ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಶಿಕ್ಷಕರಿಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಅವಕಾಶ ಮಾಡಿಕೊಡುವ ಬಗ್ಗೆ ಮಾನ್ಯ ಸಚಿವರಿಗೆ ಮನವಿ - ಶ್ರೀ ಸಿ.ಎಸ್.ಷಡಾಕ್ಷರಿ.
ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಶಿಕ್ಷಕರಿಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಅವಕಾಶ ಮಾಡಿಕೊಡುವ ಬಗ್ಗೆ ಮಾನ್ಯ ಸಚಿವರಿಗೆ ಮನವಿ - ಶ್ರೀ ಸಿ.ಎಸ್.ಷಡಾಕ್ಷರಿ.
2021-22ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಶೈಕ್ಷಣಿಕ ಚಟುವಟಿಕೆಗಳನ್ನು ದಿನಾಂಕ : 15-06-2021 ರಿಂದ ಪ್ರಾರಂಭಿಸಲು ಯೋಜಿಸಲಾಗಿದ್ದು , ಕೋವಿಡ್ 19 ರ ಎರಡನೆ ಅಲೆಯು ವ್ಯಾಪಕವಾಗಿರುವ ಇಂತಹ ಪ್ರತಿಕೂಲ ಸನ್ನಿವೇಶದಲ್ಲಿ ಭೌತಿಕವಾಗಿ ಶಾಲೆಯನ್ನು ಪ್ರಾರಂಭಿಸುವುದರಿಂದ ಈ ಕೆಳಕಂಡ ಸಮಸ್ಯೆಗಳನ್ನು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಎದುರಿಸಬೇಕಾಗಿರುತ್ತದೆ .
1. ರಾಜ್ಯ ಸರ್ಕಾರವು 11 ಜಿಲ್ಲೆಗಳಲ್ಲಿ ಲಾಕ್‌ಡೌನ್ ನಿರ್ಬಂಧಗಳನ್ನು ಮುಂದುವರೆಸಿದ್ದು , ಶಿಕ್ಷಕರು ಮತ್ತು ಮಕ್ಕಳು ಶಾಲೆಗೆ ಹಾಜರಾಗಲು ಸಂಚಾರದ ವ್ಯವಸ್ಥೆ ಇಲ್ಲದೆ ತುಂಬಾ ಎದುರಿಸಬೇಕಾಗುತ್ತದೆ .
2. ಶಾಲಾ ಕೊಠಡಿಗಳಲ್ಲಿ ಶಿಕ್ಷಕರು ಮತ್ತು ಮಕ್ಕಳು ಒಟ್ಟಾಗಿ ಸೇರುವುದರಿಂದ ಸೋಂಕು ಉಲ್ಬಣಗೊಳ್ಳುವ ಸಾಧ್ಯತೆ ಹೆಚ್ಚಾಗಿರುತ್ತದೆ .
3. ತಜ್ಞರ ಸಮಿತಿ ತಿಳಿಸಿರುವಂತೆ ಕೋವಿಡ್ 19 ರ 3 ನೇ ಅಲೆ ಬರುವ ಸಾಧ್ಯತೆ ಹೆಚ್ಚಾಗಿರುವ ಕಾರಣ ಭೌತಿಕವಾಗಿ ಶಾಲೆಗಳನ್ನು ಪ್ರಾರಂಭಿಸುವುದರಿಂದ ಶಿಕ್ಷಕರು ಹಾಗೂ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುತ್ತದೆ .
4. ಶಿಕ್ಷಕರು ಹಾಗೂ ಮಕ್ಕಳಿಗೆ ಪೂರ್ಣ ಪ್ರಮಾಣದಲ್ಲಿ ಕೋವಿಡ್ ಲಸಿಕೆಯನ್ನು ಹಾಕಿರುವುದಿಲ್ಲ . ಕಾರಣ ಕೊರೊನಾ ಸೋಂಕು ತಗುಲುವ ಸಾಧ್ಯತೆ ಹೆಚ್ಚಾಗಿರುತ್ತದೆ . ಭೌತಿಕವಾಗಿ ಶಾಲೆಗಳನ್ನು ಪ್ರಾರಂಭಿಸುವುದರಿಂದ ಶಿಕ್ಷಕರು ಹಾಗೂ ಮಕ್ಕಳ ಮೇಲೆ ಮೇಲ್ಕಂಡ ದುಷ್ಪರಿಣಾಮಗಳು ಉಂಟಾಗುವುದರಿಂದ ದಾಖಲಾತಿ ಪ್ರಕ್ರಿಯೆ ಹಾಗೂ ದೈನಂದಿನ ಶೈಕ್ಷಣಿಕ ಚಟುವಟಿಕೆಗಳಿಗೆ ಅಡಚಣೆಯಾಗದಂತೆ ಹಾಗೂ ಶಿಕ್ಷಕರು ಮತ್ತು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುವವರೆಗೂ ಆನ್‌ಲೈನ್ ತರಗತಿಗಳನ್ನು ಏರ್ಪಡಿಸುವ ಮೂಲಕ ಶಾಲಾ - ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಎಲ್ಲಾ ಕರ್ತವ್ಯಗಳನ್ನು ಮನೆಯಿಂದಲೇ ನಿರ್ವಹಿಸಲು ( Work from home ) ಅವಕಾಶ ಮಾಡಿಕೊಡಬೇಕೆಂದು ಕೋರಿದೆ .
Comments
Post a Comment