಳೂರು ಜಿಲ್ಲಾ ಶಾಖೆ ಅಧ್ಯಕ್ಷರಾದ ಶ್ರೀ ದೇವೆಂದ್ರರವರು ಮತ್ತು ಜಿಲ್ಲೆಯ ಪದಾಧಿಕಾರಿಗಳು ಮತ್ತು ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಸುಮಾರು 500 ನೌಕರರು ಮತ್ತು ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಪ್ರಾಥಮಿಕ ಶಿಕ್ಷಣ ಇಲಾಖೆ ಶಾಲಾ ಶಿಕ್ಷಕರ ಹಲವಾರು ಸಮಸ್ಯೆ ಹಾಗೂ ಕುಂದುಕೊರತೆಗಳನ್ನು ಈಗಾಗಲೇ ಸರ್ಕಾರದ ಕಾರ್ಯದರ್ಶಿಗಳ, ಇಲಾಖೆಯ ಆಯುಕ್ತರ ಹಂತದಲ್ಲಿ ಸರ್ಕಾರಿ ನೌಕರರ ಸಂಘದಿಂದ ಪರಿಹಾರ ಮಾಡಲಾಗುತ್ತಿದ್ದು, ಮುಂದೆಯು ಸಹಾ ಶಿಕ್ಷಕರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಸಂಘವು ಸಕಾರಾತ್ಮಕವಾಗಿ ಸ್ಪಂದಿಸುತ್ತದೆ ಎಂದು ಸಭೆಗೆ ಮಾನ್ಯ ರಾಜ್ಯಾಧ್ಯಕ್ಷರು ತಿಳಿಸಿದರು.


Comments
Post a Comment