Skip to main content

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

“ಒಂದೇ ರಾಷ್ಟ್ರ – ಒಂದೇ ಪಿಂಚಣಿ” : ಹಳೇ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ ಸಂಬಂಧ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ NOPRUF (National Old Pension Restoration United Front) ಸಂಘಟನೆಯ ನಿಯೋಗದ ಪದಾಧಿಕಾರಿಗಳ ಭೇಟಿ.

 “ಒಂದೇ ರಾಷ್ಟ್ರ – ಒಂದೇ ಪಿಂಚಣಿ” : ಹಳೇ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ ಸಂಬAಧ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ NOPRUF (National Old Pension Restoration United Front) ಸಂಘಟನೆಯ ನಿಯೋಗದ ಪದಾಧಿಕಾರಿಗಳ ಭೇಟಿ.


ನಮ್ಮ ಭಾರತ ದೇಶದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ  ಸುಮಾರು 75 ಲಕ್ಷ ಓPS ಯೋಜನೆಗೆ ಒಳಪಡುವ ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದು, ಇವರಿಗೆ ಸಂದ್ಯಾಕಾಲದ ಬದುಕು ಅನಿಶ್ಚಿತತೆಯಿಂದ ಕೂಡಿದ್ದು, ಜೀವನ ಭದ್ರತೆ ಇರುವುದಿಲ್ಲ.     ಈ ಯೋಜನೆಯು ಕೇಂದ್ರ ಸರ್ಕಾರದ PFRDA (The Pension Fund Regulatory & Development Authority ) ಪ್ರಾಧಿಕಾರದ ವ್ಯಾಪ್ತಿಗೆ ಒಳಪಟ್ಟಿರುತ್ತದೆ. 


ಈಗಾಗಲೇ ದೇಶದ 3 ರಾಜ್ಯಗಳಲ್ಲಿ NPS ಯೋಜನೆಯನ್ನು ರದ್ದುಪಡಿಸುವ ತೀರ್ಮಾನವನ್ನು ಅಲ್ಲಿನ ಸರ್ಕಾರಗಳು ಕೈಗೊಂಡಿರುತ್ತವೆ. NPS ಯೋಜನೆಯನ್ನು ರದ್ದುಪಡಿಸಲು ತೀರ್ಮಾನಿಸಿರುವ ರಾಜ್ಯಗಳಲ್ಲಿ ಅಲ್ಲಿನ ನೌಕರರಿಂದ ಕಟಾವಣೆಯಾಗಿರುವ NPS ವಂತಿಕೆ ಹಣವನ್ನು ನೌಕರರಿಗೆ ಮರುಪಾವತಿಸಲು ಹಾಗೂ NPS ರದ್ದುಪಡಿಸಲು PFRDA ಕಾಯ್ದೆಯ ನಿಯಮಗಳು ಅಡ್ಡಿಯಾಗಿರುತ್ತವೆ. 

 

ಮುಂದಿನ ದಿನಗಳಲ್ಲಿ ಬೇರೆ ರಾಜ್ಯಗಳಲ್ಲಿ NPS ಯೋಜನೆಯನ್ನು ರದ್ದುಪಡಿಸಿದರೂ ಸಹ ವಂತಿಕೆ ಹಣವನ್ನು ಹಿಂಪಡೆಯಲು ಈ ಕಾಯಿದೆಯಲ್ಲಿ ಅವಕಾಶವಿರುವುದಿಲ್ಲ.  ಕಾರಣ PFRDA ಕಾಯ್ದೆಗೆ ಸೂಕ್ತ ತಿದ್ದುಪಡಿಗಳನ್ನು ತರುವ ಅಧಿಕಾರ ಕೇಂದ್ರ ಸರ್ಕಾರದ್ದಾಗಿರುತ್ತದೆ. ಹಾಗೂ ಈ ಕಾಯ್ದೆಗೆ ತಿದ್ದುಪಡಿ ಮಾಡುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇರುವುದಿಲ್ಲ.


 ಆದ್ದರಿಂದ PFDRA ಕಾಯ್ದೆಗೆ ಈ ಕೆಳಕಂಡ ಸೂಕ್ತ ತಿದ್ದುಪಡಿ ತರಬೇಕಾಗಿದೆ.

    ದೇಶದ ಎಲ್ಲಾ ರಾಜ್ಯಗಳ NPS & OPS ನೌಕರರು “ಒಂದೇ ರಾಷ್ಟ್ರ- ಒಂದೇ ಪಿಂಚಣಿ” ಎಂಬ ಘೋಷಣೆಯೊಂದಿಗೆ ಒಟ್ಟಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ  “PFRDA ಕಾಯ್ದೆಯಲ್ಲಿ  ಸರ್ಕಾರ  ಮತ್ತು  ಸರ್ಕಾರಿ  ಸ್ವಾಮ್ಯದ  ಎಲ್ಲಾ  ನೌಕರರನ್ನು                

ಈ ಕಾಯಿದೆ ವ್ಯಾಪ್ತಿಯಿಂದ ಕೈಬಿಡುವ” ವಿಧೇಯಕವನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿ ಸೂಕ್ತ ತಿದ್ದುಪಡಿಯೊಂದಿಗೆ ಎಲ್ಲಾ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆ ಮರುಸ್ಥಾಪನೆ ಮಾಡುವುದು.


