ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಶೇ. 4% ತುಟ್ಟಿ ಭತ್ಯೆ ಬಿಡುಗಡೆ ಮಾನ್ಯ ಮುಖ್ಯಮಂತ್ರಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಅಭಿನಂದನೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ದಿನಾಂಕ 01-01-2023ರಿಂದ ಬಾಕಿ ಇದ್ದ ತುಟ್ಟಿಭತ್ಯೆ ಬಿಡುಗಡೆ ಮಾಡುವ ಸಂಘದ ಮನವಿಗೆ ಸ್ಪಂದಿಸಿದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀಯುತ ಸಿದ್ಧರಾಮಯ್ಯರವರಿಗೆ ಧನ್ಯವಾಧಗಳನ್ನು ಸಲ್ಲಿಸುತ್ತೇವೆ.
ಶೇ. 4% ರಷ್ಟು ತುಟ್ಟಿಭತ್ಯೆಯನ್ನು ಬಿಡುಗಡೆ ಮಾಡಲಾಗಿದ್ದು, ಇದರಿಂದ ಸರ್ಕಾರಿ ನೌಕರರ ಮೂಲ ವೇತನದಲ್ಲಿ ಶೇ. 31% ರಿಂದ ಶೇ. 35% ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿದಂತಾಗಿದೆ. ಈ ತುಟ್ಟಿಭತ್ಯೆಯು ದಿನಾಂಕ: 01-01-2023ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಮಂಜೂರು ಮಾಡಿ ಸರ್ಕಾರ ಇಂದು ಆದೇಶ ಹೊರಡಿಸಿರುತ್ತದೆ. (ಆದೇಶದ ಪ್ರತಿ ಲಗತ್ತಿಸಿದೆ)
ಇದರಿಂದ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು 5.20 ಲಕ್ಷ ಸರ್ಕಾರಿ ನೌಕರರು, ನಿಗಮ- ಮಂಡಳಿ-ಅನುದಾನಿತ ಸಂಸ್ಥೆಗಳ ಸುಮಾರು 3.00 ಲಕ್ಷ ನೌಕರರು, ಸುಮಾರು 4.50 ಲಕ್ಷ ನಿವೃತ್ತ ನೌಕರರಿಗೆ ಅನುಕೂಲವಾಗಲಿದೆ.
ಸಂಘದ ಮನವಿಗೆ ಕೂಡಲೇ ಸ್ಪಂದಿಸಿ ತುಟ್ಟಿಭತ್ಯೆಯನ್ನು ಮಂಜೂರು ಮಾಡಿರುವ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಸರ್ಕಾರದ ಆರ್ಥಿಕ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸಮಸ್ತ ರಾಜ್ಯ ಸರ್ಕಾರಿ ನೌಕರರ ಪರವಾಗಿ ಸಂಘವು ಧನ್ಯವಾದಗಳನ್ನು ಸಲ್ಲಿಸುತ್ತದೆ.
Comments
Post a Comment