Skip to main content

Posts

Showing posts from August, 2021

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಬೆಂಗಳೂರು ಜಿಲ್ಲೆಯ ಸರ್ಕಾರಿ ನೌಕರರಿಗೆ ಉಚಿತ ಕೋವಿಡ್ ಲಸಿಕಾ ಶಿಬಿರ - ಶ್ರೀ ಸಿ.ಎಸ್. ಷಡಾಕ್ಷರಿ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ, ಬೆಂಗಳೂರು.  ದೂರವಾಣಿ: 080-22354784 & HUMAN RIGHTS & ANTI CORRUPTION FORUM - HQ: DELH I ಸಹಯೋಗದೊಂದಿಗೆ ಬೆ0ಗಳೂರು ಜಿಲ್ಲೆಯ ಸರ್ಕಾರಿ ನೌಕರರಿಗೆ  ಉಚಿತ ಕೋವಿಡ್ ಲಸಿಕೆ ಶಿಬಿರ ಮಾನ್ಯ ಬೆಂಗಳೂರು ನಗರ ಸರ್ಕಾರಿ ನೌಕರರೇ,  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ  HUMAN RIGHTS & ANTI CORRUPTION FORUM - HQ: DELHI  ಇವರ ಸಹಯೋಗದೊಂದಿಗೆ ಬೆಂಗಳೂರು ಜಿಲ್ಲೆಯ ಸರ್ಕಾರಿ ನೌಕರರಿಗೆ ಉಚಿತವಾಗಿ ‘ಕೋವಿಡ್‌ಶೀಲ್ಡ್’ ಮೊದಲ ಹಾಗೂ ಎರಡನೇ ಡೋಸ್ ಲಸಿಕಾ ಶಿಬಿರವನ್ನು ಆಯೋಜಿಸಿದ್ದು, ಆಸಕ್ತ ಸರ್ಕಾರಿ ನೌಕರರ ಈ ಕೆಳಕಂಡ ಲಿಂಕ್ ಮೂಲಕ ದಿನಾಂಕ: 21-08-2021 ರವರೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ. https://bit.ly/ksgeavaccination ಸ್ಥಳ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕಬ್ಬನ್ ಉದ್ಯಾನವನ, ಬೆಂಗಳೂರು-01 ದಿನಾ೦ಕ: 26-08-2021, ಗುರುವಾರ, ಸಮಯ: ಬೆಳಗ್ಗೆ 11:೦೦ ರಿಂದ ಸಂಜೆ 4:೦೦   Loading…

ದಿನಾಂಕ: 22.03.2022 ರೊಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಬಗ್ಗೆ .

ದಿನಾಂಕ: 22.03.2022 ರೊಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಬಗ್ಗೆ .  ಕರ್ನಾಟಕ ಸಿವಿಲ್ ಸೇವಾ ( ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ) ನಿಯಮಗಳು 2012 ರ ನಿಯಮ 1 ( 3 ) ರಲ್ಲಿ ನಿರ್ದಿಪಡಿಸಿರುವ ಹುದ್ಯಗಳನ್ನು ಹೊರತುಪಡಿಸಿ ಇನ್ನಿತರ ಎಲ್ಲಾ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕಡ್ಯಾಯಗೊಳಿಸಿದೆ . CLT 5 ಸೆಟ್ ಅಣಕು ಪರೀಕ್ಷೆ. (Mocktest) https://bit.ly/cltmocktests  ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಸರ್ಕಾರ ಅಥವಾ ಅದು ಅನುಮೋದಿಸಿದ ಏಜೆನ್ಸಿಯು ನಡೆಸತಕ್ಕದ್ದು ಎಂಬುದಾಗಿದ್ದು , ಪ್ರಸ್ತುತ ಸರ್ಕಾರದಿಂದ ಅನುಮೋದಿಸಲ್ಪಟ್ಟ ಕಿಯೋನಿಕ್ಸ್ ಸಂಸ್ಥೆಯ ಮೂಲಕ ನಡೆಸಲಾಗುತ್ತಿದೆ . ನೇರ ನೇಮಕಾತಿ ಹೊಂದಿರುವ ಮತ್ತು ಸೇವಾ ನಿರತ ಸರ್ಕಾರಿ ನೌಕರರುಗಳು ನಿಗದಿಪಡಿಸಿರುವ ಅಂಕಗಳನ್ನು ಪಡೆದು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಉತ್ತೀರ್ಣರಾಗಬೇಕಾಗಿರುತ್ತದೆ . ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಕಾಲಮಿತಿಯನ್ನು ಕಾಲಕಾಲಕ್ಕೆ ವಿಸ್ತರಿಸಲಾಗಿದೆ . ಮೇಲ್ಕಂಡ ಉಲ್ಲೇಖದಲ್ಲಿನ ಅಧಿಸೂಚನೆಯನ್ವಯ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ದಿನಾಂಕ : 22.3.2022 ರೊಳಗೆ ತೆಗೆದುಕೊಂಡು ಉತ್ತೀರ್ಣರಾಗಬೇಕಾಗುತ್ತದೆ . ಸದರಿ ದಿನಾಂಕದ ನಂತರ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವ...

