Skip to main content

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ವೇತನ ತಾರತಮ್ಯ ಕುರಿತು ಆಂತರಿಕ ಸಮಿತಿ ರಚಿಸಿದ ರಾಜ್ಯ ಸರ್ಕಾರಿ ನೌಕರರ ಸಂಘ

ವೇತನ ತಾರತಮ್ಯ ಕುರಿತು ಆಂತರಿಕ ಸಮಿತಿ ರಚಿಸಿದ ರಾಜ್ಯ ಸರ್ಕಾರಿ ನೌಕರರ ಸಂಘ.



ಉತ್ತಮ ವೇತನಕ್ಕಾಗಿ ಒತ್ತಾಯಿಸುತ್ತಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಕೇಂದ್ರ ಸರ್ಕಾರಿ ನೌಕರರಿಗೆ ಹೋಲಿಸಿದರೆ ತಮ್ಮ ವೇತನ ತುಂಬಾ ಕಡಿಮೆ ಇದ್ದು, ವೇತನದಲ್ಲಿನ ವ್ಯತ್ಯಾಸವನ್ನು ಅಧ್ಯಯನ ಮಾಡಲು ಆಂತರಿಕ ಸಮಿತಿ ರಚಿಸಿದೆ.

ತಮಗೂ ಕೇಂದ್ರ ಸರ್ಕಾರಿ ನೌಕರರಿಗೆ ಸಮಾನಾದ ವೇತನ ನೀಡುವಂತೆ ರಾಜ್ಯ ಸರ್ಕಾರಿ ನೌಕರರು ಹಲವು ವರ್ಷಗಳಿಂದ ಒತ್ತಾಯಿಸುತ್ತಿದ್ದಾರೆ. ಆದರೆ ಈ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗದ ಹಿನ್ನೆಲೆಯಲ್ಲಿ ಈಗ ವೇತನ ಆಯೋಗಗಳಲ್ಲಿ ಕೆಲಸ ಮಾಡಿದ ನಿವೃತ್ತ ನೌಕರರನ್ನು ಒಳಗೊಂಡ ಸಮಿತಿ ರಚಿಸಿದ್ದು, ಈ ಸಮಿತಿಯೂ ಒಂದು ತಿಂಗಳಲ್ಲಿ ತನ್ನ ವರದಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಲು ಆಶಿಸಿದೆ.


ಈ ವರದಿಯು ಸಂಪೂರ್ಣ ಅಂಕಿಅಂಶ ಮತ್ತು ರಾಜ್ಯ ಹಾಗೂ ಕೇಂದ್ರ ಸರ್ಕಾರಿ ನೌಕರರ ನಡುವಿನ ವಿವಿಧ ಕೇಡರ್‌ಗಳ ವೇತನದಲ್ಲಿನ ವ್ಯತ್ಯಾಸದ ಬಗ್ಗೆ ವರದಿ ನೀಡುವ ನಿರೀಕ್ಷೆಯಿದೆ. ಇದನ್ನು ಹೊರತುಪಡಿಸಿ ಇತರ ರಾಜ್ಯಗಳಲ್ಲಿನ ನೌಕರರ ವೇತನ ಹಾಗೂ ಹೈಕೋರ್ಟ್ ಸಿಬ್ಬಂದಿಯ ವೇತನದ ಬಗ್ಗೆಯೂ ವರದಿ ನೀಡುವ ಸಾಧ್ಯತೆ ಇದೆ.


