Skip to main content

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ಅಮಿತಾ ಪ್ರಸಾದ್ ಭಾ.ಆ.ಸೇ. ಇವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ಜಂಟಿ ಸಮಾಲೋಚನಾ ಸಮಿತಿ ಸಭೆಯಲ್ಲಿ ಸರ್ಕಾರಿ ನೌಕರರ ಆಡಳಿತಾತ್ಮಕ ವಿಷಯಗಳ ಬಗ್ಗೆ ಕೈಗೊಂಡ ನಿರ್ಣಯಗಳು .

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ಅಮಿತಾ ಪ್ರಸಾದ್ ಭಾ.ಆ.ಸೇ. ಇವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ಜಂಟಿ ಸಮಾಲೋಚನಾ ಸಮಿತಿ ಸಭೆಯಲ್ಲಿ ಸರ್ಕಾರಿ ನೌಕರರ ಆಡಳಿತಾತ್ಮಕ ವಿಷಯಗಳ ಬಗ್ಗೆ ಕೈಗೊಂಡ ನಿರ್ಣಯಗಳು .

        ದಿನಾಂಕ : 28-10-2021 ರಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ಅಮಿತಾ ಪ್ರಸಾದ್ ಭಾ.ಆ.ಸೇ ಅಧ್ಯಕ್ಷತೆಯಲ್ಲಿ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀ ಮನೀಶ್ ಮಲ್ ಭಾ.ಆ.ಸೇ. , ಇವರ ಉಪಸ್ಥಿತಿಯಲ್ಲಿ ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್ . ಷಡಾಕ್ಷರಿಯವರು ಹಾಗೂ ವಿವಿಧ ಇಲಾಖೆಯ ಸದಸ್ಯರೊಂದಿಗೆ ರಾಜ್ಯದ ಸರ್ಕಾರಿ ನೌಕರರ ಹಲವಾರು ಬೇಡಿಕೆಗಳ ಬಗ್ಗೆ ಜಂಟಿ ಸಮಾಲೋಚನಾ ಸಮಿತಿ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು . 




    ಸಭೆಯು ಈ ಕೆಳಕಂಡ ವಿಷಯಗಳ ಬಗ್ಗೆ ಚರ್ಚಿಸಿ ನಿರ್ಣಯಿಸಿದ ನಂತರ ಸೂಕ್ತ ಆದೇಶಗಳನ್ನು ಹೊರಡಿಸಲು ಸಮಿತಿಯ ಅಧ್ಯಕ್ಷರು ಸಂಬಂಧಿಸಿದವರಿಗೆ ಸೂಚನೆ ನೀಡಿದರು .
Uploading: 199453 of 199453 bytes uploaded.