ಕಾನೂನು ಕೋಶ : - ಕಾನೂನು ಸಲಹೆಗಳನ್ನು ತಜ್ಞ ಹಾಗೂ ಸೇವಾ ಅನುಭವವಿರುವ ವ್ಯಕ್ತಿಗಳಿಂದ ಉಚಿತ ಕಾನೂನು ಸೇವೆ ನೀಡಲು ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕಾನೂನು ಕೋಶ ಪ್ರಾರಂಭ

ಕಾನೂನು ಕೋಶ : - ಕಾನೂನು ಸಲಹೆಗಳನ್ನು ತಜ್ಞ ಹಾಗೂ ಸೇವಾ ಅನುಭವವಿರುವ ವ್ಯಕ್ತಿಗಳಿಂದ ಉಚಿತ ಕಾನೂನು ಸೇವೆ ನೀಡಲು ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕಾನೂನು ಕೋಶ ಪ್ರಾರಂಭ       ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸಂಘದ ಆಡಳಿತ ಕಛೇರಿಯಲ್ಲಿ ಸರ್ಕಾರಿ ನೌಕರರಿಗೆ ಉಚಿತ ಕಾನೂನು ಸೇವಾ ಸಲಹೆ ನೀಡುವ ಪರಿಕಲ್ಪನೆಯಲ್ಲಿ ಎಲ್ಲಾ ರೀತಿಯ ಸೇವಾ ಮಾಹಿತಿ, ಕಾನೂನು ಸಲಹೆಗಳನ್ನು ತಜ್ಞ ಹಾಗೂ ಸೇವಾ ಅನುಭವವಿರುವ ವ್ಯಕ್ತಿಗಳಿಂದ ಉಚಿತ ಕಾನೂನು ಸೇವೆ ನೀಡಲು ಈ ಕೋಶವನ್ನು ಆರಂಭಿಸಲಾಗಿದೆ.   ಈ ಕಾನೂನು ಕೋಶದಲ್ಲಿ ನೌಕರರಿಗೆ ಸೇವಾ ಸೌಲಭ್ಯ ಹಾಗೂ ಕಾನೂನು ಸಲಹೆಗಳನ್ನು ನೀಡಲು ಸರ್ಕಾರಿ ನೌಕರರ ಸೇವಾ ಮಾಹಿತಿಯ ತಜ್ಞರಾದ ಶ್ರೀ ಎಲ್. ರಾಘವೇಂದ್ರರೊAದಿಗೆ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.   ಸರ್ಕಾರಿ ನೌಕರರು ಸೇವಾ ಸೌವಲತ್ತುಗಳ ಬಗ್ಗೆ ಮಾಹಿತಿ ಬೇಕಾದಲ್ಲಿ ಈ ಕೆಳಗಿನ ಲಿಂಕ್ ಬಳಸಿ ತಮ್ಮ ಪ್ರಶ್ನೆಗಳನ್ನು ಕೋರಲು ತಿಳಿಸಲಾಗಿದೆ. ಸದರಿ ಪ್ರಶ್ನೆಗಳ ಉತ್ತರವನ್ನು ಸಂಘದ ಜಾಲತಾಣದಲ್ಲಿ ಪ್ರಕಟಿಸಲಾಗುವುದು. Loading…

