Skip to main content

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಅಂತರ್ ಜಿಲ್ಲಾ ವರ್ಗಾವಣೆ ಬಯಸುವ ಪ್ರೌಢ ಶಾಲಾ ಶಿಕ್ಷಕರ ಕ್ರೂಢೀಕೃತ ಮಾಹಿತಿಯನ್ನು ಮಾನ್ಯ ಶಿಕ್ಷಣ ಸಚಿವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸಲ್ಲಿಕೆ.

 ಅಂತರ್ ಜಿಲ್ಲಾ ವರ್ಗಾವಣೆ ಬಯಸುವ ಪ್ರೌಢ ಶಾಲಾ ಶಿಕ್ಷಕರ  ಕ್ರೂಢೀಕೃತ ಮಾಹಿತಿಯನ್ನು ಮಾನ್ಯ ಶಿಕ್ಷಣ ಸಚಿವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸಲ್ಲಿಕೆ.



ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರೌಢ ಶಾಲಾ ಶಿಕ್ಷಕರ ಸಮಸ್ಯೆಗಳ ಬಗ್ಗೆ ದಿನಾಂಕ: 01-09-2021ರಂದು ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಂತರ್  ಜಿಲ್ಲಾ ವರ್ಗಾವಣೆ ಬಯಸುವ ಪ್ರೌಢ ಶಾಲಾ ಶಿಕ್ಷಕರ ನಿಖರ ಹಾಗೂ ವಾಸ್ತವ ಮಾಹಿತಿಯನ್ನು ಸಲ್ಲಿಸಲು ಸೂಚನೆ ನೀಡಿದ್ದರ ಮೇರೆಗೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಈ ಕೆಳಕಂಡ ಅಂಶಗಳ ಹಿನ್ನಲೆಯಲ್ಲಿ ನಿಖರ ಹಾಗೂ ವಾಸ್ತವ ಮಾಹಿತಿಯನ್ನು ಸಂಗ್ರಹಿಸಿ ಅನುಬಂಧವಾರು ಸಲ್ಲಿಸಿರುವ ಮಾಹಿತಿಯನ್ನಾಧರಿಸಿ “ಒಂದು ಬಾರಿಗೆ” ಸೀಮಿತವಾಗಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ಕಲ್ಪಿಸಲು ಕೋರಿ ಅಂಕಿ-ಅ0ಶಗಳ ಮಾಹಿತಿಯನ್ನು ತಮಗೆ ಸಲ್ಲಿಸಿದೆ.







1. ಶಿಕ್ಷಕರು ಮಾನಸಿಕ ನೆಮ್ಮದಿಯಿಂದ ಇದ್ದರೆ ಮಾತ್ರ ತರಗತಿ ಬೋಧನೆ ಹಾಗೂ ಕಲಿಕೆ ಗುಣಮಟ್ಟದಿಂದ ಕೂಡಿರುತ್ತದೆ ಎಂಬ ಶೈಕ್ಷಣಿಕ ಮನೋವಿಜ್ಞಾನಿಗಳ ಮಾತಿನಂತೆ ಕಳೆದ 10-15 ವರ್ಷಗಳಿಂದ ತಮ್ಮ ಕುಟುಂಬದಿAದ ದೂರವಿರುವ ಅಂತರ್ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಶಿಕ್ಷಕರು ವರ್ಗಾವಣೆ ನಿಯಮಗಳ ನ್ಯೂನತೆಯಿಂದ ಮಾನಸಿಕ ಸ್ವಾಸ್ಥö್ಯವನ್ನು ಕಳೆದುಕೊಂಡಿರುತ್ತಾರೆ. ಹಾಗಾಗಿ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಪ್ರಸಕ್ತ ಸಾಲಿನಲ್ಲಿ ಪಶ್ಚಿಮ ಬಂಗಾಳದ ಮಾದರಿಯಲ್ಲಿ ಒಂದು ಬಾರಿ ಅವರವರು ಇಚ್ಛಿಸುವ ಜಿಲ್ಲೆಗೆ ವರ್ಗಾವಣೆಗೆ ಅವಕಾಶ ಮಾಡಿಕೊಡುವ ಮೂಲಕ  ಮುಕ್ತ ವಾತಾವರಣದಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಅವಕಾಶ ಕಲ್ಪಿಸಿದಂತಾಗುತ್ತದೆ.


