Skip to main content

Posts

Showing posts from January, 2021

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ನೌಕರರ ಜ್ವಲಂತ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ಸಲುವಾಗಿ ಸಚಿವರೊಂದಿಗೆ ಸಭೆ- ಶ್ರೀ ಸಿ.ಎಸ್.ಷಡಾಕ್ಷರಿ.

ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ನೌಕರರ  ಜ್ವಲಂತ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ಸಲುವಾಗಿ ಸಚಿವರೊಂದಿಗೆ ಸಭೆ- ಶ್ರೀ ಸಿ.ಎಸ್.ಷಡಾಕ್ಷರಿ ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ನೌಕರರ ಬಹಳ ದಿನಗಳ ಜ್ವಲಂತ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ಸಲುವಾಗಿ ಸಭೆ ಏರ್ಪಡಿಸುವಂತೆ ಸಂಘದ ವತಿಯಿಂದ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು .  ಈ ವಿಷಯವಾಗಿ ಮಾನ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ , ಸಭೆ ಏರ್ಪಡಿಸುವ ಸಲುವಾಗಿ ಸಂಘವು ಪ್ರಸ್ತಾಪಿಸಿರುವ ಅಂಶಗಳಿಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುತ್ತಾರೆ .  ಹೆ ಚ್ಚಿ ನ   ಮಾಹಿತಿಗಾಗಿ  ಸಂಪರ್ಕಿಸಿ: Follow this link to join KSGEA NEWS WhatsApp group:  https://chat.whatsapp.com/EYxueh5YUoc9asZJKfO4NS WhatsApp Facebook           Telegram:t.me/ksgeabangalore,          Website .     WhatsApp         Youtube   @syedKSGEA

1 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ನೌಕರರು KSGEA News Blogಅನ್ನು ಸಂದರ್ಶಿಸಿದ್ದಾರೆ.- ಎಲ್ಲಾ ಬ್ಲಾಗ್‌ ಓದುಗರಿಗೆ ಧನ್ಯವಾದಗಳು.

ನನ್ನ‌ ಎಲ್ಲಾ ಆತ್ಮೀಯ KSGEA News ಬ್ಲಾಗ್‌ ಓದುಗರಿಗೆ ಮತ್ತು YouTube ಚಾನಲ್  ವೀಕ್ಷಕರಿಗೂ ನನ್ನ ಅನಂತ ಅನಂತ ಧನ್ಯವಾದಗಳು.  ಈಗಿನ ಅತ್ಯಾಧುನಿಕ ಮಾಹಿತಿ ತಂತ್ರಜ್ಞಾನದ ಸಮಯದಲ್ಲಿ ಎಲ್ಲೊ ರಾಜ್ಯ ಸರ್ಕಾರಿ ನೌಕರರಿಗೆ ತಮ್ಮ ಸೇವಾವಧಿಯಲ್ಲಿ ಅಗತ್ಯವಾದ ‌ಹಲವಾರು ಮಾಹಿತಿಗಳನ್ನು  ಪಡೆಯಲು ಹಲವು ಸಮಸ್ಯೆಗಳು ಎದುರಿಸುತ್ತಿದ್ದು,  ಈ‌ ಸಮಸ್ಯೆಯನ್ನು ಪರಿಹರಿಸಲು ಕಳೆದ ಕೆಲ ತಿಂಗಳುಗಳ ಹಿಂದೆ ರಾಜ್ಯ ಸರ್ಕಾರಿ‌ ನೌಕರರಿಗೆ ಅಗತ್ಯವಿರುವ ಹಲವಾರು ವಿಷಯಗಳ, ಸೇವಾ ಸೌಲಭ್ಯಗಳ ಕುರಿತಾದ ವಿಷಯಗಳನ್ನು ಮಾಹಿತಿ ತಂತ್ರಜ್ಞಾನದ ಸಹಾಯದಿಂದ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಯೊಬ್ಬರಿಗೂ ತಲುಪಿಸುವ ಉದ್ದೇಶದೊಂದಿಗೆ KSGEA News Blog, YouTube Channel ಮತ್ತು Facebook Page ಅನ್ನು ಪ್ರಾರಂಭಿಸಲಾಯಿತು. ಅದರೆ ಇಷ್ಟು ‌ಕಡಿಮೆ ಸಮಯದಲ್ಲಿ ಈ‌ ಮಾಧ್ಯಮದ ಮೂಲಕ ನೀಡಲಾಗುವ ಮಾಹಿತಿಗಳು ಪಡೆದು‌ ತಾವುಗಳು‌ ನೀಡಿದ ಉತ್ತಮ ಪ್ರತಿಕ್ರಿಯೆಗೆ ನನ್ನ ಅನಂತ ಅನಂತ ಧನ್ಯವಾದಗಳು. ಈಗಾಗಲೇ KSGEA News Blog ಗೆ 1 ಲಕ್ಷಕ್ಕೂ ಹೆಚ್ಚಿನ ಪ್ರಮಾಣದಲ್ಲಿ ನೌಕರರು ಸಂದರ್ಶಿಸಿದ್ದು, YouTube ಚಾನಲ್ ನಲ್ಲಿ ‌1 ಸಾವಿರಕ್ಕೂ ಹೆಚ್ಚು ಸದಸ್ಯರು Subscribe ಆಗಿ ತಮಗೆ‌ ಬೇಕಾದ ಎಲ್ಲಾ ರೀತಿಯ ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ. ನಿಮ್ಮ ಈ ಉತ್ತಮ ಪ್ರತಿಕ್ರಿಯೆ ಈ ಮಾಧ್ಯಮದ ಮೂಲಕ ಇನ್ನೂ ಹೆಚ್ಚಿನ ಪ್ರಮಾಣ...

