ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಶಿಶುಪಾಲನಾ ರಜೆ ಮಂಜೂರು ಮಾಡುವ ಕುರಿತು ಸರ್ಕಾರದಿಂದ ಆದೇಶ ಸರ್ಕಾರಕ್ಕೆ ಹೃತ್ಪೂರ್ವಕ ಧನ್ಯವಾದಗಳು. - ಶ್ರೀ ಸಿ.ಎಸ್. ಷಡಾಕ್ಷರಿ, ರಾಜ್ಯಾಧ್ಯಕ್ಷರು,
ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಶಿಶುಪಾಲನಾ ರಜೆ ಮಂಜೂರು ಮಾಡುವ ಕುರಿತು ಸರ್ಕಾರದಿಂದ ಆದೇಶ ಸರ್ಕಾರಕ್ಕೆ ಹೃತ್ಪೂರ್ವಕ ಧನ್ಯವಾದಗಳು. - ಶ್ರೀ ಸಿ.ಎಸ್. ಷಡಾಕ್ಷರಿ, ರಾಜ್ಯಾಧ್ಯಕ್ಷರು.
ಸರ್ಕಾರಿ ಆದೇಶ ಸಂಖ್ಯೆ : ಆಇ 49 ) ಸೇನಿಸೇ 2021 ಬೆಂಗಳೂರು , ದಿನಾಂಕ : 21.06.2021 ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಈ ಕೆಳಕಂಡ ಷರತ್ತುಗಳ ಮೇರೆಗೆ ಇಡೀ ಸೇವಾವಧಿಯಲ್ಲಿ ಗರಿಷ್ಟ ಆರು ತಿಂಗಳವರೆಗೆ ಅಂದರೆ 180 ದಿನಗಳ “ ಶಿಶುಪಾಲನಾ ರಜೆ " ಯನ್ನು , ರಜೆಯನ್ನು ಮಂಜೂರು ಮಾಡುವ ಸಕ್ಷಮ ಪ್ರಾಧಿಕಾರವು ಮಂಜೂರು ಮಾಡತಕ್ಕದ್ದು . i ) ಮಹಿಳಾ ಸರ್ಕಾರಿ ನೌಕರಳು ಹೊಂದಿರುವ ಮಕ್ಕಳ ಸಂಖ್ಯೆಯನ್ನು ಪರಿಗಣಿಸದೆ , ಅತ್ಯಂತ ಕಿರಿಯ ಮಗುವು 18 ವರ್ಷ ತಲುಪುವವರೆಗಿನ ಅವಧಿಗೆ ಮಾತ್ರ ಈ ರಜೆಯ ಸೌಲಭ್ಯಕ್ಕೆ ಅರ್ಹರಾಗತಕ್ಕದ್ದು . ii ) ಈ ರಜೆಯ ಅವಧಿಯಲ್ಲಿ ಅವಳು ರಜೆಯ ಮೇಲೆ ಹೋಗುವ ನಿಕಟ ಪೂರ್ವದಲ್ಲಿ ಪಡೆಯಲರ್ಹವಿರುವ ಸಂಪೂರ್ಣ ವೇತನಕ್ಕೆ ಸಮನಾದ ರಜೆ ಸಂಬಳಕ್ಕೆ ಅರ್ಹರಾಗತಕ್ಕದ್ದು . iii ) ಪ್ರತಿ ಬಾರಿಯ ಈ ರಜೆ ಮಂಜೂರಾತಿಯು ಕನಿಷ್ಟ 15 ದಿನಗಳಿಗಿಂತ ಕಡಿಮೆ ಇರಬಾರದು . iv ) ಮಹಿಳಾ ಸರ್ಕಾರಿ ನೌಕರಳು ಈ ರಜೆಯನ್ನು ಸಾಂದರ್ಭಿಕ ರಜೆಯ ಹೊರತಾಗಿ , ನಿಯಮಾನುಸಾರ ಪಡೆಯಲರ್ಹವಿರುವ ಅಸಾಧಾರಣ ರಜೆಯೂ ಒಳಗೊಂಡಂತೆ ಇತರೆ ರಜೆಯೊಂದಿಗೆ ಸಂಯೋಜಿಸಿ ಪಡೆಯಬಹುದು . v ) ಈ ರಜೆಯನ್ನು ಯಾವುದೇ ರಜೆ ಲೆಕ್ಕದಿಂದ ಕಳೆಯತಕ್ಕದ್ದಲ್ಲ . ಉಪಯೋಗಿಸಿಕೊಳ್ಳದ ಈ ಸೌಲಭ್ಯದ ಸಂಬಂಧದಲ್ಲಿನ ರಜೆಯನ್ನು ಗಳಿಕೆ ರಜೆ ಲೆಕ್ಕಕ್ಕೆ ಜಮೆಗೊಳಿಸಲು / ನಗದೀಕರಿಸಲು ಅವಕಾಶವಿರುವುದಿಲ್ಲ . vi ) ಬುದ್ದಿಮಾಂದ್ಯ / ಅಂಗವಿಕಲ ಮಕ್ಕಳನ್ನು ಹೊಂದಿರುವ ಸರ್ಕಾರಿ ಮಹಿಳಾ ನೌಕರರಿಗೆ ಮಂಜೂರು ಮಾಡಿರುವ 730 ದಿನಗಳ ಶಿಶುಪಾಲನಾ ರಜೆ ಸೌಲಭ್ಯಕ್ಕೆ ಅರ್ಹರಾದ ಯಾವುದೇ ನೌಕರಳು ಆ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳತಕ್ಕದ್ದು . ಅದರೊಂದಿಗೆ ಈ ಯೋಜನೆಯಡಿಯಲ್ಲಿನ ಸೌಲಭ್ಯಕ್ಕೂ ಅರ್ಹರಾಗತಕ್ಕದ್ದಲ್ಲ . vii ) ಶಿಶುಪಾಲನಾ ರಜೆಯ ಮಂಜೂರಾತಿಗಾಗಿ ಯಾವುದೇ ದಾಖಲೆಗಳನ್ನು ಪಡೆಯುವ ಅವಶ್ಯಕತೆಯಿರುವುದಿಲ್ಲ . ಸೇವಾ ಪುಸ್ತಕದಲ್ಲಿ ನಮೂದಿಸಿರುವ ಮಕ್ಕಳ ವಿವರಗಳ ಆಧಾರದ ಮೇಲೆ ಮಂಜೂರು ಮಾಡತಕ್ಕದ್ದು . ಪೂರಕ

Comments
Post a Comment