ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳನ್ನು ಪರಿಷ್ಕರಿಸಲು ಅಕ್ಟೋಬರ್‌ನಲ್ಲಿ ಪರಿಷ್ಕರಣೆ - ಸಿ.ಎಂ. ಬಸವರಾಜ ಎಸ್. ಬೊಮ್ಮಾಯಿರವರಿಂದ ಘೋಷಣೆ
ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳನ್ನು ಪರಿಷ್ಕರಿಸಲು ಅಕ್ಟೋಬರ್‌ನಲ್ಲಿ ಆಯೋಗ / ಅಧಿಕಾರಿಗಳ ಸಮಿತಿಯನ್ನು ರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ರಾಜ್ಯ ಸರ್ಕಾರಿ ನೌಕರರ ದಿನಾಚರಣೆ’ ಉದ್ಘಾಟಿಸಿ ಅವರು ಮಾತನಾಡಿದರು.
‘ಸರ್ಕಾರಿ ನೌಕರರ ಬೇಡಿಕೆ ಗಳಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ. ನೌಕರರಿಗೆ ಆರೋಗ್ಯ ವಿಮೆ ಒದಗಿಸುವ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಕ್ಕೆ ಈಗಾಗಲೇ ಆದೇಶ ಹೊರಡಿಸಲಾಗಿದೆ’ ಎಂದರು.
Comments
Post a Comment