Skip to main content

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ರಾಜ್ಯ ಸರ್ಕಾರಿ ನೌಕರರಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡುವ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ- KASS” ಜಾರಿಗೆ ಆದೇಶ

ರಾಜ್ಯ ಸರ್ಕಾರಿ ನೌಕರರಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡುವ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ- KASS” ಜಾರಿಗೆ ಆದೇಶ 

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಮುಖ ಬೇಡಿಕೆಯಾದ  ರಾಜ್ಯ ಸರ್ಕಾರಿ ನೌಕರರು ಹಾಗೂ ಕುಟುಂಬದ ಸದಸ್ಯರಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡುವ ಯೋಜನೆಯನ್ನು ಜಾರಿಗೆ ತರಲು ನಿರ್ಣಯ ಕೈಗೊಂಡ ರಾಜ್ಯದ ನಿಕಟಪೂರ್ವ ಮುಖ್ಯಮಂತ್ರಿಗಳಾದ   ಶ್ರೀ ಬಿ.ಎಸ್. ಯಡಿಯೂರಪ್ಪರವರಿಗೆ ಹಾಗೂ ಆದೇಶ ಹೊರಡಿಸಿದ 
ಸನ್ಮಾನ್ಯ ಮುಖ್ಯಮಂತ್ರಿಗಳಾದ    ಶ್ರೀ ಬಸವರಾಜ ಬೊಮ್ಮಾಯಿರವರಿಗೆ ಅಭಿನಂದನೆಗಳು.




ಬೇಡಿಕೆ ಈಡೇರಿಕೆಗೆ ಸಹಕರಿಸಿದ ಸಚಿವ ಸಂಪುಟದ ಎಲ್ಲಾ ಸಚಿವರಿಗೆ ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳಿಗೆ ಸಮಸ್ತ ರಾಜ್ಯ ಸರ್ಕಾರಿ ನೌಕರರು ಹಾಗೂ ಕುಟುಂಬವರ್ಗದವರ ಪರವಾಗಿ ಸಂಘವು ತುಂಬು ಹೃದಯದ ಧನ್ಯವಾದಗಳು

ರಾಜ್ಯ ಸರ್ಕಾರದ ೦೬ ಲಕ್ಷ ನೌಕರರು ಹಾಗೂ ಕುಟುಂಬ ಸದಸ್ಯರು ಸೇರಿದಂತೆ ಸುಮಾರು ೨೫ ಲಕ್ಷ ಅವಲಂಬಿತರು ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ.




Comments

  1. ರಾಜ್ಯದ ಸರ್ಕಾರಿ ನೌಕರರು &ಅವರ ಕುಟುಂಬದ ಸದಸ್ಯರು ಎಲ್ಲರೂ ಮಾನ್ಯ ಮಾಜಿ ಮುಖ್ಯಮಂತ್ರಿಯಾದ
    ಶ್ರೀ.ಯಡಿಯೂರಪ್ಪ ರವರು ಹಾಗೂ ರಾಜ್ಯದ ಮುಖ್ಯಮಂತ್ರಿಯಾದ
    ಶ್ರೀ. ಬಸವರಾಜ ಬೊಮ್ಮಾಯಿ ರವರಿಗೂ
    ಹಾಗೂ ರಾಜ್ಯದ ಸರ್ಕಾರಿ ನೌಕರರ ಅಧ್ಯಕ್ಷರಾದ ಮಾನ್ಯ ಶ್ರೀ. ಷಡಕ್ಷರಿ ಸರ್ ರವರಿಗೆ ತುಂಬು ಹೃದಯದಿಂದ ಅಭಿನಂದನೆಗಳು ಹಾಗೂ ಈ ಅತ್ಯಮೂಲ್ಯ *ನಗದು ರಹಿತ ಆರೋಗ್ಯ ಸೇವೆಗೆ* ನಾವುಗಳು ಎಂದೆಂದಿಗೂ ಚಿರ ಋಣಿಗಳಾಗಿರುತ್ತೇವೆ..

    ReplyDelete
  2. Really its a great news if it implemented properly because i suffered alot in my family for not having this facilities before

    ReplyDelete
  3. ಇದೊಂದು ಅಮೋಘ ಕಾರ್ಯ, ಇದು ಅಷ್ಟೊಂದು ಸುಲಭವಿರಲಿಲ್ಲ.ಈ ಅಮೋಘ ಕಾರ್ಯದ ರುವಾರಿಗಳಾದ ನಮ್ಮೆಲ್ಲರ ನೆಚ್ಚಿನ ಅಧ್ಯಕ್ಷರಿಗೆ , ಮಾಜಿ ಹಾಗೂ ಹಾಲಿ ಮುಖ್ಯಮಂತ್ರಿಗಳಿಗೆ ಧನ್ಯವಾದಗಳು.

    ReplyDelete
  4. ಅನೇಕ ವರ್ಷಗಳಿಂದ ಬೇರೆ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಾ ತಮ್ಮ ತಂದೆತಾಯಿಗಳನ್ನು ಅವಶ್ಯಕ ಸಂದರ್ಭಗಳಲ್ಲಿ ಭೇಟಿ ಮಾಡಲು ಸಾಧ್ಯವಾಗದೆ ನರಕಯಾತನೆ ಅನುಭವಿಸುತ್ತಿರುವ ಹಾಗೂ ಯಾವುದೇ ವಿಶೇಷ ಪ್ರಕರಣಗಳು ಇಲ್ಲದ ನಮ್ಮಂತಹ ಸಾಮಾನ್ಯ ಶಿಕ್ಷಕರ ಬಗ್ಗೆ ಪ್ರೀತಿ ಕಾಳಜಿ ತೋರಿಸುತ್ತಿರುವ ಷಡಕ್ಷರಿ ಸರ್ ರವರಿಗೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಎಲ್ಲಾ ಪದಾಧಿಕಾರಿಗಳಿಗೆ ಹಾಗೂ ಈ ಮಹತ್ಕಾರ್ಯಕ್ಕೆ ಮುನ್ನುಡಿ ಬರೆಯುತ್ತಿರುವ ಸನ್ಮಾನ್ಯ ಮುಖ್ಯ ಮಂತ್ರಿಗಳಿಗೆ ಹಾಗೂ ಮಾನ್ಯ ಶಿಕ್ಷಣ ಸಚಿವರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು .

    ReplyDelete

Post a Comment

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

Followers