ಸರ್ಕಾರದ ವತಿಯಿಂದ ಆಚರಿಸಲಾಗುವ ಕಾರ್ಯಕ್ರಮಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲೆ ಮತ್ತು ತಾಲ್ಲೂಕು ಶಾಖೆಗಳ ಅಧ್ಯಕ್ಷರುಗಳನ್ನು ಆಹ್ವಾನಿಸುವ ಬಗ್ಗೆ ಸರ್ಕಾರದಿಂದ ಆದೇಶ.
ಸರ್ಕಾರದ ವತಿಯಿಂದ ಆಚರಿಸಲಾಗುವ ಕಾರ್ಯಕ್ರಮಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲೆ ಮತ್ತು ತಾಲ್ಲೂಕು ಶಾಖೆಗಳ ಅಧ್ಯಕ್ಷರುಗಳನ್ನು ಆಹ್ವಾನಿಸುವ ಬಗ್ಗೆ.
ಕರ್ನಾಟಕ ಸರ್ಕಾರಿ ನೌಕರರ ಸಂಘದ ಜಿಲ್ಲಾ ಹಾಗೂ ತಾಲ್ಲೂಕು ಶಾಖೆಗಳ ಅಧ್ಯಕ್ಷರುಗಳನ್ನು ಸರ್ಕಾರದ ವತಿಯಿಂದ ಆಚರಿಸುವ ದಿನಾಚರಣೆಗಳು , ಜಯಂತಿಗಳು . ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಹಾಗೂ ಸ್ಥಳೀಯ ಆಡಳಿತಕ್ಕೆ ಸಹಕಾರವನ್ನು ನೀಡುವ ಸಂಬಂಧ ಸೂಕ್ತ ಮಾರ್ಗಸೂಚಿಯನ್ನು ಹೊರಡಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿತ್ತು.
1 . ಸರ್ಕಾರದಿಂದ ಆಚರಿಸುವ ದಿನಾಚರಣೆ , ಜಯಂತಿಗಳು ಹಾಗೂ ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಪೂರ್ವಭಾವಿ ಸಭೆಗಳಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಹಾಗೂ ತಾಲ್ಲೂಕು ಅಧ್ಯಕ್ಷರುಗಳನ್ನು ಆಹ್ವಾನಿಸುವುದು ಮತ್ತು 2. ಆ ಕಾರ್ಯಕ್ರಮಗಳ ಆಹ್ವಾನ ಪತ್ರಿಕೆಯನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಹಾಗೂ ತಾಲ್ಲೂಕು ಅಧ್ಯಕ್ಷರುಗಳಿಗೆ ನೀಡಲು ಕ್ರಮ ಕೈಗೊಳ್ಳುವುದು , ಎಂದು ಸರ್ಕಾರದಿಂದ ಆದೇಶ ಹೊರಡಿಸಿದೆ.
Comments
Post a Comment