Skip to main content

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಶಿಕ್ಷಕರನ್ನು ಪ್ರತಿನಿಧಿಸುವ ಎಲ್ಲಾ ವೃಂದ ಸಂಘಗಳ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಪ್ರಾಥಮಿಕ/ಪ್ರೌಢಶಾಲಾ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಜ್ವಲಂತ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ನಿಟ್ಟಿನಲ್ಲಿ ದಿನಾಂಕ: 07-11-2021ರಂದು ನಡೆದ ಸಭೆಯಲ್ಲಿ ಕೈಗೊಂಡ ಮಹತ್ವದ ನಿರ್ಣಯಗಳು

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಶಿಕ್ಷಕರನ್ನು ಪ್ರತಿನಿಧಿಸುವ ಎಲ್ಲಾ ವೃಂದ ಸಂಘಗಳ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಪ್ರಾಥಮಿಕ/ಪ್ರೌಢಶಾಲಾ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಜ್ವಲಂತ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ನಿಟ್ಟಿನಲ್ಲಿ ದಿನಾಂಕ: 07-11-2021ರಂದು ನಡೆದ ಸಭೆಯಲ್ಲಿ ಕೈಗೊಂಡ ಮಹತ್ವದ ನಿರ್ಣಯಗಳು.


        ರಾಜ್ಯದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ (1-5ನೇ ತರಗತಿ)  ಸುಮಾರು 75 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹಿಂದಿನ ಸೇವಾ ಜೇಷ್ಠತೆಯನ್ನು ಪರಿಗಣಿಸಿ 6-8ನೇ ತರಗತಿ ಶಾಲೆಗಳಿಗೆ ಮೇಲ್ದರ್ಜೆಗೇರಿಸಲು/ವೀಲಿನಗೊಳಿಸಲು ಕಾರ್ಯಕಾರಿ ಆದೇಶ ಹೊರಡಿಸುವ ಮೂಲಕ  75 ಸಾವಿರ ಪದವೀಧರ ಶಿಕ್ಷಕರುಗಳು ಹಲವಾರು ವರ್ಷಗಳ ಸಮಸ್ಯೆಯನ್ನು ಬಗೆಹರಿಸುವುದು.

            1998-1999ರಲ್ಲಿ ಸೇವೆಗೆ ಸೇರ್ಪಡೆಗೊಂಡು, ಮಾನ್ಯ ಭಾರತ ಸರ್ವೋಚ್ಚ ನ್ಯಾಯಾಲಯಲದ ಆದೇಶದ ಹಿನ್ನೆಲೆಯಲ್ಲಿ ಸೇವೆಯಿಂದ ವಜಾಗೊಂಡ ಸುಮಾರು 4000 ಪ್ರಾಥಮಿಕ/ಪ್ರೌಡಶಾಲಾ ಶಿಕ್ಷಕರು 2003ರಲ್ಲಿ ಮರು ನೇಮಕಾತಿ ಹೊಂದಿದ್ದು, ಮರುನೇಮಕಾತಿ ಹೊಂದುವ ಪೂರ್ವದಲ್ಲಿ ಸಲ್ಲಿಸಿರುವ 4-5 ವರ್ಷಗಳ ಸೇವೆಯನ್ನು ಪರಿಗಣಿಸಿ  ಕಾಲ್ಪನಿಕವಾಗಿ ವೇತನ ನಿಗದಿಗೊಳಿಸುವುದು.  


        ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು, ಬಡ್ತಿ ಪ್ರೌಢಶಾಲಾ ಸಹ ಶಿಕ್ಷಕರು ಹಾಗೂ ಬಡ್ತಿ ಉಪನ್ಯಾಸಕರು ಪದೋನ್ನತಿ ಹೊಂದಿದ ಕಾರಣ 10,15,20,25 ಮತ್ತು 30 ವರ್ಷಗಳ ಕಾಲಮಿತಿ ಬಡ್ತಿ ಸೌಲಭ್ಯದಿಂದ ವಂಚಿತರಾಗಿರುತ್ತಾರೆ. ಇದರಿಂದಾಗಿ ಬಡ್ತಿ ಪಡೆಯದೆ ಇರುವವರಿಗಿಂತ 2-3 ವಾರ್ಷಿಕ ಕಡಿಮೆ ವೇತನ ಬಡ್ತಿಗಳನ್ನು ವೇತನ ಪಡೆಯುತ್ತಿರುವುದು ಸಾಮಾಜಿಕ ನ್ಯಾಯ ತತ್ವಕ್ಕೆ ವಿರುದ್ದವಾಗಿದೆ. ಈ ವೇತನ ತಾರತಮ್ಯವನ್ನು ಸರಿಪಡಿಸುವುದು.

            ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಪರಸ್ಪರ ವರ್ಗಾವಣೆಯ ನೀತಿಯನ್ನು ಜಾರಿಗೆ ತರುವುದು. ಹಾಗೂ ಅಂತರ ಜಿಲ್ಲಾ ವರ್ಗಾವಣೆ ಹೊಂದಲು ‘ಒಂದು ಬಾರಿಗೆ’ (ಔ.ಖಿ.S.) ವರ್ಗಾವಣೆ ಅವಕಾಶ ಕಲ್ಪಿಸುವುದು.