ರಾಜ್ಯ ಸರ್ಕಾರಿ ನೌಕರರಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡುವ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ- KASS” ಜಾರಿಗೆ ಆದೇಶ

ರಾಜ್ಯ ಸರ್ಕಾರಿ ನೌಕರರಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡುವ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ- KASS” ಜಾರಿಗೆ ಆದೇಶ  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಮುಖ ಬೇಡಿಕೆಯಾದ  ರಾಜ್ಯ ಸರ್ಕಾರಿ ನೌಕರರು ಹಾಗೂ ಕುಟುಂಬದ ಸದಸ್ಯರಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡುವ ಯೋಜನೆಯನ್ನು ಜಾರಿಗೆ ತರಲು ನಿರ್ಣಯ ಕೈಗೊಂಡ ರಾಜ್ಯದ ನಿಕಟಪೂರ್ವ ಮುಖ್ಯಮಂತ್ರಿಗಳಾದ    ಶ್ರೀ ಬಿ.ಎಸ್. ಯಡಿಯೂರಪ್ಪರವರಿಗೆ ಹಾಗೂ ಆದೇಶ ಹೊರಡಿಸಿದ  ಸನ್ಮಾನ್ಯ ಮುಖ್ಯಮಂತ್ರಿಗಳಾದ    ಶ್ರೀ ಬಸವರಾಜ ಬೊಮ್ಮಾಯಿರವರಿಗೆ ಅಭಿನಂದನೆಗಳು. ಬೇಡಿಕೆ ಈಡೇರಿಕೆಗೆ ಸಹಕರಿಸಿದ ಸಚಿವ ಸಂಪುಟದ ಎಲ್ಲಾ ಸಚಿವರಿಗೆ ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳಿಗೆ ಸಮಸ್ತ ರಾಜ್ಯ ಸರ್ಕಾರಿ ನೌಕರರು ಹಾಗೂ ಕುಟುಂಬವರ್ಗದವರ ಪರವಾಗಿ ಸಂಘವು ತುಂಬು ಹೃದಯದ ಧನ್ಯವಾದಗಳು ರಾಜ್ಯ ಸರ್ಕಾರದ ೦೬ ಲಕ್ಷ ನೌಕರರು ಹಾಗೂ ಕುಟುಂಬ ಸದಸ್ಯರು ಸೇರಿದಂತೆ ಸುಮಾರು ೨೫ ಲಕ್ಷ ಅವಲಂಬಿತರು ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ.

ಶಿಕ್ಷಕರ ಮಿತ್ರ APP ನಲ್ಲಿ ಶಿಶುಪಾಲನಾ ರಜೆ ಸೌಲಭ್ಯ

 ಶಿಕ್ಷಕರ ಮಿತ್ರ APP ನಲ್ಲಿ ಶಿಶುಪಾಲನಾ ರಜೆ ಸೌಲಭ್ಯ ಶಿಶುಪಾಲನಾ ರಜೆ ಸೌಲಭ್ಯ ಮಂಜೂರಾತಿಗಾಗಿ ಶಿಕ್ಷಕರ ಮಿತ್ರ  APP  ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಮನವಿಗೆ ಸ್ಪಂದಿಸಿದ ಮಾನ್ಯ ಸಚಿವರು ಶೀಘ್ರವಾಗಿ ಕ್ರಮ ಕೈಗೊಳ್ಳಲು ಮಾನ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ.

ಶಿಕ್ಷಕರ ರಾಜ್ಯ ಪ್ರಶಸ್ತಿ-2021ಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸುವ ಬಗ್ಗೆ

 ಶಿಕ್ಷಕರ ರಾಜ್ಯ ಪ್ರಶಸ್ತಿ-2021ಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸುವ ಬಗ್ಗೆ.