ಗಳಿಕೆ ರಜೆ ನಗದೀಕರಣ ಸೌಲಭ್ಯದ ಬಗ್ಗೆ ಸರ್ಕಾರದಿಂದ ಆದೇಶ.- ಸರ್ಕಾರಕ್ಕೆ ಹೃತ್ಪೂರ್ವಕ ಧನ್ಯವಾದಗಳು. - ಶ್ರೀ ಸಿ.ಎಸ್. ಷಡಾಕ್ಷರಿ, ರಾಜ್ಯಾಧ್ಯಕ್ಷರು,

ಗಳಿಕೆ ರಜೆ ನಗದೀಕರಣ ಸೌಲಭ್ಯದ ಬಗ್ಗೆ ಸರ್ಕಾರದಿಂದ ಆದೇಶ.-  ಸರ್ಕಾರಕ್ಕೆ ಹೃತ್ಪೂರ್ವಕ ಧನ್ಯವಾದಗಳು. - ಶ್ರೀ ಸಿ.ಎಸ್. ಷಡಾಕ್ಷರಿ, ರಾಜ್ಯಾಧ್ಯಕ್ಷರು,  ಕರ್ನಾಟಕ ನಾಗರೀಕ ಸೇವಾ ನಿಯಮಗಳ ನಿಯಮ 118 ( 2 ) ರ ಸೌಲಭ್ಯ ಪಡೆಯುವ ಸಲುವಾಗಿ , ಪ್ರತಿ ಕ್ಯಾಲೆಂಡರ್ ವರ್ಷದಲ್ಲಿ ( ಆಯಾ ವರ್ಷದ ಜನವರಿ 1 ರಿಂದ ಡಿಸೆಂಬರ್ 31 ರೊಳಗೆ ) 15 ದಿನಗಳಿಗೆ ಮೀರದ ಗಳಿಕೆ ರಜೆಯನ್ನು ಅಧ್ಯರ್ಪಿಸಿ , ರಜಾ ವೇತನಕ್ಕೆ ಸಮನಾದ ನಗದೀಕರಣ ಪಡೆಯಬಹುದಾದ ಸೌಲಭ್ಯವನ್ನು ದಿ : 01 / 01 / 2013 ರಿಂದ ಜಾರಿಗೊಳಿಸಲಾಗಿದೆ . ಕೋವಿಡ್ -19 ರ ಹಿನ್ನಲೆಯಲ್ಲಿ ಸರ್ಕಾರವು ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಹಿನ್ನಲೆಯಲ್ಲಿ 2021 ನೇ ಸಾಲಿನ ಕ್ಯಾಲೆಂಡರ್ ವರ್ಷ ದಿನಾಂಕ : 01/01/2021 ರಿಂದ ದಿನಾಂಕ : 31/12/2021 ರವರೆಗಿನ ಅವಧಿಗೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ಮೇಲೆ ಓದಲಾದ ( 2 ) ರ ಆದೇಶದಲ್ಲಿ ರದ್ದುಗೊಳಿಸಿ ಆದೇಶಿಸಿತ್ತು . ಪ್ರಸಕ್ತ ಸರ್ಕಾರವು 2021 ಅವಧಿಯ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಅವಕಾಶವನ್ನು ಪುನರುಜ್ಜಿವನಗೊಳಿಸಲು ಉದ್ದೇಶಿಸಿದ್ದು , ಈ ಹಿನ್ನೆಲೆಯಲ್ಲಿ ದಿ : 04 / 