        ಬಿಡುವಿನ ಅವಧಿಯಲ್ಲಿ ಕರ್ತವ್ಯ ನಿರ್ವಹಿಸುವ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಿಗೆ ಗಳಿಕೆ ರಜೆ ಮಂಜೂರು ಮಾಡುವುದು ಹಾಗೂ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ವೃಂದದಿAದ ಶಿಕ್ಷಣ ಸಂಯೋಜಕರ ಹುದ್ದೆಗೆ ನೇಮಿಸುವಾಗ ಸೇವಾ ಹಿರಿತವನ್ನು ಪರಿಗಣಿಸಿ ಜೇಷ್ಠತೆ ಆಧಾರದ ಮೇಲೆ ಈ ಹಿಂದಿನAತೆ  ಪರೀಕ್ಷೆ ಇಲ್ಲದೆ ನೇಮಿಸುವುದು.


            ಸುಮಾರು 40 ವರ್ಷಗಳಿಂದ ಪರಿಷ್ಕರಣೆಯಾಗದೆ ಬಾಕಿ ಇರುವ ಶಿಕ್ಷಣ ಇಲಾಖೆಯ ಎಲ್ಲಾ ವೃಂದಗಳನ್ನೊಳಗೊAಡAತೆ ಸಮಗ್ರ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಕಾಲಮಿತಿಯೊಳಗೆ ರೂಪಿಸುವುದು.
       ದಿನಾಂಕ: 01-08-2008ರ ನಂತರ ನೇಮಕವಾದ 2008, 2010 ಮತ್ತು 2013ರ ಬ್ಯಾಚ್‌ನ ಪ್ರೌಢಶಾಲಾ ಶಿಕ್ಷಕರುಗಳಿಗೆ ಒಂದು ವಾರ್ಷಿಕ ವೇತನ ಬಡ್ತಿ ನೀಡಿ ವೇತನ ತಾರತಮ್ಯ ನಿವಾರಿಸುವುದು. 


        ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಕಾಯ್ದೆಯನ್ನು ಜಾರಿಗೆ ತರುವುದು.


        ಪ್ರೌಢಶಾಲಾ ಶಿಕ್ಷಕರಿಗೆ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವೃಂದಕ್ಕೆ ಪದೋನ್ನತಿ ನೀಡುವ ಪ್ರಕ್ರಿಯೆ ಸುಮಾರು 10 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದು, ಈಗಾಗಲೇ ಅಂತಿಮಗೊಳಿಸಿರುವ ಅರ್ಹ ಪ್ರೌಢಶಾಲಾ ಸಹ ಶಿಕ್ಷಕರ ಜ್ಯೇಷ್ಠತಾ ಪಟ್ಟಿಗೆ ಅನುಗುಣವಾಗಿ ಮುಂಬಡ್ತಿಗೆ ಕ್ರಮವಹಿಸುವುದು.


        ಈ ಮೇಲ್ಕಂಡ ಬೇಡಿಕೆ/ ಸಮಸ್ಯೆಗಳು 20 ವರ್ಷಗಳಿಂದ ಬಾಕಿ ಇದ್ದು, ಈ ಸಮಸ್ಯೆಗಳನ್ನು ಬಗೆಹರಿಸುವಂತೆ ಸರ್ಕಾರಕ್ಕೆ ಹಲವಾರು ಬಾರಿ ಮನವಿಯನ್ನು ಸಲ್ಲಿಸಿರುವುದರ ಜೊತೆಗೆ, ಸರ್ಕಾರದ ಹಂತದಲ್ಲಿ ಹಲವಾರು ಬಾರಿ ಸಭೆಗಳಾಗಿದ್ದರೂ ಯಾವುದೇ ಪ್ರಯೋಜನವಾಗಿರುವುದಿಲ್ಲ. ಅಲ್ಲದೇ, ಯಾವೊಂದು ಬೇಡಿಕೆಯೂ ಈಡೇರಿರುವುದಿಲ್ಲ. 


        ಈ ಸಂಬ0ಧವಾಗಿ  ಇಂದು ನಡೆದ  ಸಭೆಯಲ್ಲಿ  ಮೇಲ್ಕಂಡ ಬೇಡಿಕೆಗಳ ಬಗ್ಗೆ  ಸುದೀರ್ಘವಾಗಿ ಚರ್ಚಿಸಿ, ಸರ್ಕಾರವು 21 ದಿನಗಳ ಒಳಗಾಗಿ ಮೇಲ್ಕಂಡ ಬೇಡಿಕೆಗಳಿಗೆ ಪರಿಹಾರ/ನ್ಯಾಯ ದೊರಕಿಸಿಕೊಡದಿದ್ದ ಪಕ್ಷದಲ್ಲಿ ಅನಿವಾರ್ಯವಾಗಿ ರಾಜ್ಯಾದಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳನ್ನು ಬಹಿಷ್ಕರಿಸಿ ಹೋರಾಟ ಮಾಡಬೇಕೆಂಬ ತೀರ್ಮಾನವನ್ನು ಸಭೆಯಲ್ಲಿ ಭಾಗವಹಿಸಿದ ರಾಜ್ಯದ ಸುಮಾರು 5000 ಸಂಘದ ಪದಾಧಿಕಾರಿಗಳು, ಶಿಕ್ಷಕರನ್ನು ಪ್ರತಿನಿಧಿಸುವ ಎಲ್ಲಾ ಸಂಘಟನೆಗಳ ಉಪಸ್ಥಿತಿಯಲ್ಲಿ ಸರ್ವಾನುಮತದ ನಿರ್ಣಯವನ್ನು ಕೈಗೊಳ್ಳಲಾಗಿದೆ.



Comments

Post a Comment

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

Followers