2020-21ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುವ ಶಾಲಾ ವಿದ್ಯಾರ್ಥಿಗಳಿಗೆ ಕನಿಷ್ಠ ಹಾಜರಾತಿಯಿಂದ ವಿನಾಯಿತಿ ನೀಡುವ ಬಗ್ಗೆ.
ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗಲು ಶಾಲೆಯು ಕಾರ್ಯನಿರ್ವಹಿಸಲು ನಿಗಧಿಪಡಿಸಿರುವ ದಿನಗಳಿಗೆ ಅನುಸಾರ ಕನಿಷ್ಠ ಶೇ .75 ರಷ್ಟು ಹಾಜರಾತಿ ಕಡ್ಡಾಯವಾಗಿರುತ್ತದೆ . ಕೋವಿಡ್ -19 ಹರಡುತ್ತಿರುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ 2020-21ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳು ದಿನಾಂಕ : 01.01.2021 ರಿಂದ ಪ್ರಾರಂಭವಾಗಿದ್ದರೂ ಸಹ ವಿದ್ಯಾರ್ಥಿಗಳು ಶಾಲೆಗೆ ಹಾಜರಾಗುವುದನ್ನು ಕಡ್ಡಾಯಗೊಳಿಸಿರುವುದಿಲ್ಲ , ದಿನಾಂಕ : 25,11,2020 ರಂದು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು , ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ 75 ರಷ್ಟು ಹಾಜರಾತಿ ಕಡ್ಡಾಯವಾಗಿರಬೇಕೆಂಬ ಅಂಶದ ಬಗ್ಗೆ ಚರ್ಚಿಸಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಿದ ನಂತರ ಕನಿಷ್ಠ ಹಾಜರಾತಿಗೆ ವಿನಾಯಿತಿ ನೀಡಿ ಹಾಜರಾತಿ ಇಲ್ಲದಿದ್ದರೂ ಸಹ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಹಾಜರುಪಡಿಸಿಕೊಳ್ಳುವುದು ಸೂಕ್ತವೆಂದು ತೀರ್ಮಾನಿಸಲಾಯಿತು , ಅದರಂತೆ ಈ ಕೆಳಕಂಡಂತೆ ಆದೇಶಿಸಿದೆ . ಸರ್ಕಾರದ ಆದೇಶ ಸಂಖ್ಯೆ : ಇಪಿ 24 ಎಸ್‌ಎಲ್‌ಬಿ 2021 ದಿನಾಂಕ : 01/02/2021 ರಾಜ್ಯದಲ್ಲಿ 2020-21ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುವ ಶಾಲಾ ವಿದ್ಯಾರ್ಥಿಗಳಿಗೆ ಕನಿಷ್ಠ ಹಾಜರಾತಿಯಿಂದ ವಿನಾಯಿತಿ ನೀಡಿ ಆದೇಶಿಸಿದೆ .
Comments
Post a Comment