  • ಎಲ್ಲಾ ಇಲಾಖೆಗಳಲ್ಲಿ ಪ್ರತಿ ವರ್ಷ ಮೊದಲ ತಿಂಗಳಿನಲ್ಲಿ ಜೇಷ್ಠತಾ ಪಟ್ಟಿಯನ್ನು ಸಿದ್ಧಪಡಿಸುವುದು ಹಾಗೂ ಪ್ರತಿ ಆರು ತಿಂಗಳಿಗೊಮ್ಮೆ ಮುಂಬಡ್ತಿ ಕೋಟಾದ ಹುದ್ದೆಗಳನ್ನು ಗುರುತಿಸಿ ಪದೋನ್ನತಿ ನೀಡಲು ತೀರ್ಮಾನಿಸಲಾಯಿತು . 
  • ಎಲ್ಲಾ ಇಲಾಖೆಗಳಲ್ಲಿ ನೌಕರರಿಗೆ ಸಂಬಂಧಿಸಿದ ಇಲಾಖಾ ವಿಚಾರಣೆಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಪಡಿಸಲು ' ಲೋಕ ಅದಾಲತ್‌ ' ಮಾದರಿಯಲ್ಲಿ ಪ್ರತಿ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ಬಾಕಿ ಇರುವ ಸರ್ಕಾರಿ ನೌಕರರ ಇಲಾಖಾ ವಿಚಾರಣೆಗಳನ್ನು ಕಾಲಮಿತಿಯೊಳಗೆ ಪ್ರಕರಣಗಳನ್ನು ಇತ್ಯರ್ಥಪಡಿಸಲು ತೀರ್ಮಾನಿಸಲಾಯಿತು . 
  • ಸರ್ಕಾರಿ ನೌಕರರು ಇನ್ನು ಮುಂದೆ ಪಾಸ್‌ಪೋರ್ಟ್‌ಗಳ N.O.C. ಗಳನ್ನು ಸಂಬಂಧಿಸಿದ ಕಛೇರಿಯ ಮುಖ್ಯಸ್ಥರಿಂದ ಪಡೆಯುವ ಅವಕಾಶವನ್ನು ಜಾರಿಗೆ ತರಲು ತೀರ್ಮಾನಿಸಿತು . 
  • ಸರ್ಕಾರಿ ನೌಕರರು ಸೇವಾವಧಿಯಲ್ಲಿ ಚರ - ಸ್ಥಿರಾಸ್ತಿ ಖರೀದಿಸುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯಬೇಕೆಂಬ ನಿರ್ಬಂಧವನ್ನು ಸಡಿಲಿಸಿ , ಇನ್ನು ಮುಂದೆ ಸರ್ಕಾರಿ ಅಧಿಕಾರಿ / ನೌಕರರು ಕಾಲಮಿತಿಯಲ್ಲಿ ಸಂಬಂಧಿಸಿದ ಪ್ರಾಧಿಕಾರಕ್ಕೆ ವರದಿ ಮಾಡುವಂತೆ ನಿರ್ಣಯಿಸಲಾಯಿತು.
  • ಸರ್ಕಾರಿ ನೌಕರರು ಬೇರೆ ಇಲಾಖೆಗೆ ವರ್ಗಾವಣೆಗೊಂಡ ಸಂದರ್ಭಗಳಲ್ಲಿ ಚಾಲನಾದೇಶ / ಮರು ಸ್ಥಳನಿಯುಕ್ತಿ ಆದೇಶ ಪಡೆಯುವಲ್ಲಿ ವಿಳಂಬವಾಗುತ್ತಿದ್ದು , ಇನ್ನು ಮುಂದೆ ಕಾಲಮಿತಿಯೊಳಗೆ ಸ್ಥಳನಿಯುಕ್ತಿ ಆದೇಶವನ್ನು ಪಡೆಯಲು ಅವಕಾಶ ಕಲ್ಪಿಸಲು ನಿರ್ಣಯಿಸಲಾಯಿತು.
  • ರಾಜ್ಯ ಸರ್ಕಾರಿ ನೌಕರರು ಜಿ.ಪಿ.ಎಫ್ ಉಳಿತಾಯ ಖಾತೆಗಳಿಂದ ಮುಂಗಡ / ಭಾಗಶ : ವಾಪಸಾತಿ ಪಡೆಯುವ ಸಂದರ್ಭದಲ್ಲಿ ಇದ್ದ ಕಠಿಣ ನಿಯಮಗಳನ್ನು ಸಡಿಲಿಸಿ ಸರಳೀಕರಣಗೊಳಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು.