ಕೃಷಿ, ಗೃಹ, ನಗರಾಭಿವೃದ್ಧಿ, ಆರೋಗ್ಯ, ಪ್ರವಾಸೋದ್ಯಮ, ಶಿಕ್ಷಣ, ಆಹಾರ ಮತ್ತು ನಾಗರಿಕ ಸರಬರಾಜು, ವಿದ್ಯುತ್, ಜಲ ಸಂಪನ್ಮೂಲಗಳು, ಅಬಕಾರಿ, ವೈದ್ಯಕೀಯ ಶಿಕ್ಷಣ ಇಲಾಖೆ ಒಳಗೊಂಡಂತೆ ರಾಜ್ಯ ಸರ್ಕಾರದ 72 ಇಲಾಖೆಗಳಲ್ಲಿ ಸುಮಾರು 5.3 ಲಕ್ಷಕ್ಕೂ ಹೆಚ್ಚು ಖಾಯಂ ಉದ್ಯೋಗಿಗಳು ಮತ್ತು 1.5 ಲಕ್ಷ ಗುತ್ತಿಗೆ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ.



ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಜತೆ ಮಾತನಾಡಿದ ಅಸೋಸಿಯೇಷನ್ ​​ಅಧ್ಯಕ್ಷ ಸಿ ಎಸ್ ಷಡಕ್ಷರಿ ಅವರು, 7.7 ಲಕ್ಷ ಮಂಜೂರಾದ ಹುದ್ದೆಗಳಿದ್ದರೆ 5.4 ಲಕ್ಷ ಸಿಬ್ಬಂದಿ ಮಾತ್ರ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯ ಖಾಲಿ ಹುದ್ದೆಗಳಿಂದಾಗಿ, ಕೆಲವು ಇಲಾಖೆಗಳಲ್ಲಿ ಈಗಿರುವ ಸಿಬ್ಬಂದಿಗಳ ಮೇಲೆ ಕೆಲಸದ ಹೊರೆ ಹೆಚ್ಚಾಗಿದೆ ಎಂದು ಅವರು ತಿಳಿಸಿದರು

ಷಡಕ್ಷರಿ ಪ್ರಕಾರ, ರಾಜ್ಯ ಸರ್ಕಾರದ ಗ್ರೂಪ್-ಡಿ ಉದ್ಯೋಗಿಗೆ ತಿಂಗಳಿಗೆ 25,000 ರೂ. ಇದ್ದರೆ, ಕೇಂದ್ರ ಸರ್ಕಾರದ ಗ್ರೂಪ್-ಡಿ ಉದ್ಯೋಗಿಗೆ 36,000 ರೂ. ಇದೆ. ಅದೇ ರೀತಿ, ರಾಜ್ಯ ಸರ್ಕಾರದ ಎಫ್ ಡಿಎ ಉದ್ಯೇಗಿಗೆ ರೂ. 40,000 ಇದ್ದರೆ, ಕೇಂದ್ರ ಸರ್ಕಾರದ ಎಫ್ ಡಿಎ ತಿಂಗಳಿಗೆ ರೂ. 55,000 ಗಳಿಸುತ್ತಾರೆ ಎಂದರು.


" ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ನಡುವೆ ರೂ. 6,000 ಮತ್ತು ರೂ. 40,000 ವರೆಗೆ ವ್ಯತ್ಯಾಸವಿದೆ. ರಾಜ್ಯದ ಉದ್ಯೋಗಿಗಳು ಅದೇ ರೀತಿಯ ಕೆಲಸವನ್ನು ಮಾಡುತ್ತಾರೆ, ಅದೇ ಪ್ರಯತ್ನಗಳನ್ನು ಮಾಡುತ್ತಾರೆ, ಆದರೆ ಅವರ ಸಂಬಳ ಮಾತ್ರ ಕಡಿಮೆ ಇರುತ್ತದೆ'ಎಂದು ಅವರು ಹೇಳಿದರು.

ಇದಲ್ಲದೆ, ಗುಜರಾತ್, ತಮಿಳುನಾಡು, ಆಂಧ್ರಪ್ರದೇಶ, ಕೇರಳ ಹಾಗೂ ಇತರ ರಾಜ್ಯಗಳು ಸೇರಿದಂತೆ 22 ರಾಜ್ಯಗಳ ಸರ್ಕಾರಿ ನೌಕರರು ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾಗಿ ವೇತನ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದರು.

Comments

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

Followers