ವೇತನ ತಾರತಮ್ಯ ಕುರಿತು ಆಂತರಿಕ ಸಮಿತಿ ರಚಿಸಿದ ರಾಜ್ಯ ಸರ್ಕಾರಿ ನೌಕರರ ಸಂಘ

ವೇತನ ತಾರತಮ್ಯ ಕುರಿತು ಆಂತರಿಕ ಸಮಿತಿ ರಚಿಸಿದ ರಾಜ್ಯ ಸರ್ಕಾರಿ ನೌಕರರ ಸಂಘ. ಉತ್ತಮ ವೇತನಕ್ಕಾಗಿ ಒತ್ತಾಯಿಸುತ್ತಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಕೇಂದ್ರ ಸರ್ಕಾರಿ ನೌಕರರಿಗೆ ಹೋಲಿಸಿದರೆ ತಮ್ಮ ವೇತನ ತುಂಬಾ ಕಡಿಮೆ ಇದ್ದು, ವೇತನದಲ್ಲಿನ ವ್ಯತ್ಯಾಸವನ್ನು ಅಧ್ಯಯನ ಮಾಡಲು ಆಂತರಿಕ ಸಮಿತಿ ರಚಿಸಿದೆ. ತಮಗೂ ಕೇಂದ್ರ ಸರ್ಕಾರಿ ನೌಕರರಿಗೆ ಸಮಾನಾದ ವೇತನ ನೀಡುವಂತೆ ರಾಜ್ಯ ಸರ್ಕಾರಿ ನೌಕರರು ಹಲವು ವರ್ಷಗಳಿಂದ ಒತ್ತಾಯಿಸುತ್ತಿದ್ದಾರೆ. ಆದರೆ ಈ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗದ ಹಿನ್ನೆಲೆಯಲ್ಲಿ ಈಗ ವೇತನ ಆಯೋಗಗಳಲ್ಲಿ ಕೆಲಸ ಮಾಡಿದ ನಿವೃತ್ತ ನೌಕರರನ್ನು ಒಳಗೊಂಡ ಸಮಿತಿ ರಚಿಸಿದ್ದು, ಈ ಸಮಿತಿಯೂ ಒಂದು ತಿಂಗಳಲ್ಲಿ ತನ್ನ ವರದಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಲು ಆಶಿಸಿದೆ. ಈ ವರದಿಯು ಸಂಪೂರ್ಣ ಅಂಕಿಅಂಶ ಮತ್ತು ರಾಜ್ಯ ಹಾಗೂ ಕೇಂದ್ರ ಸರ್ಕಾರಿ ನೌಕರರ ನಡುವಿನ ವಿವಿಧ ಕೇಡರ್‌ಗಳ ವೇತನದಲ್ಲಿನ ವ್ಯತ್ಯಾಸದ ಬಗ್ಗೆ ವರದಿ ನೀಡುವ ನಿರೀಕ್ಷೆಯಿದೆ. ಇದನ್ನು ಹೊರತುಪಡಿಸಿ ಇತರ ರಾಜ್ಯಗಳಲ್ಲಿನ ನೌಕರರ ವೇತನ ಹಾಗೂ ಹೈಕೋರ್ಟ್ ಸಿಬ್ಬಂದಿಯ ವೇತನದ ಬಗ್ಗೆಯೂ ವರದಿ ನೀಡುವ ಸಾಧ್ಯತೆ ಇದೆ. ಕೃಷಿ, ಗೃಹ, ನಗರಾಭಿವೃದ್ಧಿ, ಆರೋಗ್ಯ, ಪ್ರವಾಸೋದ್ಯಮ, ಶಿಕ್ಷಣ, ಆಹಾರ ಮತ್ತು ನಾಗರಿಕ ಸರಬರಾಜು, ವಿದ್ಯುತ್, ಜಲ ಸಂಪನ್ಮೂಲಗಳು, ಅಬಕಾರಿ, ವೈದ್ಯಕೀಯ ಶಿಕ್ಷಣ ಇಲಾಖೆ ಒಳಗೊಂಡಂತೆ ರಾಜ್ಯ ಸರ್ಕಾರ...