2. ಕುಟು0ಬದವರಿ0ದ ಸುಮಾರು 400 ಕ್ಕೂ ಹೆಚ್ಚು ಕಿ.ಮೀ. ದೂರದ ಸ್ಥಳಗಳಲ್ಲಿ ಕಳೆದ 10-15 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯ ಪತಿ ದಾಂಪತ್ಯ ತೊರೆದು ಬೇರೆ ಮದುವೆಯಾಗಿರುವ ಉದಾಹರಣೆಗಳು ಇರುತ್ತವೆ. ಇದರಿಂದಾಗಿ ಮಹಿಳಾ ಶಿಕ್ಷಕಯರು ಮಾನಸಿಕ ಖಿನ್ನತೆ ಒಳಗಾಗಿರುವ ಪ್ರಕರಣಗಳನ್ನು ಗಮನಿಸಲಾಗಿದೆ.

3. ಪತಿ-ಪತ್ನಿ ಪ್ರಕರಣಗಳಲ್ಲಿ ಕಳೆದ 10-15 ವರ್ಷಗಳಿಂದ ಸಂಸಾರದಿ0ದ ದೂರವಿದ್ದು, ಅಂತಹ ಶಿಕ್ಷಕ/ಶಿಕ್ಷಕಿಯರು ಕೌಟುಂಬಿಕ ಸಮಸ್ಯೆಗಳಿಗೆ ಸಿಲುಕಿದ್ದು, ಇದು ಶೈಕ್ಷಣಿಕ ವ್ಯವಸ್ಥೆ ಮೇಲೆ ದುಷ್ಪರಿಣಾಮ ಬೀರುತ್ತಿರುವುದನ್ನು ಗಮನಿಸಲಾಗಿದೆ.

4. ಒಟ್ಟು ವರ್ಗಾವಣೆ ಬಯಸಿರುವ 2904 ಶಿಕ್ಷಕರಲ್ಲಿ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ 939 ಶಿಕ್ಷಕರು ವರ್ಗಾವಣೆ ಬಯಸಿದ್ದು, ಉಳಿಕೆ 1965 ಶಿಕ್ಷಕರು ವಿವಿಧ ಜಿಲ್ಲೆಗಳಿಗೆ ವರ್ಗಾವಣೆ ಬಯಸಿರುವುದನ್ನು ಗಮನಿಸಬಹುದಾಗಿದೆ. ಉಳಿಕೆ ಹುದ್ದೆಗಳಿಗೆ ಹೊಸ ನೇಮಕಾತಿ/ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡು ಕಾರ್ಯನಿರ್ವಹಣಾ ವ್ಯವಸ್ಥೆ ಮಾಡುವುದರಿಂದ ಅಖಂಡ ಕರ್ನಾಟಕದ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸಬಹುದಾಗಿದೆ.

5. ಎಲ್ಲಾ ಇಲಾಖೆಗಳು ಅವರವರ ಕೋರಿಕೆ ಸ್ಥಳಗಳಿಗೆ ವರ್ಗಾವಣೆಗೊಳ್ಳುವ ಅವಕಾಶವಿರುವಂತೆ ಶಿಕ್ಷಣ ಇಲಾಖೆಯಲ್ಲಿಯೂ ಸಹ ಅವಕಾಶ ನೀಡಿ, ಅಖಂಡ ಕರ್ನಾಟಕ ಶಿಕ್ಷಣ ಇಲಾಖೆಯ ಉನ್ನತಿಗೆ ವಿಶೇಷ ನಿಯಮಗಳನ್ನು ಜಾರಿಗೊಳಿಸಿ ವರ್ಗಾವಣೆ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿ ರವರು ತಿಳಿಸಿದರು.



 












ಫ್ರೌಡ ಶಾಲಾ ಶಿಕ್ಷಕರ ಅಂಕಿ-ಅಂಶಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ➡ High School Teacher Data

©Statistics Database @Syed ksgeanews.

Comments

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

Followers