ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ದಿ : 01 / 07 / 2021 ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆಗೊಳಿಸಲು ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ. - ಸಿ.ಎಸ್.ಷಡಾಕ್ಷರಿ, ರಾಜ್ಯಾಧ್ಯಕ್ಷರು
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ದಿ : 01 / 07 / 2021 ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆಗೊಳಿಸಲು ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ. - ಸಿ.ಎಸ್.ಷಡಾಕ್ಷರಿ, ರಾಜ್ಯಾಧ್ಯಕ್ಷರು
ಸೂಚಿತ ವಿಷಯದನ್ವಯ ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ಕೇಂದ್ರ ಸರ್ಕಾರವು ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ ದಿನಾಂಕದಿಂದಲೇ ಕರ್ನಾಟಕ ರಾಜ್ಯ ಸರ್ಕಾರವು ಸಹ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡುವುದು ಸಂಪ್ರದಾಯವಾಗಿರುತ್ತದೆ .
ಪ್ರಸ್ತುತ ಕೇಂದ್ರ ಸರ್ಕಾರವು ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ಉಲ್ಲೇಖಿತ ಆದೇಶದಲ್ಲಿ ದಿನಾಂಕ 01/07/2021 ರಿಂದ ಪೂರ್ವಾನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಶೇ . 3 % ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶಿಸಿದೆ .
ಅದ್ದರಿಂದ ತಾವುಗಳು ದಯಮಾಡಿ ಕೇಂದ್ರ ಸರ್ಕಾರದ ಆದೇಶ ಸಂ : 1 / 4 / 2021 - ಇ -2 ( ಬಿ ) , ದಿನಾಂಕ : 25-10-2021ರಂತೆ ಕರ್ನಾಟಕ ರಾಜ್ಯದ ಸರ್ಕಾರಿ ನೌಕರರಿಗೆ ದಿನಾಂಕ 01/07/2021 ರಿಂದ ಪೂರ್ವಾನ್ವಯವಾಗುವಂತೆ ಶೇ . 3 % ರಷ್ಟು ತುಟ್ಟಿಭತ್ಯೆಯನ್ನು ಸಂಪೂರ್ಣ ನಗದು ರೂಪದಲ್ಲಿ ನೀಡಿ ಆದೇಶ ಹೊರಡಿಸಲು , ಆರ್ಥಿಕ ಇಲಾಖೆಗೆ ನಿರ್ದೇಶನ ನೀಡಲು ರಾಜ್ಯಾಧ್ಯಕ್ಷರಾದ ಸಿ.ಎಸ್ ಪಡಾಕ್ಷರಿರವರು ಮಾನ್ಯ ಮುಖ್ಯಮಂತ್ರಿಗಳಿಗೆ ಕೋರಿದರು.
ಮಾನ್ಯ ರಾಜ್ಯ ಸರ್ಕಾರಿ ನೌಕರರ ಅಧ್ಯಕ್ಷರು ಈಗಿನ ಪರಿಸ್ಥಿತಿಯಲ್ಲಿ ಪೆಟ್ರೋಲ್ ಬೆಲೆ ರೂ 112.26/- ಇದ್ದು. ಕೇಂದ್ರ ಸರ್ಕಾರ ನೌಕರರಿಗೆ ನೀಡುತ್ತಿರುವ ವೇತನವು ರಾಜ್ಯ ಸರ್ಕಾರ ನೌಕರರಿಗೆ ನೀಡುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಬೇಡಿಕೆಗಳನ್ನು ಪೂರೈಸಲು ಎಲ್ಲರಿಂದ ಕೇಳಿಕೊಳ್ಳುತ್ತೇವೆ
ReplyDelete