ಗ್ರಾಮೀಣ ಕೃಪಾಂಕದಡಿ ವಿಶೇಷ ನಿಯಮದನ್ವಯ ನೇಮಕಗೊಂಡ ಶಿಕ್ಷಕರ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ನಿಟ್ಟಿನಲ್ಲಿ ದಿನಾಂಕ : 06-07-2022ರಂದು ಮಾನ್ಯ ಶಿಕ್ಷಣ ಸಚಿವರಾದ ಶ್ರೀ ಬಿ.ಸಿ.ನಾಗೇಶ್ ರವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸಭೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿರವರ ಮನವಿಯಂತೆ ಗ್ರಾಮೀಣ ಕೃಪಾಂಕದಡಿ ವಿಶೇಷ ನಿಯಮದನ್ವಯ ನೇಮಕಗೊಂಡ ಶಿಕ್ಷಕರ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ನಿಟ್ಟಿನಲ್ಲಿ ದಿನಾಂಕ : 06-07-2022ರಂದು ಮಾನ್ಯ ಶಿಕ್ಷಣ ಸಚಿವರಾದ ಶ್ರೀ ಬಿ.ಸಿ.ನಾಗೇಶ್ ರವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸಭೆ ಜರುಗಿತು .
ಈ ಸಭೆಯಲ್ಲಿ ಈ ಕೆಳಕಂಡ ನಿರ್ಣಯಗಳನ್ನು ಕೈಗೊಳ್ಳಲಾಯಿತು .
1 ) ಗೌರವಾನ್ವಿತ ಸುಪ್ರೀಂ ಕೋರ್ಟ್ ಹಾಗೂ ಕೆ.ಎ.ಟಿ ನ್ಯಾಯಾಲಯದ ನಿರ್ದೇಶನದಂತೆ ಪರಿಷ್ಕೃತ ಆಯ್ಕೆ ಪಟ್ಟಿಯನ್ನು ತಯಾರಿಸಿ ಅರ್ಹ ಕೃಪಾಂಕ ಶಿಕ್ಷಕರುಗಳಿಗೆ ನ್ಯಾಯ ದೊಕಿಸಿಕೊಡಲು ಹಾಗೂ ಲಭ್ಯವಾಗುವ ಸೇವಾ ಸೌಲಭ್ಯಗಳನ್ನು ಪೂರ್ವಾನ್ವಯವಾಗುವಂತೆ ಮಂಜೂರು ಮಾಡುವ ಬಗ್ಗೆ ಪರಿಶೀಲಿಸಿ ಕೃಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಯಿತು .
2 ) ತತ್ಪರಿಣಾಮ , ಪರಿಷ್ಕೃತ ಪಟ್ಟಿ ಪ್ರಕಾರ ಸ್ಥಾನ ಪಡೆಯದೆ ಗ್ರಾಮೀಣ ಕೃಪಾಂಕದಡಿ ವಿಶೇಷ ನಿಯಮಗಳನ್ವಯ ನೇಮಕಾತಿ ಹೊಂದುವಂತಹ ಶಿಕ್ಷಕರಿಗೆ ದಿನಾಂಕ : 13-03-2013ರಂದು ನಡೆದ ಸಚಿವ ಸಂಪುಟದ ನಿರ್ಣಯದಂತ 2 ವಾರ್ಷಿಕ ವೇತನ ಬಡ್ತಿಗಳನ್ನು ಪೂರ್ವಾನ್ವಯವಾಗುವಂತೆ ಮಂಜೂರು ಮಾಡುವ ಬಗ್ಗೆ ಅಗತ್ಯ ಮಾಹಿತಿ ಪಡೆದು ಕ್ರಮವಹಿಸಲು ಸೂಚಿಸಿದರು .
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿರವರು , ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ . ಸೆಲ್ವಕುಮಾರ್ , ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಕೇಂದ್ರ ಸಂಘದ ಗೌರವಾಧ್ಯಕ್ಷರಾದ ಶ್ರೀ ವೆಂಕಟೇಶಯ್ಯ , ಹಿರಿಯ ಉಪಾಧ್ಯಕ್ಷರಾದ ಶ್ರೀ ಎಂ.ವಿ. ರುದ್ರಪ್ಪ , ಕಾಯದರ್ಶಿಗಳಾದ ಶ್ರೀ ಶಿವಲಿಂಗಯ್ಯ ಹಾಗೂ ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು .
Comments
Post a Comment