ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್. ಬೊಮ್ಮಾಯಿರವರಿಂದ ಅಕ್ಟೋಬರ್-2022ರ ಮಾಹೆಯಲ್ಲಿಯೇ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆಗೆ ವೇತನ ಸಮಿತಿ/ಆಯೋಗ ರಚಿಸಲು ಅಧಿಕಾರಿಗಳಿಗೆ ಸೂಚನೆ-ಅಭಿನಂದನೆಗಳು
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್. ಬೊಮ್ಮಾಯಿರವರಿಂದ ಅಕ್ಟೋಬರ್-2022ರ ಮಾಹೆಯಲ್ಲಿಯೇ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆಗೆ ವೇತನ ಸಮಿತಿ/ಆಯೋಗ ರಚಿಸಲು ಅಧಿಕಾರಿಗಳಿಗೆ ಸೂಚನೆ-ಅಭಿನಂದನೆಗಳು
ದಿನಾಂಕ:14-10-2022ರಂದು ಮಾನ್ಯ ಮುಖ್ಯಮಂತ್ರಿಗಳ ಗೃಹ ಕಛೇರಿ “ಕೃಷ್ಣ”ದಲ್ಲಿ ನಡೆದ ಸಭೆಯಲ್ಲಿ ರಾಜ್ಯ ಸರ್ಕಾರದ “ಪುಣ್ಯಕೋಟಿ ದತ್ತು ಯೋಜನೆ'ಗೆ ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಇತರೆ ಸಂಸ್ಥೆಗಳ ನೌಕರರ ದೇಣಿಗೆ ನೀಡುವ ಒಪ್ಪಿಗೆ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಯಿತು.
ಈ ಚರ್ಚೆ ಸಂದರ್ಭದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ಇದೇ ತಿಂಗಳಲ್ಲಿ ವೇತನ ಮತ್ತು ಭತ್ಯೆಗಳ ಪರಿಷ್ಕರಣೆಗೆ ವೇತನ ಸಮಿತಿ/ಆಯೋಗ ರಚಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು ಹಾಗೂ ವೇತನ ಸಮಿತಿ/ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನ ಮಾಡುವ ಸಂದರ್ಭದಲ್ಲಿ ವೇತನ ಭತ್ಯೆಗಳ ಜೊತೆ ನೌಕರರಿಗೆ ಇನ್ಸೆಂಟೀವ್ ಸೌಲಭ್ಯಗಳನ್ನು ನೀಡುವ ಉದ್ದೇಶವನ್ನು ಹೊಂದಲಾಗಿದ್ದು, ಆ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.
ಎನ್.ಪಿ.ಎಸ್. ರದ್ದುಪಡಿಸುವ ಬೇಡಿಕೆಗೆ ಸ್ಪಂದಿಸಿದ ಸನ್ಮಾನ್ಯ ಮುಖ್ಯ ಮಂತ್ರಿಗಳು ಈ ಸಂಬಂಧ ಅನ್ಯ ರಾಜ್ಯಗಳಿಂದ ಮಾಹಿತಿಯನ್ನು ಸಂಗ್ರಹಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವ ಸ್ಪಷ್ಟ ಭರವಸೆಯನ್ನು ನೀಡಿರುತ್ತಾರೆ. ಇದಕ್ಕಾಗಿ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಸಮಸ್ತ ರಾಜ್ಯ ಸರ್ಕಾರಿ ನೌಕರರ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇವೆ.
ಸಭೆಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿರವರು, ಪಶುಸಂಗೋಪನ ಸಚಿವರಾದ ಶ್ರೀ ಪ್ರಭು ಚವ್ಹಾಣ್, ಪಶುಸಂಗೋಪನೆ ಇಲಾಖೆ ಕಾರ್ಯದರ್ಶಿಗಳಾದ ಶ್ರೀಮತಿ ಸಲ್ಮಾ, ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀ ಪಿ.ಸಿ. ಜಾಫರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿ, ಕಾರ್ಯಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಬಿ. ಬಳ್ಳಾರಿ, ಗೌರವಾಧ್ಯಕ್ಷರಾದ ಶ್ರೀ ವೆಂಕಟೇಶಯ್ಯ, ಹಿರಿಯ ಉಪಾಧ್ಯಕ್ಷರಾದ ಶ್ರೀ ಎಂ.ವಿ. ರುದ್ರಪ್ಪ, ಶ್ರೀ ಎಸ್. ಬಸವರಾಜು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶಂಭುಲಿಂಗನಗೌಡ ಪಾಟೀಲ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಬಿ.ಸಿದ್ದಬಸಪ್ಪ ಹಾಗೂ ಪದಾಧಿಕಾರಿಗಳು, ಬಿ.ಬಿ.ಎಂ.ಪಿ, ಬಿ.ಡಬ್ಲ್ಯೂ.ಎಸ್.ಎಸ್.ಬಿ ನೌಕರರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ವಿವಿಧ ನಿಗಮ ಮಂಡಳಿ, ವೃಂದ ಸಂಘಗಳ ಅಧ್ಯಕ್ಷರು ಭಾಗವಹಿಸಿದ್ದರು.
ರಚನೆ ಆಗಿಲ್ಲ ಆದಮೇಲೆ ಶುಭಾಶಯಗಳು ತಿಳಿಶೋಣ
ReplyDeleteಭ್ರಮೆ...NpS ರದ್ದು
ReplyDeleteಬರೀ ಸೂಚನೆ..!! ರಚನೆಯಾದ ಮೇಲೆ ಧನ್ಯವಾದ ತಿಳಿಸೋಣ..! ಅದೂ ಕೇಂದ್ರ ಮಾದರಿ ಆದರೆ ಮಾತ್ರ
ReplyDeleteBari helta iratare ond kelsa 10 sal heltare heli heli election ge hogi bidatare.aste yav Kendra madari illa enilla bidi.
ReplyDeleteAfter Anouncement we will hounring,them,
ReplyDeleteವೇತನ ತಾರತಮ್ಯ ನಿವಾರಣೆ ಕೇಂದ್ರ ಮಾದರಿ ವೇತನ ಜಾರಿ ಇದು ಪ್ರಮುಖ ಬೇಡಿಕೆ ನಿರೀಕ್ಷೆ ಇಟ್ಟುಕೊಳ್ಳಬಹುದೇ
DeleteClick here for More Kannada Movie Updates
ReplyDelete