ಸರ್ಕಾರಿ ಕಾರ್ನರ್ ನೌಕರಿ ಕಿರಿಕಿರಿಗೆ ಪರಿಹಾರ: ಲ . ರಾಘವೇಂದ್ರ , ಸೇವಾ ಕಾನೂನು ತಜ್ಞರವರಿಂದ( 20 ವರ್ಷದ ಸೇವಾವಧಿಯ ವಿಶೇಷ ವೇತನ ಬಡ್ತಿ).
ಸರ್ಕಾರಿ ಕಾರ್ನರ್ ನೌಕರಿ ಕಿರಿಕಿರಿಗೆ ಪರಿಹಾರ: ಲ . ರಾಘವೇಂದ್ರ , ಸೇವಾ ಕಾನೂನು ತಜ್ಞರವರಿಂದ.
ಪ್ರಶ್ನೆ
ನಾನು ಪ್ರಾಥಮಿಕ ಶಾಲಾ ಶಿಕ್ಷಕನಾಗಿ 25. 9.1992 ರಲ್ಲಿ ಸೇರಿದೆ . 5. 6. 2001 ರಿಂದ ಪ್ರೌಢಶಾಲಾ ಶಿಕ್ಷಕ ಹುದ್ದೆಗೆ ಪದೋನ್ನತಿ ಹೊಂದಿ 10 ವರ್ಷಗಳ ಕಾಲಮಿತಿ , 15 ವರ್ಷದ ಸ್ವಯಂಚಾಲಿತ ಬಡ್ತಿಗಳನ್ನು ಪಡೆದಿದ್ದೇನೆ ನಾನೀಗ 20 ವರ್ಷದ ಸೇವಾವಧಿಯ ವಿಶೇಷ ವೇತನ ಬಡ್ತಿಗೆ ಅರ್ಹನಾಗುತ್ತೇನೆಯೇ ?
9.5.2002 ರ ಸರ್ಕಾರಿ ಆದೇಶ ಸಂಖ್ಯೆ : ಎಡಿ 13 ಎಸ್‌ಆರ್‌ಪಿ 2002 ರ ಕಂಡಿಕ 6 ರಂತೆ ಈಗಾಗಲೇ ಕನಿಷ್ಠ ಪದೋನ್ನತಿ ಪಡೆದಿರುವ ಸರ್ಕಾರಿ ನೌಕರರಿಗೆ ಒಂದು ಹೆಚ್ಚುವರಿ ವೇತನ ಲಭ್ಯವಾಗುವುದಿಲ್ಲ . ನೀವು ಈಗಾಗಲೇ ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲಾ ಶಿಕ್ಷಕರಾಗಿ ಪದೋನ್ನತಿ ಹೊಂದಿರುವುದರಿಂದ ಈ ಹೆಚ್ಚುವರಿ ವೇತನ ಬಡ್ತಿಗೆ ಅರ್ಹರಾಗುವುದಿಲ್ಲ .
ಹೆಚ್ಚಿನ ವಿವರಗಳಿಗೆ ಇದೇ . ಹೆಚ್ಚಿನ ವಿವರಗಳಿಗೆ ಇದೇ ಲೇಖಕರ ' ಕರ್ನಾಟಕ ಸರ್ಕಾರಿ ಸೇವಾ ನಿಯಮಗಳು 'ಪುಸ್ತಕ ನೋಡಬಹುದು .
ಕೃಪೆ : ವಿಜಯವಾಣಿ, ಕನ್ನಡ ದಿನಪತ್ರಿಕೆ. ಮತ್ತು ಲ . ರಾಘವೇಂದ್ರ , ಸೇವಾ ಕಾನೂನು ತಜ್ಞ.
ಲ.ರಾಘವೇಂದ್ರರವರ ಸೇವಾ ಸೌಲಭ್ಯಗಳ ಪುಸ್ತಕ ಗಳಿಗಾಗಿ ಈ ಕೆಳಗಿನ ಲಿಂಕ್ ಗೆ ಭೇಟಿ ನೀಡಿ.
ಪ್ರತಿವಾರ ಹೊಸ ಪ್ರಶ್ನೋತ್ತರಗಳು ಬ್ಲಾಗ್ ನಲ್ಲಿ ಲಭ್ಯವಿರುತ್ತದೆ.



Comments
Post a Comment