  • ಕೆ.ಜಿ.ಐ.ಡಿ. ವಿಮಾ ಪಾಲಿಸಿಗಳ ಮೆಚೂರಿಟಿ ಅವದಿ 55 ವರ್ಷ ಇದ್ದು , ಇದನ್ನು 60 ವರ್ಷಗಳವರೆಗೆ ವಿಸ್ತರಿಸಿ ವಿಮಾ ಸೌಲಭ್ಯವನ್ನು ನೀಡುವುದು . 
  • ರಾಜ್ಯ ಸರ್ಕಾರಿ ನೌಕರರ ಸಾಮೂಹಿಕ ವಿಮಾ ಯೋಜನೆ ( ಜಿ.ಐ.ಎಸ್ ) ಹಾಲಿ ಇರುವ ಮೊತ್ತವನ್ನು ಹೆಚ್ಚಳಗೊಳಿಸಿ ವಿಮಾ ಹಾಗೂ ಉಳಿತಾಯ ಮೊತ್ತವನ್ನು ಗರಿಷ್ಠ ಪ್ರಮಾಣದಲ್ಲಿ ಹೆಚ್ಚಳ ಮಾಡಲು ನಿರ್ಣಯಿಸಲಾಯಿತು.
  • 2016-2018ರವರೆಗಿನ ಎರಡು ವರ್ಷಗಳ ಕೆ.ಜಿ.ಐ.ಡಿ. ಬೋನಸ್ ಪಾವತಿಯ ಪ್ರಸ್ತಾವನೆಯನ್ನು ಶೀಘ್ರ ಇತ್ಯರ್ಥಗೊಳಿಸಲು ನಿರ್ಣಯಿಸಲಾಯಿತು.
  • ಆರೋಗ್ಯ ಇಲಾಖೆಯ ಕೇಂದ್ರ ಪುರಸ್ಕೃತ 02-03 ಲೆಕ್ಕಶೀರ್ಷಿಕೆಯಲ್ಲಿ ಮಾಸಿಕ ವೇತನ ವಿಳಂಬವಾಗಿ ಆಗುತ್ತಿದ್ದು , ಇನ್ನು ಮುಂದೆ ಪ್ರತಿ ತಿಂಗಳು ವೇತನ , ಭತ್ಯೆಗಳು ಸಕಾಲದಲ್ಲಿ ಪಾವತಿಸುವ ಸಂಬಂಧ ಅಗತ್ಯ ಕ್ರಮವಹಿಸಲು ನಿರ್ಣಯಿಸಲಾಯಿತು . 
  • ರಾಜ್ಯ ಸರ್ಕಾರಿ ನೌಕರರಿಗೆ ನಗದುರಹಿತ ಚಿಕಿತ್ಸಾ ಸೌಲಭ್ಯವನ್ನು ಒದಗಿಸುವ ' ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ'ಯನ್ನು ಶೀಘ್ರ ಅನುಷ್ಠಾನಗೊಳಿಸಲು ನಿರ್ಣಯಿಸಲಾಯಿತು . ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ದೊರೆಯಬಹುದಾದ ಎಲ್ಲಾ ಸೇವಾ ಸವಲತ್ತುಗಳನ್ನು ಆನ್ ಮೂಲಕ ನೀಡುವ ವ್ಯವಸ್ಥೆಯನ್ನು ಜಾರಿಗೊಳಿಸುವ ಪ್ರಕ್ರಿಯೆ ಜಾರಿಯಲ್ಲಿದ್ದು , ಆದಷ್ಟು ಬೇಗ ಜಾರಿಗೊಳಿಸಲು ನಿರ್ಣಯಿಸಲಾಯಿತು . 
  • ಹಲವಾರು ವರ್ಷಗಳಿಂದ ತಿದ್ದುಪಡಿಯಾಗದೆ ಬಾಕಿ ಇರುವ ಎಲ್ಲಾ ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡುವುದು . ವಿಶೇಷವಾಗಿ ಶಿಕ್ಷಣ ಇಲಾಖೆಯ ಸಮಗ್ರ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿಗಳು ಪರಿಶೀಲನಾ ಹಂತದಲ್ಲಿದ್ದು , ಶೀಘ್ರವಾಗಿ ಅಂತಿಮಗೊಳಿಸಲು ನಿರ್ಣಯಿಸಲಾಯಿತು .

Comments

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

Followers