01 / 2021 ರ ಉಲ್ಲೇಖಿತ ( 2 ) ರಲ್ಲಿನ ಸರ್ಕಾರದ ಆದೇಶವನ್ನು ಹಿಂಪಡೆಯಲಾಗಿದೆ ಮತ್ತು ಈ ಕೆಳಕಂಡಂತೆ ಆದೇಶಿಸಿದೆ . ಸರ್ಕಾರಿ ಆದೇಶ ಸಂಖ್ಯೆ : ಆಇ 7 ( ಇ ) ಸೇನಿಸೇ 2020 ಬೆಂಗಳೂರು...

ಸರ್ಕಾರಿ ನೌಕರರ ನಿವೃತ್ತಿಗೆ 33 ವರ್ಷಗಳ ಸೇವೆ ಅಥವಾ 60 ವರ್ಷ ವಯಸ್ಸು ಪರಿಗಣನೆ ಬಗ್ಗೆ ಸ್ಪಷ್ಟಿಕರಣ. - ಶ್ರೀ ಸಿ.ಎಸ್.ಷಡಾಕ್ಷರಿ.

ಸರ್ಕಾರಿ ನೌಕರರ ನಿವೃತ್ತಿಗೆ 33 ವರ್ಷಗಳ ಸೇವೆ ಅಥವಾ 60 ವರ್ಷ ವಯಸ್ಸು ಪರಿಗಣನೆ ಬಗ್ಗೆ ಸ್ಪಷ್ಟಿಕರಣ. ರಾಜ್ಯ ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿಗೆ ಸಂಬಂಧಿಸಿದಂತೆ 33 ವರ್ಷಗಳ ಸೇವೆ ಅಥವಾ 60 ವರ್ಷ ವಯಸ್ಸು ಯಾವುದು ಮೊದಲೋ ಅದನ್ನು ಪರಿಗಣಿಸಿ , ಸೇವಾ ನಿವೃತ್ತಿಗೊಳಿಸುವ ಬಗ್ಗೆ ನೌಕರರಲ್ಲಿ ಉಹಾಪೋಹಗಳು ಹಬ್ಬಿ ನೌಕರರು ಗೊಂದಲಕ್ಕೀಡಾಗಿರುವುದನ್ನು ಸಂಘವು ಗಮನಿಸಿರುತ್ತದೆ . ವಾಸ್ತವವಾಗಿ ಇಂತಹ ಯಾವುದೇ ಪ್ರಸ್ತಾವನೆಗಳು ಸರ್ಕಾರ ಅಥವಾ ಸಂಘದ ಮುಂದೆ ಇರುವುದಿಲ್ಲ . ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯ ಸರ್ಕಾರಿ ನೌಕರರ ಹಕ್ಕು ಬಾಧ್ಯತೆಗಳ ರಕ್ಷಣೆಯಲ್ಲಿ ಬದ್ಧತೆಯನ್ನು ಹೊಂದಿದ್ದು , ನೌಕರರ ನಿವೃತ್ತಿ ವಯಸ್ಸಿನ ಬಗ್ಗೆ ಉಂಟಾಗಿರುವ ಉಹಾಪೋಹಗಳಿಗೆ ನೌಕರರು ಕಿವಿಗೊಡಬಾರದಾಗಿ ಸಂಘವು ಮನವಿ ಮಾಡುತ್ತದೆ .- ಸಿ.ಎಸ್.ಷಡಾಕ್ಷರಿ, ರಾಜ್ಯಾಧ್ಯಕ್ಷರು ಎಂದು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.

ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಗ್ರೇಡ್-1 ಮತ್ತು ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಜ್ವಲಂತ ಸಮಸ್ಯೆಗಳ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿರವರು ಇಂದು ನಡೆದ ಸಭೆಯಲ್ಲಿ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರ ಗಮನಕ್ಕೆ ತಂದು ಇಲಾಖಾ ಹಂತದಲ್ಲಿ ಇತ್ಯರ್ಥಪಡಿಸುವಂತೆ ಮನವಿ ಮಾಡಿದರು.

ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಗ್ರೇಡ್-1 ಮತ್ತು ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಸಭೆ-ಸಿ.ಎಸ್.ಷಡಾಕ್ಷರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಗ್ರೇಡ್-1 ಮತ್ತು ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಜ್ವಲಂತ ಸಮಸ್ಯೆಗಳ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿರವರು ಇಂದು ನಡೆದ ಸಭೆಯಲ್ಲಿ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರ ಗಮನಕ್ಕೆ ತಂದು ಇಲಾಖಾ ಹಂತದಲ್ಲಿ ಇತ್ಯರ್ಥಪಡಿಸುವಂತೆ ಮನವಿ ಮಾಡಿದರು. 1.            ದೈಹಿಕ ಶಿಕ್ಷಣ ಶಿಕ್ಷಕರನ್ನು ಸಹ ಶಿಕ್ಷಕರೆಂದು ಪರಿಗಣಿಸಿ , ಇವರೂ ಸಹ ಸೇವಾ ಜ್ಯೇಷ್ಠತೆಯನ್ವಯ ಬಡ್ತಿ ಹೊಂದಲು ಅವಕಾಶ ಕಲ್ಪಿಸಲು ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡುವುದು .   2.            ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿಯಲ್ಲಿ ಪ್ರೊ . ಎಲ್ . ವೈದ್ಯನಾಥನ್ ವರದಿಯಲ್ಲಿ ಪ್ರಸ್ತಾಪಿಸಿರುವಂತೆ ದೈಹಿಕ ಶಿಕ್ಷಣ ಶಿಕ್ಷಕರನ್ನು ಸಹ ಶಿಕ್ಷಕ ( ದೈ . ಶಿ ) ಎಂದು ಪರಿಗಣಿಸುವುದು .   3.            ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಹಾಗೂ ...

