Skip to main content

Posts

Showing posts from July, 2021

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ರಾಜ್ಯ ಸರ್ಕಾರಿ ನೌಕರರಿಗೆ ಶೇ.11.25 ರಿಂದ ಶೇ. 21.50 ಗೆ ತುಟ್ಟಿಭತ್ಯೆ ಪರಿಷ್ಕರಿಸಿ ಅಧಿಕೃತ ಆದೇಶ ಬಿಡುಗಡೆಗೊಳಿಸಿದ ಸರ್ಕಾರ.

ರಾಜ್ಯ ಸರ್ಕಾರಿ ನೌಕರರಿಗೆ ಶೇ.11.25 ರಿಂದ ಶೇ. 21.50 ಗೆ  ತುಟ್ಟಿಭತ್ಯೆ ಪರಿಷ್ಕರಿಸಿ ಅಧಿಕೃತ ಆದೇಶ  ಬಿಡುಗಡೆಗೊಳಿಸಿದ ಸರ್ಕಾರ.

ಸರ್ಕಾರಿ ನೌಕರರಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡುವ “ ಆರೋಗ್ಯ ಯೋಜನೆ"ಜಾರಿ.

 ಸರ್ಕಾರಿ ನೌಕರರಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡುವ “ ಆರೋಗ್ಯ ಯೋಜನೆ"ಜಾರಿ. ಇಂದು ನಡೆದ ಸಚಿವ ಸಂಪುಟದ ಅನುಮೋದನೆ  ರಾಜ್ಯ ಸರ್ಕಾರಿ ನೌಕರರ ಹಲವು ವರ್ಷಗಳ ಬೇಡಿಕೆಯಾದ ರಾಜ್ಯ ಸರ್ಕಾರಿ ನೌಕರರು ಹಾಗೂ ಕುಟುಂಬ ಸದಸ್ಯರಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡುವ “ ಆರೋಗ್ಯ ಯೋಜನೆ ” ಜಾರಿಗೊಳಿಸುತ್ತಿರುವ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀಯುತ ಬಿ.ಎಸ್ . ಯಡಿಯೂರಪ್ಪರವರಿಗೆ ಅಭಿನಂದನೆಗಳು. ರಾಜ್ಯ ಸರ್ಕಾರದ 6 ಲಕ್ಷ ನೌಕರರು ಹಾಗೂ ಕುಟುಂಬ ಸದಸ್ಯರು ಸೇರಿದಂತೆ ಸುಮಾರು 25 ಲಕ್ಷ ಫಲಾನುಭವಿಗಳು ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ .  ಕರ್ನಾಟಕರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಮುಖ ಬೇಡಿಕೆ ಬಗ್ಗೆ ಐತಿಹಾಸಿಕ ತೀರ್ಮಾನಕೈಗೊಂಡ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ , ಸಚಿವ ಸಂಪುಟದಎಲ್ಲಾ ಸಚಿವರಿಗೆ ಸಮಸ್ತ ರಾಜ್ಯ ಸರ್ಕಾರಿ ನೌಕರರು ಹಾಗೂ ಕುಟುಂಬವರ್ಗದವರ ಪರವಾಗಿ ಸಂಘವು ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸುತ್ತದೆ  -.ಎಸ್ . ಷಡಾಕ್ಷರಿ , ರಾಜ್ಯಾಧ್ಯಕ್ಷರು.

ರಾಜ್ಯ ಸರ್ಕಾರಿ ನೌಕರರಿಗೆ ಶೇ. 11 % ರಷ್ಟು ತುಟ್ಟಿಭತ್ಯೆ ಬಿಡುಗಡೆಗೊಳಿಸಲು ಮಾನ್ಯ ಮುಖ್ಯಮಂತ್ರಿಗಳಿಂದ ಆದೇಶ

