ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವ ಕಡೆಯ ದಿನಾಂಕ 31-07-2022 ವರೆಗೆ ವಿಸ್ತರಣೆ ....
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವ ಕಡೆಯ ದಿನಾಂಕ 31-07-2022 ವರೆಗೆ ವಿಸ್ತರಣೆ .... ಆತ್ಮೀಯ ನೌಕರ ಬಾಂಧವರೇ ...... 2022 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ . 90 % ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಸಲ್ಲಿಸಲು ದಿನಾಂಕ : 15-07-2022ರವರೆಗೆ ನಿಗದಿಪಡಿಸಲಾಗಿತ್ತು . CBSE & ICSE ವಿದ್ಯಾರ್ಥಿಗಳಿಗೂ ಸಹ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸುವ ಹಿನ್ನಲೆಯಲ್ಲಿ ಆನ್‌ಲೈನ್ ಮೂಲಕ ಅರ್ಜಿಸಲ್ಲಿಸುವ ದಿನಾಂಕವನ್ನು 31-07-2022ರವರೆಗೆ ವಿಸ್ತರಿಸಲಾಗಿದೆ . ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು . https://bit.ly/ksgeaprathibapuraskara2022 ಅಥವಾ 9902135813 ಗೆ “ ksgeapp2022 ” ಎಂದು ವ್ಯಾಟ್ಸ್‌ಆಪ್ ಮೇಸೆಜ್ ಕಳುಹಿಸಿ ಲಿಂಕ್ ಪಡೆಯಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-07-2022 . ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು . ವಿದ್ಯಾರ್ಥಿಯ ತಂದೆ / ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು . ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮಕವಾಗಿರುವ ನೌಕರರು ಅರ್ಜಿ ಸಲ್ಲಿಸುವಂತ...