ಸಾರ್ವಜನಿಕ ಶಿಕ್ಷಣ ಇಲಾಖೆಯ ಲಿಪಿಕ ವೃಂದದ ಜ್ವಲಂತ ಸಮಸ್ಯೆಗಳ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿರವರು ಇಂದು ನಡೆದ ಸಭೆಯಲ್ಲಿ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರ ಗಮನಕ್ಕೆ ತಂದು ಇಲಾಖಾ ಹಂತದಲ್ಲಿ ಇತ್ಯರ್ಥಪಡಿಸುವಂತೆ ಮನವಿ ಮಾಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಲಿಪಿಕ ವೃಂದದ ಸಭೆ-ಸಿ.ಎಸ್.ಷಡಾಕ್ಷರಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಲಿಪಿಕ ವೃಂದದ  ಜ್ವಲಂತ ಸಮಸ್ಯೆಗಳ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿರವರು ಇಂದು ನಡೆದ ಸಭೆಯಲ್ಲಿ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರ ಗಮನಕ್ಕೆ ತಂದು ಇಲಾಖಾ ಹಂತದಲ್ಲಿ ಇತ್ಯರ್ಥಪಡಿಸುವಂತೆ ಮನವಿ ಮಾಡಿದರು.   1.             ಸಾರ್ವಜನಿಕ ಶಿಕ್ಷಣ ಇಲಾಖೆಯ ಲಿಪಿಕ ವೃಂದದ ವರ್ಗಕ್ಕೆ ಹಳೇಯ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಕಾಲಿಕವಾಗಿ ತಿದ್ದುಪಡಿ ತರುವುದು . ಎ ) ಗ್ರೂಪ್ ‘ ಸಿ ’ ಹುದ್ದೆಯಲ್ಲಿ ಬಡ್ತಿ ನೀಡಲು ಕನಿಷ್ಠ ನಿಲುಗಡೆ ಕಡಿಮೆ ಮಾಡುವುದು .( ಉದಾ : 5-2       ವರ್ಷಗಳ ನಿಲುಗಡೆ ನೀಡುವುದು )     ಬಿ ) ಗ್ರೂಪ್ ‘ ಬಿ ’ ವೃಂದದ ಲಿಪಿಕ ನೌಕರರಿಗೆ ಬಡ್ತಿ ನೀಡಲು ಕನಿಷ್ಠ ನಿಲುಗಡೆ ಅವಧಿಯನ್ನು ಐದು        ವರ್ಷದಿಂದ ಒಂದು   ವರ್ಷಕ್ಕೆ ಇಳಿಸುವುದು . 2.             ಸಾರ್ವಜನಿಕ ಶಿಕ್ಷಣ ಇಲಾಖೆಯ ಲಿಪಿಕ ವೃಂದದ ಎಲ್ಲಾ ವರ್ಗಗಳಿಗೆ ಮುಂಬಡ್ತಿ ...

ಪ್ರೌಢಶಾಲಾ ಶಿಕ್ಷಕರ ಜ್ವಲಂತ ಸಮಸ್ಯೆಗಳ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿರವರು ಇಂದು ನಡೆದ ಸಭೆಯಲ್ಲಿ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರ ಗಮನಕ್ಕೆ ತಂದು ಇಲಾಖಾ ಹಂತದಲ್ಲಿ ಇತ್ಯರ್ಥಪಡಿಸುವಂತೆ ಮನವಿ ಮಾಡಿದರು.

