ದಿನಾಂಕ: 22.03.2022 ರೊಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಬಗ್ಗೆ .
ಕರ್ನಾಟಕ ಸಿವಿಲ್ ಸೇವಾ ( ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ) ನಿಯಮಗಳು 2012 ರ ನಿಯಮ 1 ( 3 ) ರಲ್ಲಿ ನಿರ್ದಿಪಡಿಸಿರುವ ಹುದ್ಯಗಳನ್ನು ಹೊರತುಪಡಿಸಿ ಇನ್ನಿತರ ಎಲ್ಲಾ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕಡ್ಯಾಯಗೊಳಿಸಿದೆ .
ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಸರ್ಕಾರ ಅಥವಾ ಅದು ಅನುಮೋದಿಸಿದ ಏಜೆನ್ಸಿಯು ನಡೆಸತಕ್ಕದ್ದು ಎಂಬುದಾಗಿದ್ದು , ಪ್ರಸ್ತುತ ಸರ್ಕಾರದಿಂದ ಅನುಮೋದಿಸಲ್ಪಟ್ಟ ಕಿಯೋನಿಕ್ಸ್ ಸಂಸ್ಥೆಯ ಮೂಲಕ ನಡೆಸಲಾಗುತ್ತಿದೆ . ನೇರ ನೇಮಕಾತಿ ಹೊಂದಿರುವ ಮತ್ತು ಸೇವಾ ನಿರತ ಸರ್ಕಾರಿ ನೌಕರರುಗಳು ನಿಗದಿಪಡಿಸಿರುವ ಅಂಕಗಳನ್ನು ಪಡೆದು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಉತ್ತೀರ್ಣರಾಗಬೇಕಾಗಿರುತ್ತದೆ . ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಕಾಲಮಿತಿಯನ್ನು ಕಾಲಕಾಲಕ್ಕೆ ವಿಸ್ತರಿಸಲಾಗಿದೆ . ಮೇಲ್ಕಂಡ ಉಲ್ಲೇಖದಲ್ಲಿನ ಅಧಿಸೂಚನೆಯನ್ವಯ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ದಿನಾಂಕ : 22.3.2022 ರೊಳಗೆ ತೆಗೆದುಕೊಂಡು ಉತ್ತೀರ್ಣರಾಗಬೇಕಾಗುತ್ತದೆ . ಸದರಿ ದಿನಾಂಕದ ನಂತರ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವೀಕ್ಷಣಾ ಅವಧಿ , ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಇತ್ಯಾದಿಗಳನ್ನು ಪಡೆಯಲು ಅನರ್ಹರಾಗುತ್ತಾರೆ . ಆದುದರಿಂದ , ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳಲು ಬಾಕಿ ಇರುವ ಸರ್ಕಾರಿ ನೌಕರರು ಕೂಡಲೇ ಪರೀಕ್ಷೆ ತೆಗೆದುಕೊಂಡು ಉತ್ತೀರ್ಣರಾಗುವಂತೆ ಸೂಚಿಸಲಾಗಿದೆ . ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು ಮೇಲ್ಕಂಡ ಸೂಚನೆಯನ್ನು ತಮ್ಮ ಅಧೀನಕ್ಕೊಳಪಡುವ ನೌಕರರ ಗಮನಕ್ಕೆ ತರುವಂತೆ ಈ ಮೂಲಕ ತಿಳಿಸಲಾಗಿದೆ .
Comments
Post a Comment