2021-22ನೇ ಸಾಲಿನ ಆಯ-ವ್ಯಯ ಮಂಡನೆ ಪೂರ್ವಭಾವಿ ಸಭೆಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀಯುತ ಬಿ.ಎಸ್. ಯಡಿಯೂರಪ್ಪರವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸಲ್ಲಿಸಲ್ಪಟ್ಟ ಬೇಡಿಕೆಗಳ ಮನವಿ.
2021-22ನೇ ಸಾಲಿನ ಆಯ-ವ್ಯಯ ಮಂಡನೆ ಪೂರ್ವಭಾವಿ ಸಭೆಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀಯುತ ಬಿ.ಎಸ್. ಯಡಿಯೂರಪ್ಪರವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸಲ್ಲಿಸಲ್ಪಟ್ಟ ಬೇಡಿಕೆಗಳ ಮನವಿ.
2021-22ನೇ ಸಾಲಿನ ಆಯ-ವ್ಯಯ ಮಂಡನೆ ಪೂರ್ವದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸುವ ಸಂಪ್ರದಾಯದಂತೆ ಇಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀಯುತ ಬಿ.ಎಸ್. ಯಡಿಯೂರಪ್ಪರವರು ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ನಿಯೋಗವನ್ನು ಚರ್ಚೆಗೆ ಆಹ್ವಾನಿಸಿದ್ದರು.
ಈ ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸಂಬಂಧಿಸಿದ ಈ ಕೆಳಕಂಡ ಬೇಡಿಕೆಗಳ ಮನವಿಯನ್ನು ಸಲ್ಲಿಸಿ, ಈಡೇರಿಸುವಂತೆ ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗಿದೆ.
• ಮೈಸೂರು ಆಡಳಿತ ತರಬೇತಿ ಕೇಂದ್ರದ ಮಾದರಿಯಲ್ಲಿ ರಾಜ್ಯದ ವಿಭಾಗಗಳಲ್ಲಿ ವಸತಿ ಸಹಿತ ಸರ್ಕಾರಿ ನೌಕರರ ತರಬೇತಿ ಕೇಂದ್ರಗಳನ್ನು ಸ್ಥಾಪಿಸುವುದು.
• ಜಿಲ್ಲಾ ಕೇಂದ್ರಗಳಲ್ಲಿ ಸರ್ಕಾರಿ ವಸತಿ ಗೃಹ ನಿರ್ಮಾಣ/ ನಿರ್ವಹಣೆಗೆ ಅನುದಾನ ಮಂಜೂರು ಮಾಡುವುದು.
• ಜಿಲ್ಲಾ-ತಾಲ್ಲೂಕು ಕೇಂದ್ರಗಳಲ್ಲಿ ಸರ್ಕಾರಿ ನೌಕರರ ಭವನ ನಿರ್ಮಾಣ ಹಾಗೂ ನಿರ್ವಹಣೆಗೆ ಅನುದಾನ ಮಂಜೂರು ಮಾಡುವುದು.
• ರಾಜ್ಯ ಸರ್ಕಾರಿ ನೌಕರರ ಕ್ರೀಡಾ ಮತ್ತು ಸಾಂಸ್ಕ0ತಿಕ ಹಾಗೂ ಇನ್ನಿತರ ಸಂಘದ ಕಾರ್ಯಕ್ರಮ/ನಿರ್ವಹಣೆ ಉದ್ದೇಶಕ್ಕೆ ಸಹಾಯಾನುದಾನ ಮಂಜೂರು ಮಾಡುವುದು.
• ರಾಜ್ಯದ ಸರ್ಕಾರಿ ನೌಕರರಿಗೆ - ಕುಟುಂಬದ ಸದಸ್ಯರಿಗೆ ನಗದು ರಹಿತ ಚಿಕಿತ್ಸಾ ಯೋಜನೆಯನ್ನು ಏಪ್ರಿಲ್ 2021ರಿಂದ ಜಾರಿಗೆ ತರುವುದು.
• ಸರ್ಕಾರಿ ನೌಕರರಿಗೆ ಸುಗಮ ಸೇವೆಗಾಗಿ ಕೆ.ಜಿ.ಐ.ಡಿ. ಕಛೇರಿಗಳ ಗಣಕೀಕರಣ ಕಾರ್ಯವನ್ನು ಏಪ್ರಿಲ್ 2021ರಿಂದ ಜಾರಿಗೆ ತರುವುದು.