ಸರ್ಕಾರಿ ಕಾರ್ನರ್ ನೌಕರಿ ಕಿರಿಕಿರಿಗೆ ಪರಿಹಾರ: ಲ . ರಾಘವೇಂದ್ರ , ಸೇವಾ ಕಾನೂನು ತಜ್ಞರವರಿಂದ(ಕುಟುಂಬ ಪಿಂಚಣಿ)

ಸರ್ಕಾರಿ ಕಾರ್ನರ್ ನೌಕರಿ ಕಿರಿಕಿರಿಗೆ ಪರಿಹಾರ: ಲ . ರಾಘವೇಂದ್ರ , ಸೇವಾ ಕಾನೂನು ತಜ್ಞರವರಿಂದ ನಾನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಧಾನ ಗುರುವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ . ನನ್ನ ಹೆಂಡತಿ 12 ವರ್ಷಗಳ ಹಿಂದೆ ಮರಣ ಹೊಂದಿದಳು . ನನಗೀಗ 59 ವರ್ಷಗಳು . ಮಗ ಮತ್ತು ಮಗಳು ವೃತ್ತಿಯ ಸಲುವಾಗಿ ನನ್ನಿಂದ ದೂರವಾಗಿ ಬೇರೆ ಊರಿನಲ್ಲಿದ್ದಾರೆ . ನನಗೆ ರಕ್ಷಣೆ ಮತ್ತು ಉಟೋಪಚಾರ ಹಾಗೂ ಪಾಲನೆಯ ಸಲುವಾಗಿ ನಾನು 52 ವರ್ಷದ ವಿಧವೆಯನ್ನು ಮರು ವಿವಾಹ ಮಾಡಿಕೊಳ್ಳಲು ಬಯಸಿದ್ದೇನೆ . ಆ ಕಾರಣ ನಿವೃತ್ತಿಯ ಅಂಚಿನಲ್ಲಿರುವ ನನ್ನ ನಿವೃತ್ತಿಯ ನಂತರ ಸರ್ಕಾರಿ ನಿಯಮದ ಪ್ರಕಾರ ನಮ್ಮಿಬ್ಬರ ಜೀವಿತಾವಧಿಯವರೆಗೆ ಅಥವಾ ನನ್ನ ಮರಣಾನಂತರ ಮರು ಮದುವೆಯಾಗುವ ಹೆಂಡತಿಗೆಕುಟುಂಬ ನಿವೃತ್ತಿ ವೇತನ ಸೌಲಭ್ಯ ಸಿಗುವುದೇ ? | ಎ.ಬಿ. ಪಾಟೀಲ ಬೆಳಗಾವಿ  ನಿಮ್ಮ ಮೊದಲ ಪತ್ನಿ ನಿಧನವಾಗಿರುವುದರಿಂದ ನೀವು 2021 ರ ಕರ್ನಾಟಕ ರಾಜ್ಯ ನಾಗರಿಕ ಸೇವಾ ( ನಡತೆ ) ನಿಯಮಾವಳಿ ರೀತ್ಯಾ ನಿಯಮಿಸಿದ ಪ್ರಾಧಿಕಾರಕ್ಕೆ ಮಾಹಿತಿ ನೀಡಿ , ಎರಡನೇ ವಿವಾಹವಾಗಬಹುದು . ಈ ವಿವಾಹದ ನಂತರ ನೋಂದಣಿ ಪತ್ರ ಸಲ್ಲಿಸಿ ಕ.ಸಿ.ಸೇ.ನಿ. ನಿಯಮ 302 ರಂತೆ ನಾಮ ನಿರ್ದೇಶನವನ್ನು ತಿದ್ದುಪಡಿ ಮಾಡಿಸಬೇಕು . ಆಗ ನಿಮ್ಮ ನಿವೃತ್ತಿ ವೇತನ ಸೌಲಭ್ಯ ಹಾಗೂ ನಿಮ್ಮ ನಿಧನದ ನಂತರ ಪುನರ್ ವಿವಾಹಿತ ಪತ್ನಿಗೆ ಕುಟುಂಬ ಪಿಂಚಣಿ ಲಭ್ಯವಾಗುತ್ತದೆ . ಹೆಚ್ಚಿನ ವಿವರಗಳಿಗೆ ಇದೇ ಲೇಖ...

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

Followers