ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದ ಮಾಹಿತಿ. - ಸಿ.ಎಸ್.ಷಡಾಕ್ಷರಿ. ರಾಜ್ಯಾಧ್ಯಕ್ಷರು, ಕ.ರಾ.ಸ.ನೌಕರರ ಸಂಘ.
ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದ ಮಾಹಿತಿ
ಆತ್ಮೀಯ , ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕ ಬಂಧುಗಳೇ ...
ಇಂದು ನಡೆದ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ತಿದ್ದುಪಡಿಗೆ ಸುಗ್ರೀವಾಜ್ಞೆಯನ್ನು ಜಾರಿಗೆ ತರುವ ಸಂಬಂಧ ಶಿಕ್ಷಣ ಇಲಾಖೆ ಸಲ್ಲಿಸಿದ ಪ್ರಸ್ತಾವನೆಗೆ ಮಾನ್ಯ ಮುಖ್ಯಮಂತ್ರಿಗಳು , ಮಾನ್ಯ ಶಿಕ್ಷಣ ಸಚಿವರು ಮತ್ತು ಸಚಿವ ಸಂಪುಟದ ಎಲ್ಲಾ ಸಚಿವರು ಅನುಮೋದನೆ ನೀಡಿರುತ್ತಾರೆ . ಬಹಳ ದಿನಗಳಿಂದ ನನೆಗುದಿಗೆ ಬಿದ್ದಿದ್ದ ಶಿಕ್ಷಕರ ವರ್ಗಾವಣೆ ಅಂತಿಮ ಹಂತಕ್ಕೆ ತಲುಪಿದ್ದು , ಇಂದು ನಡೆದ ಸಚಿವ ಸಂಪುಟದಿಂದ ಅನುಮೋದನೆಗೊಂಡ ಪ್ರಸ್ತಾವನೆಯು ಒಂದೆರಡು ದಿನಗಳಲ್ಲಿ ಸಂಸದೀಯ ವ್ಯವಹಾರಗಳ ಇಲಾಖೆಯ ಮುಖಾಂತರ ಮಾನ್ಯ ರಾಜ್ಯಪಾಲರ ಅನುಮೋದನೆಗೆ ಸಲ್ಲಿಕೆಯಾಗಲಿದೆ . ಮಾನ್ಯ ರಾಜ್ಯಪಾಲರ ಅನುಮೋದನೆಯಾದ ನಂತರ ಶಿಕ್ಷಣ ಇಲಾಖೆಯಲ್ಲಿ ವರ್ಗಾವಣೆಗೆ ಸಂಬಂದಿಸಿದ ಸುಗ್ರೀವಾಜ್ಞೆ ಆದೇಶ ಹೊರಬೀಳಲಿದೆ . ಶಿಕ್ಷಕರ ವರ್ಗಾವಣೆಯ ತಿದ್ದುಪಡಿ ಸುಗ್ರೀವಾಜ್ಞೆ ಪ್ರಸ್ತಾವನೆಯನ್ನು ಅನುಮೋದಿಸಲು ಕಾರಣೀಭೂತರಾದ ನಾಡಿನ ಹೆಮ್ಮೆಯ ಮುಖ್ಯಮಂತ್ರಿಗಳು ಮಾನ್ಯ ಶಿಕ್ಷಣ ಸಚಿವರು ಹಾಗೂ ಸಚಿವ ಸಂಪುಟದ ಎಲ್ಲಾ ಸಚಿವರಿಗೆ ರಾಜ್ಯದ ಸಮಸ್ತ ಶಿಕ್ಷಕ ಬಂಧುಗಳ ಪರವಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಅಭಿನಂದನೆಗಳನ್ನು ಸಲ್ಲಿಸುತ್ತದೆ .
( ಸಿ.ಎಸ್.ಷಡಾಕ್ಷರಿ ) ರಾಜ್ಯಾಧ್ಯಕ್ಷರು
Thanks for doing your valuable work sir.Many Teachers are eagerly waiting for transfer good luck.
ReplyDelete