ಮೇಲ್ಕಂಡಲ್ಕಂತೆ ಎಲ್ಲಾ ರಾಜ್ಯಗಳಲ್ಲೂ OPS ಯೋಜನೆಯನ್ನು ಮರು ಜಾರಿಗೊಳಿಸಲು ಕೇಂದ್ರ ಸರ್ಕಾರದ ಮೇಲೆ ಹಕ್ಕೊತ್ತಾಯದ ಹೋರಾಟ ಮಾಡುವ ಉದ್ದೇಶದಿಂದ ದೇಶದ ಎಲ್ಲಾ ರಾಜ್ಯಗಳ ನೌಕರರ ಸಂಘಟನೆಗಳನ್ನು ಒಗ್ಗೂಡಿಸುವ ಸಲುವಾಗಿ ರಾಷ್ಟ್ರೀಯ ಹಳೆ ಪಿಂಚಣಿ ಮರುಸ್ಥಾಪನಾ ಯುನೈಟೆಡ್ ಫ್ರಂಟ್' (NOPRUF) ಸಂಘಟನೆಯು “ಹಳೆ ಪಿಂಚಣಿ ಮರುಸ್ಥಾಪನೆ ನ್ಯಾಯ ಯಾತ್ರೆ” ಯನ್ನು ಅಕ್ಟೋಬರ್ 09 ರಿಂದ ಕಾಶ್ಮೀರದಿಂದ ಆರಂಭವಾಗಿ ಈವರೆಗೆ 25 ರಾಜ್ಯಗಳಲ್ಲಿ ಹಮ್ಮಿಕೊಂಡು 19ನೇ ಅಕ್ಟೋಬರ್ 2022ರಂದು ಕನ್ಯಾಕುಮಾರಿಯಲ್ಲಿ ಯಾತ್ರೆಯು ಕೊನೆಗೊಳ್ಳಲಿದೆ ಎಂದು NOPRUF ಈ ಸಂಘಟನೆಯ ಅಧ್ಯಕ್ಷರಾದ ಶ್ರೀ ಬಿ.ಪಿ. ಸಿಂಗ್ ರಾವತ್ ತಿಳಿಸಿದರು. ಹಾಗೂ ಇಂದು ದಿ: 18-10-22 ರಂದು ಬೆಂಗಳೂರಿಗೆ ಸರ್ಕಾರಿ ನೌಕರರ ಸಂಘಕ್ಕೆ ಭೇಟಿ ನೀಡಿ ಅಲ್ಲಿನ ಅಧ್ಯಕ್ಷರು ಪದಾಧಿಕಾರಿಗಳೊಂದಿಗೆ ಮುಂದಿನ ಹೋರಾಟದ ಬಗ್ಗೆ ಚರ್ಚಿಸಿ ನಮ್ಮ ಈ ಹೋರಾಟಕ್ಕೆ ಬೆಂಬಲವನ್ನು ಕೋರಿದರು.


ಸಭೆಯಲ್ಲಿ ಈ ಕೆಳಕಂಡoತೆ ಚರ್ಚಿಸಿದರು:


1. ಸಂಘಟನೆಯ ಹೋರಾಟವನ್ನು ಕೇಂದ್ರ ಸರ್ಕಾರದ ಗಮನಸೆಳೆಯುವಂತೆ ಮಾಡುವುದು.

2. ಮುಂದಿನ ಲೋಕಸಭಾ ಚುನಾವಣೆ ಪೂರ್ವದಲ್ಲಿ ಎಲ್ಲಾ ರಾಷ್ಟಿçÃಯ ಪಕ್ಷಗಳು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ NPS  ರದ್ದುಗೊಳಿಸುವ ವಿಷಯವನ್ನು ಪ್ರಸ್ತಾಪಿಸುವುದು.

3. ನವಂಬರ್-2022ರ ಮಾಹೆಯಲ್ಲಿ ಹೈದ್ರಾಬಾದ್ ನಲ್ಲಿ ಎಲ್ಲಾ ರಾಜ್ಯಗಳಲ್ಲಿ ಎಲ್ಲಾ ಸರ್ಕಾರಿ ನೌಕರರನ್ನು ಪ್ರತಿನಿಧಿಸುವ ಸರ್ಕಾರದ ಮಾನ್ಯತೆ ಪಡೆದ ಮಾತೃ ಸಂಘಟನೆಗಳೊAದಿಗೆ ಒಟ್ಟುಗೂಡಿ ರಾಷ್ಟ್ರ ಮಟ್ಟದ ಸಭೆಯನ್ನು ಏರ್ಪಡಿಸಿ OPS ಮರುಸ್ಥಾಪನೆಗಾಗಿ ಮುಂದಿನ ಹೋರಾಟದ ರೂಪು-ರೇಷಗಳನ್ನು ನಿರ್ಣಯಿಸುವುದು.

