ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ಹಾಗೂ ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕರರಿಗೂ ಮಂಜೂರಾತಿಗೆ ಸರ್ಕಾರವನ್ನು ಒತ್ತಾಯಿಸಿ ಪ್ರಥಮ ಹಂತದ ಕಾರ್ಯಕ್ರಮ
ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ಹಾಗೂ ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕರರಿಗೂ ಮಂಜೂರಾತಿಗೆ ಸರ್ಕಾರವನ್ನು ಒತ್ತಾಯಿಸಿ ಪ್ರಥಮ ಹಂತದ ಕಾರ್ಯಕ್ರಮ


ದಿನಾಂಕ: 10-10-2021ರಂದು ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಮಹಾಸಭೆಯು ಕೇಂದ್ರ ಸರ್ಕಾರಿ ನೌಕರರು ಹಾಗೂ ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳಲ್ಲಿ ಸಮಾನತೆಯನ್ನು ಮೂಡಿಸುವ ನಿಟ್ಟಿನಲ್ಲಿ ಸರ್ಕಾರವನ್ನು ಒತ್ತಾಯಿಸಲು ಹಂತ ಹಂತದ ಕಾರ್ಯಕ್ರಮಗಳನ್ನು ರೂಪಿಸಲು ತೀರ್ಮಾನ ಕೈಗೊಂಡಿದ್ದು, ರಾಜ್ಯ ಪರಿಷತ್ ಮಹಾಸಭೆ ತೀರ್ಮಾನದಂತೆ, ಸಂಘದ ಪ್ರಮುಖ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು 2021ನೇ ಡಿಸೆಂಬರ್ ಅಂತ್ಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ/ತಾಲ್ಲೂಕು/ಯೋಜನಾ ಶಾಖೆಗಳು ಹಾಗೂ ಕೇಂದ್ರ ಸಂಘದ ವತಿಯಿಂದ ಆಯಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಲೋಕಸಭಾ ಸದಸ್ಯರು, ವಿಧಾನ ಸಭೆ ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಮನವಿ ಸಲ್ಲಿಸಿ ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಮೂಲಕ ಬೇಡಿಕೆಗಳ ಬಗ್ಗೆ ಸರ್ಕಾರವನ್ನು ಒತ್ತಾಯಿಸಲು ತೀಮಾನಿಸಿ ಈ ನಿಟ್ಟಿನಲ್ಲಿ ಸಂಘವು ಕಾರ್ಯೋನ್ಮುಖವಾಗಿರುತ್ತದೆ.ಬೇಡಿಕೆಗಳು
• ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ಹಾಗೂ ಭತ್ಯೆಗಳನ್ನು ಮಂಜೂರು ಮಾಡುವುದು.
ಪ್ರಸ್ತುತ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳಲ್ಲಿ ಕನಿಷ್ಠ ಶೇ.35% ಗರಿಷ್ಠ ಶೇ. 135% ರಷ್ಟು ವ್ಯತ್ಯಾಸ ಉಂಟಾಗಿರುತ್ತದೆ. ಅಲ್ಲದೆ, ರಾಷ್ಟçದಲ್ಲಿ ಸುಮಾರು 25 ರಾಜ್ಯ ಸರ್ಕಾರಗಳು ತಮ್ಮ ರಾಜ್ಯದ ಸರ್ಕಾರಿ ನೌಕರಿಗೆ ಕೇಂದ್ರ ಸರ್ಕಾರಿ ನೌಕರರಿಗೆ ನೀಡುವ ವೇತನ ಭತ್ಯೆಗಳನ್ನು ಯಥಾವತ್ತಾಗಿ ಜಾರಿಮಾಡಿರುತ್ತವೆ. ‘ಸಮಾನ ಕೆಲಸಕ್ಕೆ ಸಮಾನ ವೇತನ’ ತತ್ವವನ್ನು ಪಾಲಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವೂ ಸಹ ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕರರಿಗೆ ದಿನಾಂಕ: 01-07-2022ರಿಂದ ಅನ್ವಯವಾಗುವಂತೆ ಜಾರಿಗೊಳಿಸುವುದು.
• ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು.
ನೂತನ ಪಿಂಚಣಿ ಯೋಜನೆಯಿಂದ ಬಾಧಿತರಾಗಿ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು 2.40 ಲಕ್ಷ ನೌಕರರು ಹಾಗೂ ಅವರ ಕುಟುಂಬ ವರ್ಗದ ಹಿತರಕ್ಷಣೆ ದೃಷ್ಟಿಯಿಂದ ಸರ್ಕಾರ ಈಗಾಗಲೇ ರಚಿಸಿರುವ ಅಧಿಕಾರಿಗಳ ಸಮಿತಿಯಿಂದ ಶೀಘ್ರವಾಗಿ ಪೂರಕವಾದ ವರದಿಯನ್ನು ಪಡೆದು ರಾಷ್ಟಿçÃಯ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಈ ಹಿಂದಿನ ನಿಶ್ಚಿತ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು.
• ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವುದು.
ರಾಜ್ಯ ಸರ್ಕಾರ ಹಲವು ವರ್ಷಗಳ ಹಿಂದೆ ಮಂಜೂರು ಮಾಡಿರುವ 7,79,439 ಹುದ್ದೆಗಳಲ್ಲಿ 5,09,867 ಹುದ್ದೆಗಳು ಭರ್ತಿಯಾಗಿದ್ದು, ಖಾಲಿ ಇರುವ 2,69,572 ಹುದ್ದೆಗಳ ಕಾರ್ಯಬಾರವನ್ನು ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರೇ ನಿರ್ವಹಿಸುತ್ತಿದ್ದು, ಕಾಲಮಿತಿಯೊಳಗೆ ಶ್ರೀಸಾಮಾನ್ಯರಿಗೆ ಅಗತ್ಯ ಸೇವೆಗಳನ್ನು ಕಲ್ಪಿಸಲು ಕಷ್ಟಸಾಧ್ಯವಾಗಿದ್ದು, ರಾಜ್ಯದ ಜನಸಂಖ್ಯೆಗನುಗುಣವಾಗಿ ಹುದ್ದೆಗಳನ್ನು ಮಂಜೂರು ಮಾಡಿ ಖಾಲಿಯಿರುವ ಹುದ್ದೆಗಳನ್ನು ಭರ್ತಿಮಾಡುವುದು.
• ಪ್ರಾಥಮಿಕ/ಪ್ರೌಢಶಾಲಾ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಜ್ವಲಂತ ಸಮಸ್ಯೆಗಳನ್ನು ನಿವಾರಿಸುವುದು.
ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರು ಹಾಗೂ ಉಪನ್ಯಾಸಕರು ಹಲವು ವರ್ಷಗಳಿಂದ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ನಿವಾರಿಸುವುದರ ಜೊತೆಗೆ 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಬಡ್ತಿಗಳ ಮಂಜೂರಾತಿ ಗ್ರಾಮೀಣ ಕೃಪಾಂಕ ಶಿಕ್ಷಕರಿಗೆ ಹಿಂದಿನ ಸಚಿವ ಸಂಪುಟದ ನಿರ್ಣಯದಂತೆ ಸೌಲಭ್ಯಗಳನ್ನು ಕಲ್ಪಿಸುವುದು. -ಸಿ.ಎಸ್.ಷಡಾಕ್ಷರಿ, ರಾಜ್ಯಾಧ್ಯಕ್ಷರು
Comments
Post a Comment