ಕೋವಿಡ್ -19 ಸೋಂಕು ನಿವಾರಣೆಯಲ್ಲಿ ಕ್ಷೇತ್ರ ಹಾಗೂ ಸಮುದಾಯ ಹಂತಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಸಹಾಯಕರೂ ಸೇರಿದಂತೆ ಇತರೆ ಇಲಾಖೆಗಳ ಸಿಬ್ಬಂದಿಗಳಿಗೆ ಸುರಕ್ಷತಾ ಕಿಟ್'ಗಳನ್ನು ವಿತರಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳಿಗೆ ಕೇಂದ್ರ ಸಂಘದಿಂದ ಮನವಿ
ಕೋವಿಡ್ -19 ಸೋಂಕು ನಿವಾರಣೆಯಲ್ಲಿ ಕ್ಷೇತ್ರ ಹಾಗೂ ಸಮುದಾಯ ಹಂತಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಸಹಾಯಕರೂ ಸೇರಿದಂತೆ ಇತರೆ ಇಲಾಖೆಗಳ ಸಿಬ್ಬಂದಿಗಳಿಗೆ ಸುರಕ್ಷತಾ ಕಿಟ್'ಗಳನ್ನು ವಿತರಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳಿಗೆ ಕೇಂದ್ರ ಸಂಘದಿಂದ ಮನವಿ
ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ವ್ಯಾಪಿಸುತ್ತಿರುವ ಕೋವಿಡ್ -19 ಎರಡನೇ ಅಲೆ ಸೋಂಕು ನಿವಾರಣೆಗೆ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವುದು ಸ್ವಾಗತಾರ್ಹ . ಸರ್ಕಾರವು ಸೋಂಕು ನಿವಾರಣೆಗೆ ಕೈಗೊಳ್ಳುತ್ತಿರುವ ಕ್ರಮಗಳ ಅನುಷ್ಠಾನದಲ್ಲಿ ರಾಜ್ಯ ಸರ್ಕಾರಿ ನೌಕರರು ಅದರಲ್ಲೂ ವಿಶೇಷವಾಗಿ ಪೊಲೀಸ್ , ಆರೋಗ್ಯ ಕಂದಾಯ , ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ , ಶಿಕ್ಷಣ ಇಲಾಖೆ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿ / ನೌಕರರು ಜೀವದ ಹಂಗು ತೊರೆದು ಹಗಲಿರುಳು ಶ್ರಮಿಸುತ್ತಿದ್ದಾರೆ . ಕೋವಿಡ್ -19 ಕರ್ತವ್ಯನಿರತ ಅಧಿಕಾರಿ ಹಾಗೂ ಸಿಬ್ಬಂದಿಗಳಲ್ಲಿ ಹಲವರು ಸೋಂಕಿಗೆ ಸಿಲುಕಿ ಮರಣ ಹೊಂದುತ್ತಿರುವ ಪ್ರಕರಣಗಳು ದಿನೇ ದಿನೇ ವರದಿಯಾಗುತ್ತಿವೆ , ಕೋವಿಡ್ -19 ಕರ್ತವ್ಯನಿರತ ಸರ್ಕಾರಿ ಅಧಿಕಾರಿ / ನೌಕರರ ಸುರಕ್ಷತೆ ದೃಷ್ಟಿಯಿಂದ ವಿಶೇಷವಾಗಿ ಕ್ಷೇತ್ರ ಹಾಗೂ ಸಮುದಾಯ ಹಂತಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಇಲಾಖೆಯ ಆರೋಗ್ಯ ಸಹಾಯಕರೂ ಸೇರಿದಂತೆ ಇತರೆ ಎಲ್ಲಾ ಇಲಾಖೆಗಳ ಅಧಿಕಾರಿ / ನೌಕರ ಆರೋಗ್ಯ ಕಾಪಾಡುವ ಹಿನ್ನೆಲೆಯಲ್ಲಿ ಈ ಕೆಳಕಂಡ ಪರಿಕರಗಳನ್ನು ಹೊಂದಿರುವ ' ಸುರಕ್ಷತಾ ಕಿಟ್ ' ಹಾಗೂ ಸೌಲಭ್ಯಗಳನ್ನು ಒದಗಿಸುವಂತೆ ಕೋರಿದೆ . ಕ್ಷೇತ್ರ ಹಾಗೂ ಸಮುದಾಯ ಹಂತದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ವರ್ಗದ ಸಿಬ್ಬಂದಿಗಳಿಗೆ ಸ್ಯಾನಿಟೈಸರ್ , ಮಾಸ್ , ಕೈ ಮತ್ತು ಮುಖಗವಸು , ಪಿ.ಪಿ.ಇ , ಕಿಟ್ ಹಾಗೂ ಪ್ರಾಥಮಿಕ ಹಂತದ ಪ್ರಥಮ ಚಿಕಿತ್ಸೆಯ ಔಷಧಿಗಳನ್ನು ಹೊಂದಿರುವ ಸುರಕ್ಷತಾ ಕಿಟ್.
• ಕೋವಿಡ್ ಸೋಂಕು ನಿಯಂತ್ರಣ ಕಾರ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಇಲಾಖೆಗಳ ನೌಕರರು ಸೋಂಕಿಗೆ ಸಿಲುಕಿದ ಸಂದರ್ಭದಲ್ಲಿ ಅಂತಹ ಸಿಬ್ಬಂದಿಗಳಿಗೆ ಪ್ರಥಮ ಆದ್ಯತೆಯಲ್ಲಿ ವೆಂಟಿಲೇಟರ್ ಸೌಲಭ್ಯವಿರುವ ಹಾಸಿಗೆಗಳನ್ನು ಕಾಯ್ದಿರಿಸುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಕೇಂದ್ರ ಸಂಘದಿಂದ ಮನವಿ ಸಲ್ಲಿಸಲಾಯಿತು.
Comments
Post a Comment