ಪ್ರೌಢಶಾಲಾ ಶಿಕ್ಷಕರ ಸಭೆ-ಸಿ.ಎಸ್.ಷಡಾಕ್ಷರಿ ಪ್ರೌಢಶಾಲಾ ಶಿಕ್ಷಕರ ಜ್ವಲಂತ ಸಮಸ್ಯೆಗಳ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿರವರು ಇಂದು ನಡೆದ ಸಭೆಯಲ್ಲಿ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರ ಗಮನಕ್ಕೆ ತಂದು ಇಲಾಖಾ ಹಂತದಲ್ಲಿ ಇತ್ಯರ್ಥಪಡಿಸುವಂತೆ ಮನವಿ ಮಾಡಿದರು. 1.             ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲಾ ವೃಂದದ ವೃಂದ ಮತ್ತು ನೇಮಕಾತಿ ನಿಯಮಗಳ ಸಮಗ್ರ ತಿದ್ದುಪಡಿ ಮಾಡುವುದು .   2.            ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಯಿಂದ ಪ್ರೌಢಶಾಲಾ ಹುದ್ದೆಗಳಿಗೆ ಪದೋನ್ನತಿ ಹೊಂದಿದ ಬಡ್ತಿ ಪ್ರೌಢಶಾಲಾ ಶಿಕ್ಷಕರುಗಳಿಗೆ ಪದೋನ್ನತಿಯಿಂದಾಗಿ 10, 15, 20, 25 ಮತ್ತು 30 ಸೇವಾ ವರ್ಷಗಳ ಕಾಲಬದ್ಧ ಮುಂಬಡ್ತಿಗಳು ಆರ್ಥಿಕ ಇಲಾಖೆಯ 2002 & 2012 ರ ಆದೇಶಗಳಿಂದಾಗಿ ಲಭ್ಯವಾಗದ ಕಾರಣ ಪದೋನ್ನತಿ ಶಿಕ್ಷಕರ ಜೊತೆ ಒಂದೇ ಸಮಯದಲ್ಲಿ ಸೇವೆಗೆ ಸೇರಿ ಪದೋನ್ನತಿ ಪಡೆಯದೆ , ಆಯ್ಕೆಯ ಹುದ್ದೆಯಲ್ಲಿ ಎಲ್ಲಾ 10, 15, 20, 25 ಮತ್ತು 30 ಸೇವಾ ವರ್ಷಗಳ ಕಾಲಬದ್ಧ ಮುಂಬಡ್ತಿಗಳನ್ನು ಪಡೆದ ಶಿಕ್ಷಕರುಗಳಿಗಿಂತ ಕಡಿಮೆ ವೇತನವನ್ನು ಪಡೆಯುತ್ತಿದ್ದಾರೆ . ಒಂದ...

ಪ್ರಾಥಮಿಕ ಶಾಲಾ ಶಿಕ್ಷಕರ ಜ್ವಲಂತ ಸಮಸ್ಯೆಗಳ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿರವರು ಇಂದು ನಡೆದ ಸಭೆಯಲ್ಲಿ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರ ಗಮನಕ್ಕೆ ತಂದು ಇಲಾಖಾ ಹಂತದಲ್ಲಿ ಇತ್ಯರ್ಥಪಡಿಸುವಂತೆ ಮನವಿ ಮಾಡಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಭೆ-ಸಿ.ಎಸ್.ಷಡಾಕ್ಷರಿ ಪ್ರಾಥಮಿಕ ಶಾಲಾ ಶಿಕ್ಷಕರ ಜ್ವಲಂತ ಸಮಸ್ಯೆಗಳ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿರವರು ಇಂದು ನಡೆದ ಸಭೆಯಲ್ಲಿ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರ ಗಮನಕ್ಕೆ ತಂದು ಇಲಾಖಾ ಹಂತದಲ್ಲಿ ಇತ್ಯರ್ಥಪಡಿಸುವಂತೆ ಮನವಿ ಮಾಡಿದರು.     1.             300 ಕ್ಕೂ ಹೆಚ್ಚು ಮಕ್ಕಳಿರುವ ಮಾದರಿ ಪ್ರಾಥಮಿಕ ಶಾಲೆಗಳಿಗೆ ಗ್ರೂಪ್ ‘ ಡಿ ’ ನೌಕರರನ್ನು ನೇಮಕಗೊಳಿಸುವುದು .   2.            ಮುಖ್ಯ ಶಿಕ್ಷಕರಿಗೆ 30 ದಿನಗಳ ಗಳಿಕೆ ರಜೆ ಮಂಜೂರು ಮಾಡುವುದು .   3.            ಸಿ . ಆರ್ . ಪಿ . ಹುದ್ದೆಗಳನ್ನು ಮೂರು ವರ್ಷಕ್ಕೊಮ್ಮೆ ಪುನರ್ ನಿಯೋಜಿಸುವುದು .   4.            ಒಮ್ಮೆ ಸಿ . ಆರ್ . ಪಿ . ಆಗಿ ಸೇವೆ ಸಲ್ಲಿಸಿದವರು ಮತ್ತೊಮ್ಮೆ ಅವಕಾಶ ನೀಡಬಾರದು .   5.            ಸಿ . ಆರ್ . ಪಿ...

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

Followers