ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವಲಂಬಿತರಿಗೆ ಉಚಿತ ಚಿಕಿತ್ಸೆ ನೀಡುವ “ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ” ಅನುಷ್ಠಾನಗೊಳಿಸಲು ಕಡ್ಡಾಯವಾಗಿ Online ನಲ್ಲಿ ಮಾಹಿತಿ ನೀಡುವ ಬಗ್ಗೆ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವಲಂಬಿತರಿಗೆ ಉಚಿತ ಚಿಕಿತ್ಸೆ ನೀಡುವ “ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ” ಅನುಷ್ಠಾನಗೊಳಿಸಲು ಕಡ್ಡಾಯವಾಗಿ Online ನಲ್ಲಿ ಮಾಹಿತಿ ನೀಡುವ ಬಗ್ಗೆ.
ಮಾನ್ಯ ರಾಜ್ಯ ಸರ್ಕಾರಿ ನೌಕರರ ಬಂಧುಗಳೇ,
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವಲಂಬಿತರಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡುವ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ” ಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿದ್ದು, ಇದರ ಸಮಗ್ರ ಅನುಷ್ಠಾನಕ್ಕಾಗಿ ರಾಜ್ಯಾದ್ಯಂತ ಕರ್ತವ್ಯ ನಿರ್ವಹಿಸುತ್ತಿರುವ ಖಾಯಂ ರಾಜ್ಯ ಸರ್ಕಾರಿ ನೌಕರರು-ಅಧಿಕಾರಿಗಳ ನಿಖರ ಮಾಹಿತಿಯನ್ನು Online ಮೂಲಕ ಕ್ರೂಢೀಕರಿಸಿ ಉಚಿತ ಆರೋಗ್ಯ ಯೋಜನೆಯನ್ನು ಜಾರಿಗೊಳಿಸಲಾಗುವುದು.
ಆದ್ದರಿಂದ ದಿನಾಂಕ: 30-09-2021 ರೊಳಗೆ ಈ ಕೆಳಕಂಡ ಲಿಂಕ್ ಬಳಸಿ ತಮ್ಮ ಮಾಹಿತಿಯನ್ನು Online ಮೂಲಕ ಕಡ್ಡಾಯವಾಗಿ ಸಲ್ಲಿಸಲು ಕೋರಿದೆ.
-:: ವಿಶೇಷ ಸೂಚನೆ ::-
01. KGID ಸಂಖ್ಯೆ ಹೊಂದಿರುವ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸದಸ್ಯರಾಗಿರುವ ರಾಜ್ಯ ಸರ್ಕಾರದ ಖಾಯಂ ಸರ್ಕಾರಿ ನೌಕರರು / ಅಧಿಕಾರಿಗಳು ಮಾತ್ರ ಮಾಹಿತಿ ಸಲ್ಲಿಸುವುದು.
02. ಪೊಲೀಸ್ ಇಲಾಖೆಯಲ್ಲಿ ಈಗಾಗಲೇ ಆರೋಗ್ಯ ಯೋಜನೆ ಜಾರಿಯಲ್ಲಿರುವುದರಿಂದ ಈ ಇಲಾಖೆಯ ನೌಕರರು / ಅಧಿಕಾರಿಗಳು ಮಾಹಿತಿ ಸಲ್ಲಿಸಲು ಅವಕಾಶವಿರುವುದಿಲ್ಲ.
03. ಅನುದಾನಿತ ಸಂಸ್ಥೆ, ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಸ್ಥಳೀಯ ಸಂಸ್ಥೆಗಳ ನೌಕರರು-ಅಧಿಕಾರಿಗಳು ಮಾಹಿತಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಮಾಹಿತಿಗಾಗಿ:- 9902135813, 9916489079
Good work for govt jobers
ReplyDeleteVery good plan, pl implement it immediately
ReplyDeletePlease implement as soon as possible
ReplyDeleteplease send the order and format copies sir
ReplyDelete