4. ನಂತರದಲ್ಲಿ ಸೂಕ್ತ ನಿರ್ಣಯ ಸಭೆಯಲ್ಲಿ ಕೈಗೊಂಡು ರಾಷ್ಟçದಾದ್ಯಂತ ಹಂತ ಹಂತವಾಗಿ ಕೇಂದ್ರ ಸರ್ಕಾರದ ಗಮನ ಸೆಳೆಯುವುದು ಹಾಗೂ ಅನಿವಾರ್ಯ ಸಂಧರ್ಬದಲ್ಲಿ ದೇಶದಾದ್ಯಂತ ಏಕ ಕಾಲದಲ್ಲಿ ಮುಷ್ಕರ ಕೈಗೊಳ್ಳುವ ಉದ್ದೇಶವನ್ನು ಹೊಂದಲಾಗಿದೆ ಎಂದು ಸಭೆಯಲ್ಲಿ ತಿಳಿಸಿದರು.

ದಿನಾಂಕ:18-10-2022 ರಂದು “ಹಳೆ ಪಿಂಚಣಿ ಮರುಸ್ಥಾಪನೆ ನ್ಯಾಯ ಯಾತ್ರೆ” ಯನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ  ರಾಜ್ಯಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಸ್ವಾಗತಿಸಿ, NPS  ರದ್ದುಗೊಳಿಸಲು  NOPRUF  ಸಂಘಟನೆಯು ದೇಶದಾದ್ಯಂತ ಕೈಗೊಂಡಿರುವ ಯಾತ್ರೆ ಹಾಗೂ ಹೋರಾಟಕ್ಕೆ ಬೆಂಬಲವನ್ನು ಸೂಚಿಸಲಾಯಿತು. 


ಈ ಸಂದರ್ಭದಲ್ಲಿNOPRUF ಸಂಘಟನೆಯ ರಾಷ್ಟ್ರ ಅಧ್ಯಕ್ಷರಾದ ಶ್ರೀ ಬಿ.ಪಿ. ಸಿಂಗ್ ರಾವತ್, ಗೌರವ ಸಲಹೆಗಾರರು ಹಾಗೂ ತೆಲಂಗಾಣ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ       ಶ್ರೀ ಸಂಪತ್ ಕುಮಾರ್ ಸ್ವಾಮಿ, ರಾಷ್ಟ್ರೀಯಾ ಉಪಾಧ್ಯಕ್ಷರಾದ ಶ್ರೀ ವಿನೋದ್ ಕನೋಜಿಯಾ, ಮತ್ತು ಉತ್ತರಪ್ರದೇಶ ನೌಕರರ ಸಂಘದ ಕಾರ್ಯದರ್ಶಿಗಳಾದ       ಶ್ರೀ ಭರತೇಂದು ಯಾದವ್, ಹಾಗೂ ತೆಲಂಗಾಣ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿಗಳಾದ ಡಾ. ಜಿ ನಿರ್ಮಲರವರು ಭಾಗವಹಿಸಿದ್ದರು. 


ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ            ಶ್ರೀ ಸಿ.ಎಸ್. ಷಡಾಕ್ಷರಿರವರು, ಕಾರ್ಯಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಬಿ. ಬಳ್ಳಾರಿ, ಹಿರಿಯ ಉಪಾಧ್ಯಕ್ಷರಾದ ಎಂ.ವಿ. ರುದ್ರಪ್ಪ, ಕಾರ್ಯದರ್ಶಿಗಳಾದ ಡಾ. ನೆಲ್ಕುದ್ರಿ ಸದಾನಂದ, ಜಂಟಿ ಕಾರ್ಯದರ್ಶಿಗಳಾದ ಶ್ರೀ ಹರೀಶ್ ಮತ್ತು ಹೀರಾನಾಯಕ್, ಸಂಘಟನಾ ಕಾರ್ಯದರ್ಶಿಗಳಾದ ಸದಾನಂದ ಮತ್ತು ಶಂಕರಪ್ಪ ಹಾಗೂ ರಾಜ್ಯ ಪರಿಷತ್ ಸದಸ್ಯರಾದ ಶ್ರೀ ಹೆಚ್.ಎ. ನಾಗೇಶ್, ಚೇತನ್ ಕುಮಾರು ಹಾಗೂ ಕೇಂದ್ರ ಸಂಘದ ಹಲವು  ಪಧಾದಿಕಾರಿಗಳು ಉಪಸ್ಥಿತರಿದ್ದರು.


    ಶ್ರೀ ಬಿ.ಪಿ. ಸಿಂಗ್ ರಾವತ್  ಶ್ರೀ ವಿನೋದ್ ಕನೋಜಿಯಾ   ಶ್ರೀ ಸಂಪತ್ ಕುಮಾರ್ ಸ್ವಾಮಿ,

       9412232394           7985759373          9949321538.

Comments

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

Followers