ಕರ್ತವ್ಯನಿರತ ದಕ್ಷಿಣ ಕನ್ನಡ ಜಿಲ್ಲಾ ಡಯಟ್ ಕಛೇರಿಯ ಮಹಿಳಾ ಸಿಬ್ಬಂದಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸುವ ಬಗ್ಗೆ .
ಕರ್ತವ್ಯನಿರತ ದಕ್ಷಿಣ ಕನ್ನಡ ಜಿಲ್ಲಾ ಡಯಟ್ ಕಛೇರಿಯ ಮಹಿಳಾ ಸಿಬ್ಬಂದಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸುವ ಬಗ್ಗೆ .
ವಿಷಯಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ( ಡಯಟ್ ) ಕರ್ತವ್ಯನಿರತ ಲಿಪಿಕ ವೃಂದದ ಮಹಿಳಾ ಸಿಬ್ಬಂದಿಗಳಾದ ನಿರ್ಮಲಾ , ರೀನಾರಾಯ್ ಹಾಗೂ ಗುಣವತಿ ಎಂಬುವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಸಂಘವು ತೀವ್ರವಾಗಿ ಖಂಡಿಸುತ್ತದೆ . ಈ ಹಲ್ಲೆಯಿಂದ ನೌಕರರು ಆತಂಕಕ್ಕೆ ಗುರಿಯಾಗಿದ್ದು , ಮುಕ್ತ ವಾತಾವರಣದಲ್ಲಿ ಸರ್ಕಾರಿ ಕೆಲಸ ನಿರ್ವಹಿಸಲು ಕಷ್ಟಸಾಧ್ಯವಾದ ಪರಿಸ್ಥಿತಿ ಉದ್ಭವಿಸಿರುತ್ತದೆ . ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಿ ಕಾನೂನು ರೀತ್ಯ ಕ್ರಮ ಜರುಗಿಸುವ ಮೂಲಕ ಸರ್ಕಾರಿ ನೌಕರರು ಮುಕ್ತ ವಾತಾವರಣದಲ್ಲಿ ಕಾರ್ಯನಿರ್ವಹಿಸುವ ಅವಕಾಶ ಕಲ್ಪಿಸಲು ಮಾನ್ಯ ಗೃಹ ಸಚಿವರಿಗೆ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ರವರು ಕೋರಿದರು.
Comments
Post a Comment