 ರಾಜ್ಯ ಸರ್ಕಾರಿ ನೌಕರರಿಗೆ ಶೇ. 11 % ರಷ್ಟು ತುಟ್ಟಿಭತ್ಯೆ  ಬಿಡುಗಡೆಗೊಳಿಸಲು ಮಾನ್ಯ ಮುಖ್ಯಮಂತ್ರಿಗಳಿಂದ ಆದೇಶ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ದಿನಾಂಕ:01-07-2021ರಿ0ದ ಅನ್ವಯವಾಗುವಂತೆ ಶೇ. 11% ತುಟ್ಟಿಭತ್ಯೆ ಮಂಜೂರು ಮಾಡಿರುವ ಮಾದರಿಯಲ್ಲೇ ರಾಜ್ಯ ಸರ್ಕಾರಿ ನೌಕರರಿಗೂ ಸಹ ಶೇ. 11% ತುಟ್ಟಿಭತ್ಯೆ ಮಂಜೂರು ಮಾಡುವಂತೆ ಸಂಘವು ಮನವಿ ಸಲ್ಲಿಸಿತ್ತು. ಮನವಿಗೆ ಸ್ಪಂದಿಸಿದ ಸನ್ಮಾನ್ಯ ಮುಖ್ಯಮಂತ್ರಿಗಳಾದ  ಶ್ರೀಯುತ ಬಿ.ಎಸ್. ಯಡಿಯೂರಪ್ಪರವರು ದಿನಾಂಕ: 01-07-2021 ರಿಂದ ಅನ್ವಯಗೊಳ್ಳುವಂತೆ ಶೇ.11% ರಷ್ಟು ತುಟ್ಟಿಭತ್ಯೆ ಮಂಜೂರು ಮಾಡಲು ಆದೇಶಿಸಿರುತ್ತಾರೆ. ::- ರಾಜ್ಯದ 6.00 ಲಕ್ಷ ಸರ್ಕಾರಿ ನೌಕರರು. ::- 4.5 ಲಕ್ಷ ಕುಟುಂಬ ಪಿಂಚಣಿದಾರರು ::- 3.00 ಲಕ್ಷ ನಿಗಮ-ಮಂಡಳಿ ನೌಕರರು ಈ ಸೌಲಭ್ಯವನ್ನು ಪಡೆಯಲಿದ್ದಾರೆ. ಸನ್ಮಾನ್ಯ ಮುಖ್ಯಮಂತ್ರಿಗಳಿಗೆ, ಸಚಿವ ಸಂಪುಟದ ಸಚಿವರಿಗೆ ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳಿಗೆ ಸಮಸ್ತ ಸರ್ಕಾರಿ ನೌಕರರ ಪರವಾಗಿ ಸಂಘವು ತುಂಬು ಹೃದಯದ ಧನ್ಯವಾದಗಳು. - ಸಿ.ಎಸ್. ಷಡಾಕ್ಷರಿ ರಾಜ್ಯಾಧ್ಯಕ್ಷರು  

ಅಧಿಕಾರಿ ಹಾಗೂ ನೌಕರರ ಆದ್ಯ ಗಮನಕ್ಕೆ | ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಕುರಿತು ಮಾಹಿತಿ ,

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು -01 ಅಧಿಕಾರಿ ಹಾಗೂ ನೌಕರರ ಆದ್ಯ ಗಮನಕ್ಕೆ | ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಕುರಿತು ಮಾಹಿತಿ ,  ದಿನಾಂಕ : 22-03-2012ರಂದು 50 ವರ್ಷದೊಳಗಿರುವ ಮತ್ತು ಸರ್ಕಾರವು ನಿರ್ದಿಷ್ಟಪಡಿಸಿರುವ ಕೆಲವು ವೃಂದದ ನೌಕರರನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಸರ್ಕಾರಿ ನೌಕರರು ಪದೋನ್ನತಿ , ವೇತನ ಬಡ್ತಿ , ಪರೀಕ್ಷತಾವಧಿ ಸೌಲಭ್ಯಗಳನ್ನು ಪಡೆಯಲು ಈ ಕೆಳಕಂಡ ದಿನಾಂಕದೊಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಗಳನ್ನು ಕಡ್ಡಾಯವಾಗಿ ತೇರ್ಗಡೆ ಹೊಂದಬೇಕಾಗಿರುತ್ತದೆ .   1 , ಪರೀಕ್ಷತಾವಧಿಗಾಗಿ : 22-03-2022  2. ಪದೋನ್ನತಿಗಾಗಿ : 22-03-2022  3 , ವಾರ್ಷಿಕ ವೇತನ ಬಡ್ತಿಗಾಗಿ : 22-03-2023  4. ಗ್ರೂಪ್ ಡಿ ನೌಕರರಿಗೆ ದ್ವಿ.ದ.ಸ. , ಬಡ್ತಿಗಾಗಿ : 22-03-2023   ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಗಳು ಪುನರಾರಂಭಗೊಂಡಿದ್ದು , ದಿನಾಂಕ : 02-07-2021 ರಿಂದ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ .  ಇದರ ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ . : ಸಿ. ಎಸ್ . ಷಡಾಕ್ಷರಿ ರಾಜ್ಯಾಧ್ಯಕ್ಷರು.

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

Followers