ರಾಮನಗರ ಜಿಲ್ಲಾಧ್ಯಕ್ಷರಾದ ಶ್ರೀ ಆರ್.ಕೆ. ಬೈರಲಿಂಗಯ್ಯ ಅವರ ಹೃದಯಸ್ಪರ್ಶಿ ಬೀಳ್ಕೊಡುಗೆ ಸಮಾರಂಭ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಮನಗರ ಶಾಖೆಯ ಜಿಲ್ಲಾಧ್ಯಕ್ಷರಾದ ಶ್ರೀಯುತ ಆರ್.ಕೆ.ಬೈರಲಿಂಗಯ್ಯನವರ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿರವರು ಶ್ರೀ ಆರ್.ಕೆ. ಬೈರಲಿಂಗಯ್ಯನವರನ್ನು ಅಭಿನಂದಿಸುವ ಮೂಲಕ ವಯೋನಿವೃತ್ತಿ ಜೀವನಕ್ಕೆ ಶುಭ ಕೋರಿದರು . ಸಮಾರಂಭದಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಶ್ರೀನಿವಾಸ ತಿಮ್ಮೇಗೌಡ , ಖಜಾಂಚಿಗಳಾದ ಆರ್ ಶ್ರೀನಿವಾಸ್ ಕಾರ್ಯಾಧ್ಯಕ್ಷರಾದ ಮಲ್ಲಿಕಾರ್ಜುನ ಎಂ . ಬಳ್ಳಾರಿ , ಉಪಾಧ್ಯಕ್ಷರಾದ ಗಿರಿಗೌಡ , ದಿನೇಶ್ , ಮೋಹನ್ ಕುಮಾರ್ , ಮಾಲತೇಶ್ , ಶಿವಲಿಂಗಯ್ಯ ಚೇತನ್ ರಾಜ್ ರವರು ಉಪಸ್ಥಿತರಿದ್ದರು . ರಾಮನಗರ ಜಿಲ್ಲಾ ಸಂಘದ ರಾಜ್ಯ ಪರಿಷತ್ ಸದಸ್ಯರಾದ ಶ್ರೀ ಸತೀಶ್ ಅವರು ಸ್ವಾಗತಿಸಿ , ಕಾರ್ಯದರ್ಶಿಗಳಾದ ಶ್ರೀ ರಾಜೇಗೌಡರು ವಂದಿಸಿದರು . @DinoMedia
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025 ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು. ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...