ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಶೇ. 4% ತುಟ್ಟಿ ಭತ್ಯೆ ಬಿಡುಗಡೆ ಮಾನ್ಯ ಮುಖ್ಯಮಂತ್ರಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಅಭಿನಂದನೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ದಿನಾಂಕ 01-01-2023ರಿಂದ ಬಾಕಿ ಇದ್ದ ತುಟ್ಟಿಭತ್ಯೆ ಬಿಡುಗಡೆ ಮಾಡುವ ಸಂಘದ ಮನವಿಗೆ ಸ್ಪಂದಿಸಿದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀಯುತ ಸಿದ್ಧರಾಮಯ್ಯರವರಿಗೆ ಧನ್ಯವಾಧಗಳನ್ನು ಸಲ್ಲಿಸುತ್ತೇವೆ. ಶೇ. 4% ರಷ್ಟು ತುಟ್ಟಿಭತ್ಯೆಯನ್ನು ಬಿಡುಗಡೆ ಮಾಡಲಾಗಿದ್ದು, ಇದರಿಂದ ಸರ್ಕಾರಿ ನೌಕರರ ಮೂಲ ವೇತನದಲ್ಲಿ ಶೇ. 31% ರಿಂದ ಶೇ. 35% ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿದಂತಾಗಿದೆ. ಈ ತುಟ್ಟಿಭತ್ಯೆಯು ದಿನಾಂಕ: 01-01-2023ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಮಂಜೂರು ಮಾಡಿ ಸರ್ಕಾರ ಇಂದು ಆದೇಶ ಹೊರಡಿಸಿರುತ್ತದೆ. (ಆದೇಶದ ಪ್ರತಿ ಲಗತ್ತಿಸಿದೆ) ಇದರಿಂದ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು 5.20 ಲಕ್ಷ ಸರ್ಕಾರಿ ನೌಕರರು, ನಿಗಮ- ಮಂಡಳಿ-ಅನುದಾನಿತ ಸಂಸ್ಥೆಗಳ ಸುಮಾರು 3.00 ಲಕ್ಷ ನೌಕರರು, ಸುಮಾರು 4.50 ಲಕ್ಷ ನಿವೃತ್ತ ನೌಕರರಿಗೆ ಅನುಕೂಲವಾಗಲಿದೆ. ಸಂಘದ ಮನವಿಗೆ ಕೂಡಲೇ ಸ್ಪಂದಿಸಿ ತುಟ್ಟಿಭತ್ಯೆಯನ್ನು ಮಂಜೂರು ಮಾಡಿರುವ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಸರ್ಕಾರದ ಆರ್ಥಿಕ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸಮಸ್ತ ರಾಜ್ಯ ಸರ್ಕಾರಿ ನೌಕರರ ಪರವಾಗಿ ಸಂಘವ...
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025 ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು. ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...