ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ. https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025 ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು. ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...