• ರಾಜ್ಯ ಸರ್ಕಾರಿ ನೌಕರರ ಎಲ್ಲಾ ಸೇವೆಗಳನ್ನು ಆನಲೈನ್ ಮೂಲಕ ಜಾರಿಗೊಳಿಸುವುದು.
• ಇಲಾಖೆಗಳಲ್ಲಿ ಖಾಲಿಯಿರುವ ಸರ್ಕಾರಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಿ, ಹಾಲಿ ನೌಕರರ ಮೇಲಿನ ಕಾರ್ಯಬಾರ ಒತ್ತಡವನ್ನು ತಗ್ಗಿಸುವುದು.
• ರಾಜ್ಯದ ಶಿಕ್ಷಣ ಇಲಾಖೆಯಲ್ಲಿನ ನೌಕರರ ವೇತನ ತಾರತಮ್ಯವನ್ನು ಸರಿಪಡಿಸುವುದು. ಪ್ರಾಥಮಿಕ ಶಾಲಾ ಶಿಕ್ಷಕರು, ಪ್ರೌಢ ಶಾಲಾ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ 15,20,25,30 ವರ್ಷಗಳ ವೇತನ ಬಡ್ತಿಯಲ್ಲಿ ಉಂಟಾಗಿರುವ ತಾರತಮ್ಯವನ್ನು ಸರಿಪಡಿಸುವುದು.
• ಕೇಂದ್ರ ಸರ್ಕಾರಿ ನೌಕರರ ಮಾದರಿಯಲ್ಲಿ ರಾಜ್ಯದ ನೌಕರರಿಗೂ ವೇತನ ಪರಿಷ್ಕರಣೆ ಮಾಡುವುದು.
• ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು.
• ಮಾಸಿಕ ವೇತನ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಸಹಾಯಕರಿಗೆ ರೂ. 21,000/- ಕನಿಷ್ಠ ವೇತನ ನಿಗಧಿಪಡಿಸುವುದು.
• ಕರ್ನಾಟಕ ದಿನಗೂಲಿ ಕ್ಷೇಮಾಭಿವೃದ್ಧಿ ಅಧಿನಿಯಮ-2012 ರಲ್ಲಿ ಅಧಿಸೂಚಿಸಲ್ಪಟ್ಟ ಕ್ಷೇಮಾಭಿವೃದ್ಧಿ ದಿನಗೂಲಿ ನೌಕರರಿಗೆ ಸರ್ಕಾರದ ಆದೇಶದಂತೆ ಪೂರ್ಣ ಪ್ರಮಾಣದಲ್ಲಿ ಮನೆ ಬಾಡಿಗೆ ಭತ್ಯೆ, ವಾರ್ಷಿಕ ವೇತನ ಬಡ್ತಿ ಹಾಗೂ ನಗದು ರಹಿತ ಆರೋಗ್ಯ ಸೌಲಭ್ಯವನ್ನು ನೀಡುವುದು.
• ಬಿ.ಬಿ.ಎಂ.ಪಿ. ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸರ್ಕಾರಿ ನೌಕರರಿಗೆ ನೀಡುತ್ತಿರುವ ಮನೆ ಬಾಡಿಗೆ ಭತ್ಯೆ ದರ ಶೇ.24% ರಷ್ಟನ್ನು ಬೆಂಗಳೂರು ನಗರ ಜಿಲ್ಲೆಗೂ ವಿಸ್ತರಿಸುವುದು.
ಈ ಸಭೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿರವರು, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಜಗದೀಶ್ ಗೌಡಪ್ಪ ಪಾಟೀಲ್, ಖಜಾಂಚಿಗಳಾದ ಶ್ರೀ ಆರ್. ಶ್ರೀನಿವಾಸ್ ಮತ್ತು ಗೌರವಾಧ್ಯಕ್ಷರಾದ ಶ್ರೀ ಶಿವರುದ್ರಯ್ಯ ವಿ.ವಿ.ರವರು ಹಾಗೂ ಕೇಂದ್ರ ಸಂಘದ ಪದಾಧಿಕಾರಿಗಳು ಭಾಗವಹಿಸಿ ಮೇಲ್ಕಂಡ ಬೇಡಿಕೆಗಳ ಬಗ್ಗೆ ಮಾನ್ಯ ಮುಖ್ಯ ಮಂತ್ರಿಗಳು ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು.

Comments
Post a Comment